ಆಕಸ್ಮಿಕ ಬೆಂಕಿ ಅವಘಡದಿಂದ ಮನೆ ಭಸ್ಮ : ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು

| N/A | Published : Mar 03 2025, 01:51 AM IST / Updated: Mar 03 2025, 11:23 AM IST

ಸಾರಾಂಶ

ಬೇಲೂರು ತಾಲೂಕಿನ ಅಜ್ಜೇನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಗಯ್ಯ ಎಂಬುವವರ ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

 ಬೇಲೂರು : ತಾಲೂಕಿನ ಅಜ್ಜೇನಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಗಂಗಯ್ಯ ಎಂಬುವವರ ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ನಾಲ್ವರು ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಎರಡು ಹಸುಗಳಿಗೆ ಗಂಭೀರ ಗಾಯವಾಗಿದೆ.

ಬೆಂಕಿಯ ರಭಸಕ್ಕೆ ಮನೆಯಲ್ಲಿದ್ದ ಎಲ್ಲ ವಸ್ತುಗಳು ಸುಟ್ಟುಹೋಗಿದ್ದು, ಎರಡು ಜಾನುವಾರುಗಳು ಗಂಭೀರವಾಗಿ ಗಾಯಗೊಂಡಿವೆ. ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಈ ದುರ್ಘಟನೆಯ ಕಾರಣ ಮತ್ತು ಒಟ್ಟಾರೆ ನಷ್ಟದ ಮೌಲ್ಯ ಅಂದಾಜಿಸಲು ಅಧಿಕಾರಿಗಳು ಪರಿಶೀಲನೆ ನಡೆಸಿದರು. ಸ್ಥಳೀಯರ ಸಹಕಾರದಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಿಯಂತ್ರಣಕ್ಕೆ ತಂದು ಹೆಚ್ಚಿನ ಅನಾಹುತವನ್ನು ತಪ್ಪಿಸಿದರು.

ಘಟನಾ ಸ್ಥಳಕ್ಕೆ ತಹಸೀಲ್ದಾರ್ ಎಂ. ಮಮತಾ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ, ಈ ಬೆಂಕಿ ಅನಾಹುತ ತುಂಬಾ ನೋವು ತಂದಿದೆ. ಶೀಘ್ರವೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು, ಗ್ರಾಮ ಪಂಚಾಯಿತಿಯಿಂದ ತಾತ್ಕಾಲಿಕ ವ್ಯವಸ್ಥೆ ಮಾಡಲಾಗುವುದು. ಹಸುಗಳಿಗೆ ಹಾನಿಯಾಗಿದ್ದು ಮೇಲಧಿಕಾರಿಗಳ ಗಮನಕ್ಕೆ ವರದಿ ನೀಡಿ ಪರಿಹಾರಕ್ಕೆ ಕ್ರಮ ವಹಿಸಲಾಗುವುದು. ಗಂಗಯ್ಯನವರ ಮಗಳು ಪಿಯುಸಿ ವಿದ್ಯಾರ್ಥಿನಿಯಾಗಿದ್ದು ಬೆಂಕಿಯ ರಭಸಕ್ಕೆ ಪರೀಕ್ಷಾ ಪ್ರವೇಶ ಪತ್ರ ಸುಟ್ಟು ಹೋಗಿದ್ದು. ಪರೀಕ್ಷೆಗೆ ತೊಂದರೆಯಾಗದಂತೆ ನೋಟ್ಸ್ ಮತ್ತು ಪುಸ್ತಕಗಳನ್ನು ಒದಗಿಸಿ ಪರೀಕ್ಷೆ ಬರೆಯಲು ಎಲ್ಲಾ ಸಹಕಾರವನ್ನು ನೀಡಲಾಗುವುದು ಎಂದರು.