ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಮಾತನಾಡಿ ದೇಶಭಕ್ತಿ, ಸೇವಾ ಮನೋಭಾವ ಮತ್ತು ಶಿಸ್ತುಬದ್ಧ ಸಮಾಜ ನಿರ್ಮಾಣದಲ್ಲಿ ಡಾ. ಹರ್ಡೀಕರ್ ಅವರ ಕೊಡುಗೆ ಅಪಾರವಾಗಿದೆ. ಭಾರತ ಸೇವಾದಳವು ಯುವಜನರಲ್ಲಿ ರಾಷ್ಟ್ರಭಕ್ತಿ, ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಹರ್ಡೀಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಏಳಿಗೆಗೆ ಇಂದಿನ ಯುವಕರು ಸೇವಾ ಮನೋವೃದ್ಧಿಯಿಂದ ದೇಶಕ್ಕಾಗಿ ಶ್ರಮಿಸಬೇಕು ಎಂದು ಹೇಳಿದರು.
ಕನ್ನಡಪ್ರಭ ವಾರ್ತೆ ಬೇಲೂರು ಭಾರತ ಸೇವಾದಳದ ಸಂಸ್ಥಾಪಕರಾದ ಪದ್ಮಭೂಷಣ ಡಾ. ನಾ. ಸು. ಹರ್ಡೀಕರ್ ಅವರ ಜನ್ಮದಿನಾಚರಣೆಯನ್ನು ಪಟ್ಟಣದ ನಾ. ಸು. ಹರ್ಡೀಕರ್ ವೃತ್ತದಲ್ಲಿ ಭಾರತ ಸೇವಾದಳ, ಹಾಸನ ಜಿಲ್ಲಾ ಘಟಕದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಿ ಡಾ. ನಾ.ಸು. ಹರ್ಡೀಕರ್ ಅವರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಲಾಯಿತು.ಪುರಸಭೆ ಅಧ್ಯಕ್ಷೆ ಉಷಾ ಸತೀಶ್ ಮಾತನಾಡಿ ದೇಶಭಕ್ತಿ, ಸೇವಾ ಮನೋಭಾವ ಮತ್ತು ಶಿಸ್ತುಬದ್ಧ ಸಮಾಜ ನಿರ್ಮಾಣದಲ್ಲಿ ಡಾ. ಹರ್ಡೀಕರ್ ಅವರ ಕೊಡುಗೆ ಅಪಾರವಾಗಿದೆ. ಭಾರತ ಸೇವಾದಳವು ಯುವಜನರಲ್ಲಿ ರಾಷ್ಟ್ರಭಕ್ತಿ, ಸಾಮಾಜಿಕ ಜವಾಬ್ದಾರಿ ಹಾಗೂ ಸೇವಾ ಚಟುವಟಿಕೆಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಹರ್ಡೀಕರ್ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಏಳಿಗೆಗೆ ಇಂದಿನ ಯುವಕರು ಸೇವಾ ಮನೋವೃದ್ಧಿಯಿಂದ ದೇಶಕ್ಕಾಗಿ ಶ್ರಮಿಸಬೇಕು ಎಂದು ಹೇಳಿದರು.ಭಾರತ ಸೇವಾದಳದ ಮುಖ್ಯಸ್ಥೆ ರಾಣಿ ಮಾತನಾಡಿ ಹರ್ಡೀಕರ್ ಅವರು ದೇಶದ ಯುವಜನತೆಗೆ ಶಿಸ್ತು, ಸೇವಾ ಮನೋಭಾವ ಹಾಗೂ ರಾಷ್ಟ್ರಭಕ್ತಿಯ ದಾರಿಯನ್ನು ತೋರಿದ ಮಹಾನ್ ವ್ಯಕ್ತಿ. ಇಂದಿನ ಯುವಪೀಳಿಗೆ ಸಮಾಜಮುಖಿ ಕಾರ್ಯಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳಬೇಕಿದ್ದು, ಸೇವಾದಳದ ಮೂಲಕ ಸಮಾಜ ಸೇವೆ, ಪರಿಸರ ಜಾಗೃತಿ, ರಾಷ್ಟ್ರೀಯ ಏಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ . ಹರ್ಡೀಕರ್ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಭಾರತ ಸೇವಾದಳದ ಅಧ್ಯಕ್ಷ ಯುವರಾಜು, ಬಾಳೆಹಣ್ಣು ರಮೇಶ್, ವೆಂಕಟೇಶ್ ಇತರರು ಹಾಜರಿದ್ದರು.
