ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಸರ್ಕಾರಿ ಶಾಲಾ- ಕಾಲೇಜುಗಳು ಉಳಿದರೆ ಮಾತ್ರ ಕನ್ನಡ ಭಾಷೆ ಬೆಳೆಯಲು ಸಾಧ್ಯ ಎಂದು ಹಾಸನ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಎಂ.ಎನ್. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.ಹಳ್ಳಿಮೈಸೂರು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲೆಯ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಕಂಠಪಾಠ ಮಾಡಿದ ವಿದ್ಯಾರ್ಥಿಗಳಿಗೆ ಉಚಿತ ವಚನ ಪುಸ್ತಕಗಳನ್ನು ನೀಡಿದ ನಂತರ ಮಾತನಾಡಿದ ಅವರು, ಕನ್ನಡ ಭಾಷೆಗೆ ಜ್ಞಾನಪೀಠ ಪುರಸ್ಕೃತ ಪ್ರಶಸ್ತಿ ಲಭಿಸಿದೆ. ಖಾಸಗಿ ಶಾಲಾ ಕಾಲೇಜುಗಳಲ್ಲಿ ಕನ್ನಡ ಭಾಷೆಯನ್ನು ವಿಷಯವಾಗಿ ಕಲಿಯುತ್ತಾರೆ. ಉಳಿದ ವಿಷಯಗಳು ಇಂಗ್ಲಿಷಿನಲ್ಲಿ ಅಭ್ಯಾಸ ಮಾಡುತ್ತಾರೆ. ಆದರೆ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಭಾಷೆಯಲ್ಲಿ ಎಲ್ಲಾ ವಿಷಯಗಳನ್ನು ಕಲಿಯುತ್ತಾರೆ. ಇಂಗ್ಲೀಷ್ ಭಾಷೆಯನ್ನು ವಿಷಯವಾಗಿ ಕಲಿಯುತ್ತಾರೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯ ರೂಪಿಸುವ ಕೆಲಸದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಸುಮಾರು ನೂರು ವರ್ಷದ ಶಾಲೆಗೆ 250ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ ಎಂದರೆ ಸಂತೋಷದ ವಿಚಾರ ಎಂದು ನುಡಿದರು.
ಹೋಬಳಿ ಸಂಯೋಜಕರು ನಟೇಶ್ ಮಾತನಾಡಿ, 12 ಶತಮಾನದ ಶಿವಶರಣರ ವಿಚಾರಧಾರೆಗಳನ್ನು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ಗ್ರಾಮೀಣ ಶಾಲೆಗಳ ಮಕ್ಕಳಿಗೆ ಉಚಿತವಾಗಿ ವಚನ ಬುಕ್ಸ್ ನೀಡಿ ಪೋತ್ಸಾಹ ನೀಡುತ್ತಿರುವುದಕ್ಕೆ ಅಭಿನಂದನೆ ತಿಳಿಸಿದರು.ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹೊಳೆನರಸೀಪುರ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಪ್ರಸಾದ್ ಮುಂತಾದವರು ಪಾಲ್ಗೊಂಡಿದ್ದರು.