ಶಿಕ್ಷಕ ಮಧುಸೂದನ್ ರೆಡ್ಡಿ ಎಂಬುವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮನೆಯಲ್ಲಿದ್ದ ಇಬ್ಬರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿದ ಪಾರಾಗಿದ್ದಾರೆ.

(ಸಣ್ಣ ಫೋಟೋ ಬಳಸಿ)

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ

ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಾಣಿಸಿಕೊಂಡ ಬೆಂಕಿಯಿಂದಾಗಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ, ನಗದು ಸೇರಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಮುದ್ದೇನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಗ್ರಾಮದ ಶಿಕ್ಷಕ ಮಧುಸೂದನ್ ರೆಡ್ಡಿ ಎಂಬುವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ಮನೆಯಲ್ಲಿದ್ದ ಇಬ್ಬರು ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿದ ಪಾರಾಗಿದ್ದಾರೆ. ಮಧುಸೂದನ್ ಶಾಲೆಗೆ ಹೋಗಿದ್ದು, ಪತ್ನಿ ಅನಿತಾ ಸತ್ಯಾಸಾಯಿ ಗ್ರಾಮದ ಬಳಿ ನಂದಿನಿ ಬೂತ್ ಇಟ್ಟುಕೊಂಡಿದ್ದ ಹಾಲಿನ ಕೇಂದ್ರಕ್ಕೆ ತೆರಳಿದ್ದರು. ಶಾಲೆಗೆ ರಜೆ ಇದ್ದ ಹಿನ್ನೆಲೆ ಮಕ್ಕಳು ಮಾತ್ರ ಮನೆಯಲ್ಲಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಮನೆ ಹೊತ್ತಿ ಉರಿದಿದೆ. ಇದರಿಂದ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿ ಮನೆಯ ಬೀರುವಿನಲ್ಲಿದ್ದ 1 ಲಕ್ಷ ನಗದು ಹಾಗೂ ಸುಮಾರು ಅರ್ಧ ಕೆಜಿ ಚಿನ್ನಾಭರಣ ಬೆಂಕಿಗೆ ಆಹುತಿಯಾಗಿವೆ.

ಸಿಕೆಬಿ-4 ಶಾರ್ಟ್ ಸರ್ಕ್ಯೂಟ್ ಗೆ ಸಂಪೂರ್ಣ ಸುಟ್ಟಿರುವ ಮನೆ.