ಸಾರಾಂಶ
‘ಗಂಟ್ ಕಲ್ವೆರ್’ ತುಳು ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
‘ಗಂಟ್ ಕಲ್ವೆರ್’ ತುಳು ಚಿತ್ರ ಮೇ 23ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಚಿತ್ರ ಈಗಾಗಲೇ ಸೆನ್ಸಾರ್ ಆಗಿದೆ ಎಂದು ಸಿನಿಮಾದ ನಿರ್ದೇಶಕ ಸುಧಾಕರ ಬನ್ನಂಜೆ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾನು ಕತೆ, ಚಿತ್ರಕತೆ, ಸಂಭಾಷಣೆ, ಹಾಡು ಬರೆದು ನಿರ್ದೇಶನ ಮಾಡಿದ್ದು, ತುಳು ಮೂಲದ ಕನ್ನಡ ಚಿತ್ರರಂಗದ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ವಿ. ಮನೋಹರ್ ಸಂಗೀತ ನೀಡಿದ್ದಾರೆ. ತುಳುನಾಡಿನ ಪ್ರತಿಭೆ ತಮ್ಮ ಲಕ್ಷ್ಮಣ ಕಲಾನಿರ್ದೇಶನ, ಕೆ.ಗಿರೀಶ್ ಕುಮಾರ್ ಸಂಕಲನ, ಶಂಕರ್ ರವಿಕಿಶೋರ್ ಛಾಯಾಗ್ರಹಣ, ಪ್ರಶಾಂತ್ ಎಳ್ಳಂಪಳ್ಳಿ ಮತ್ತು ರಾಮದಾಸ್ ಸಸಿಹಿತ್ಲು ಸಹ ನಿರ್ದೇಶಕರಾಗಿ ದುಡಿದಿದ್ದಾರೆ ಎಂದರು.
ತಾರಾಗಣದಲ್ಲಿ ನವೀನ್ ಪಡೀಲ್, ಅರವಿಂದ ಬೋಳಾರ್, ಆರ್ಯನ್ ಶೆಟ್ಟಿ, ಸ್ಮಿತಾ ಸುವರ್ಣ, ಭೋಜರಾಜ್ ವಾಮಂಜೂರು, ಸುಧೀರ್ ಕೊಠಾರಿ, ಉಮೇಶ್ ಮಿಜಾರು, ಸುಂದರ ರೈ ಮಂದಾರ, ಸಂದೀಪ ಶೆಟ್ಟಿ ಮಾಣಿಬೆಟ್ಟು, ಗಿರೀಶ್ ಶೆಟ್ಟಿ ಕಟೀಲು, ನಾಗೇಶ್ ಡಿ. ಶೆಟ್ಟಿ, ಕ್ಲಾಡಿ ಡಿಲೀಮಾ, ಸಂಪತ್, ರವಿ ಸುರತ್ಕಲ್, ವಸಂತ ಮುನಿಯಾಲ್, ಯಾದವ ಮಣ್ಣಗುಡ್ಡೆ, ಪ್ರದೀಪ್ ಆಳ್ವ, ತಮ್ಮಲಕ್ಷಣ, ಪ್ರಶಾಂತ್ ಎಳ್ಳಂಪಳ್ಳಿ ಮೊದಲಾದ ತುಳುನಾಡ ಅನೇಕ ಪ್ರತಿಭಾವಂತ ನಟ ನಟಿಯರು ಅಭಿನಯಿಸಿದ್ದಾರೆ. ನಟರಾದ ಅಥರ್ವ ಪ್ರಕಾಶ್, ಶ್ರೀಕಾಂತ ರೈ, ಪ್ರಣವ್ ಹೆಗ್ಡೆ , ಶೈಲೇಶ್ ಕೋಟ್ಯಾನ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಉಮೇಶ್ ಮಿಜಾರ್, ರಾಕೇಶ್ ಆಚಾರ್ಯ, ಆರ್ಯನ್ ಶೆಟ್ಟಿ, ಸುಧಾಕರ ಕುದ್ರೋಳಿ, ಪ್ರಶಾಂತ್ ಆಚಾರ್ಯ, ನಾಗೇಶ್ ಡಿ ಶೆಟ್ಟಿ, ತಮ್ಮ ಲಕ್ಷ್ಮಣ ಇದ್ದರು.