ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಸ್ವರಾಜ್ಯ ತಂಡದಿಂದ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣದ 30ನೇ ಕಾರ್ಯಕ್ರಮ ನಡೆಯಿತು. ಉಡುಪಿ ಹಾಜಿ ಅಬ್ದುಲ್ಲಾ ಸಾಹೇಬ್ ಅವರ ಮನೆಗೆ ‘ಸ್ವಾತಂತ್ರ್ಯ ಹೋರಾಟಗಾರರ ಮನೆ’ ನಾಮಫಲಕ ಅನಾವರಣ ಮಾಡಲಾಯಿತು.ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೊತ್ತರ ಅಧ್ಯಯನ ಕೇಂದ್ರ, ಇತಿಹಾಸ ವಿಭಾಗ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಹಸ್ತ ಚಿತ್ರ ಫೌಂಡೇಶನ್ ವಕ್ವಾಡಿ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಉಸಿರು ಕೋಟ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಹಾಗೂ ಹಾಜಿ ಅಬ್ದುಲ್ಲಾ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಉಡುಪಿ ಘಟಕ ಕಾರ್ಯಕ್ರಮಕ್ಕೆ ಸಹಕಾರ ನೀಡಿತು.ನರೇಂದ್ರ ಕುಮಾರ್ ಕೋಟ ರಾಷ್ಟ್ರ ಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಹಾಜಿ ಅಬ್ದುಲ್ಲಾ ಸಾಹೇಬರ ನಿಕಟ ಸಂಬಂಧಿ ಸೈಯ್ಯದ್ ಸಿರಾಜ್ ಅಹಮ್ಮದ್ ನಾಮಫಲಕ ಅನಾವರಣ ಮಾಡಿದರು.ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರಾವಳಿಗರ ಕೊಡುಗೆ ವಿಚಾರವನ್ನು ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ ಕುಂದಾಪುರದ ಮನ್ವಿತಾ ಎಸ್. ಮಂಡಿಸಿದರು.ಉಡುಪಿ ಹಾಜಿ ಅಬ್ದುಲ್ಲಾ ಸಾಹೇಬ್ ಇವರ ಸೇವೆಯ ಬಗ್ಗೆ ಸಂಪನ್ಮೂಲ ವ್ಯಕ್ತಿ ಅವಿನಾಶ್ ಕಾಮತ್ ಉಪನ್ಯಾಸ ನೀಡಿದರು.ರವಿರಾಜ್ ಉಡುಪಿ, ಇಕ್ಬಾಲ್ ಅಹಮ್ಮದ್ ವಿಚಾರ ವಿನಿಮಯ ಮಾಡಿದರು. ಟಿ.ಮುರುಗೇಶ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸೂರ್ಯಕಾಂತ್ ಕೆರೆಕಟ್ಟೆ, ಜಯಪ್ರಕಾಶ್, ರಾಷ್ಟ್ರೀಯ ಸೇವಾ ಯೋಜನೆ ಘಟಕ ವಿದ್ಯಾರ್ಥಿ ಕುಟುಂಬಸ್ಥರು ಉಪಸ್ಥಿತರಿದ್ದರು.ಕಾರ್ಯಕ್ರಮ ಸಂಚಾಲಕ ಪ್ರದೀಪ್ ಕುಮಾರ್ ಬಸ್ರೂರು ವಿಚಾರ, ರೂಪುರೇಷ ತಿಳಿಸಿದರು. ನವ್ಯಾ ಕುಂದಾಪುರ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.