ಸಾರಾಂಶ
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಸಹಕಾರಿ ಸಂಘಗಳು ಬಲಿಷ್ಠವಾದಲ್ಲಿ ರೈತರಿಗೆ ಹೆಚ್ಚು ಸಹಕಾರಿಯಾಗಲಿದ್ದು, ಸಂಘಗಳಲ್ಲಿ ಪಕ್ಷಾತೀತ ಹಾಗೂ ರಾಜಕೀಯವನ್ನು ಬದಿಗಿಟ್ಟು ಶ್ರಮಿಸಿದಲ್ಲಿ ಗ್ರಾಮೀಣ ಪ್ರದೇಶದಲ್ಲಿನ ಜನತೆಗೆ ಅನುಕೂಲವಾಗುತ್ತದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ತಿಳಿಸಿದರು.ಪಟ್ಟಣದ ಟಿಪಿಸಿಎಂಎಸ್‌ನ ಎದುರಿನ ಆವರಣದಲ್ಲಿ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ, ಹಾಸನ ಜಿಲ್ಲಾ ಸಹಕಾರ ಒಕ್ಕೂಟ ನಿ., ಹಾಸನ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿ, ಚನ್ನರಾಯಪಟ್ಟಣ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಗೂ ತಾಲ್ಲೂಕಿನ ಎಲ್ಲಾ ವಿವಿಧ ಸಹಕಾರ ಸಂಘಗಳು, ಸಹಕಾರ ಆಡಳಿತ ಮತ್ತು ಲೆಕ್ಕ ಪರಿಶೋಧನಾ ಇಲಾಖೆ, ಹಾಸನ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ೭೨ನೇ ಅಖಿಲ ಭಾರತ ಸಹಕಾರ ಸಪ್ತಾಹ-೨೦೨೫ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪರಸ್ಪರ ಸಹಕಾರದಿಂದ ಕೆಲಸ ಮಾಡಿದರೆ ಸಹಕಾರ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವ ಮೂಲಕ ಅಭಿವೃದ್ಧಿ ಪಥದಲ್ಲಿ ಸಾಗಲು ಸಾಗಬಹುದು. ಸಹಕಾರ ಕ್ಷೇತ್ರ ಪ್ರಗತಿ ಕಂಡರೆ ದೇಶದ ಆರ್ಥಿಕಾಭಿವೃದ್ಧಿ ನಾಗಾಲೋಟದಲ್ಲಿ ಸಾಗಲಿದ್ದು, ಇದನ್ನು ಅರಿತು ಸರ್ವರೂ ಮುನ್ನಡೆ ಯಬೇಕು ಎಂದು ಹೇಳಿದರು. ಗ್ರಾಮಾಂತರ ಪ್ರದೇಶದ ಆರ್ಥಿಕ ಚಟುವಟಿಕೆಗಳು ಸಹಕಾರ ಸಂಘದ ಮೇಲೆ ಅವಲಂಬಿತವಾಗಿದ್ದು, ಇದೊಂದು ಉತ್ತಮ ಬೆಳವಣಿಗೆ, ಪ್ರತಿವರ್ಷ ಸಹಕಾರ ಸಪ್ತಾಹ ನಡೆಸಿ ಆ ಕ್ಷೇತ್ರವನ್ನು ಉತ್ತೇಜಿಸಿ ಸಾಧಕರನ್ನು ಗುರುತಿಸಿ ಗೌರವಿಸುವ ಮೂಲಕ ಸರ್ವರಿಗೂ ಸಹಕಾರ ಸಂಘಗಳು ಮತ್ತು ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳ ಬಗ್ಗೆ ಮನವರಿಕೆ ಮಾಡಿ ಕೊಡಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಾಸನ ಹಾಲು ಒಕ್ಕೂಟದ ನಿವೃತ್ತ ವ್ಯವ ಸ್ಥಾಪಕ ನಿರ್ದೇಶಕ ಜಯಪ್ರಕಾಶ್ ಸಹಕಾರಿ ಕ್ಷೇತ್ರದ ತತ್ವಗಳು ಸಹಕಾರಿ ಕ್ಷೇತ್ರದ ಪ್ರಯೋಜನಗಳು ಸಹಕಾರಿ ಕ್ಷೇತ್ರದಲ್ಲಿ ಸದಸ್ಯರ ಪಾಲನ್ನು ಸವಿವರವಾಗಿ ವಿವರಿಸಿದರು. ಇದೇ ಸಂದರ್ಭದಲ್ಲಿ ಸಹಕಾರಿ ರತ್ನ ಪುರಸ್ಕೃತರನ್ನು ಹಾಗೂ ಸಹಕಾರಿ ಕ್ಷೇತ್ರದ ಸಾಧಕರನ್ನು ಸತ್ಕರಿಸಲಾಯಿತು.ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಸ್.ಎಸ್. ಪ್ರಕಾಶ್, ನಿರ್ದೇಶಕ ಆರ್.ಟಿ. ದ್ಯಾವೇಗೌಡ, ಎಚ್‌ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಸೋಮನಹಳ್ಳಿ ನಾಗರಾಜು, ಉಪಾ ಧ್ಯಕ್ಷ ಶೇಖರಪ್ಪ, ರಾಜ್ಯ ಸಹಕಾರ ಮಾರಾಟ ಮಂಡಳಿಯ ನಿರ್ದೇಶಕ ಸಿ.ಎನ್. ಪುಟ್ಟಸ್ವಾಮಿಗೌಡ, ಹಾಸನ ಹಾಲು ಒಕ್ಕೂಟದ ನಿರ್ದೇಶಕಿ ವಸಂತ ಶಿವಣ್ಣ, ಹೇಮಾವತಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸಿ.ಎನ್. ವೆಂಕಟೇಶ್, ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷ ಡಿಪಿ ಸೋಮೇಗೌಡ, ವಸತಿ ಮಹಾ ಮಂಡಳಿ ನಿರ್ದೇಶಕ ಸುರೇಶ್, ಹಾಸನ ಸಹಕಾರಿ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಎಚ್. ಮಹೇಶ್, ವ್ಯವಸ್ಥಾಪಕಿ ಸೌಜನ್ಯ, ಸಹಕಾರಿ ಅಭಿವೃದ್ಧಿ ಅಧಿಕಾರಿ ವಿಜಯೇಂದ್ರ, ಟಿಎಪಿಸಿಎಂಎಸ್‌ನ ಅಧ್ಯಕ್ಷ ಮೆಡಿಕಲ್ ವೆಂಕಟೇಶ್, ನಿರ್ದೇಶಕ ಅನಿಲ್ ಮರಗೂರು, ಹಿರಿಯ ಮುಖಂಡರಾದ ಪರದು ದೇವರಾಜೇಗೌಡ, ಜಯರಾಮ್, ಪುಟ್ಟಸ್ವಾಮಿಗೌಡ, ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು, ಸದಸ್ಯರು ಆಡಳಿತ ಮತ್ತು ಲೆಕ್ಕ ಪರಿಶೋಧನಾ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))