‘ಆಟೋ ಪ್ರಯಾಣ ದರ ಹೆಚ್ಚಳ ಮಾಡಿ’

| Published : Jun 26 2024, 01:34 AM IST

ಸಾರಾಂಶ

ಆಟೋ ಪ್ರಯಾಣ ದರ ಪರಿಷ್ಕರಣೆಗೆ ಆಟೋ ಚಾಲಕರ ಮತ್ತು ಮಾಲೀಕರ ಸಂಘಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದು, ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿವೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಆಟೋ ಪ್ರಯಾಣ ದರ ಪರಿಷ್ಕರಣೆಗೆ ಆಟೋ ಚಾಲಕರ ಮತ್ತು ಮಾಲೀಕರ ಸಂಘಗಳು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದು, ಶೀಘ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿವೆ.

ಈ ಕುರಿತು ಪ್ರತಿಕ್ರಿಯಿಸಿರುವ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್‌, 2021ರ ಡಿಸೆಂಬರ್ 20ರಿಂದ ಆಟೋ ಪ್ರಯಾಣ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಈ ಕೂಡಲೇ ಆಟೋ ಪ್ರಯಾಣ ದರ ಹೆಚ್ಚಿಸುವಂತೆ ಒತ್ತಾಯಿಸಿವೆ. ಸದ್ಯ ಕನಿಷ್ಠ ಪ್ರಯಾಣ ದರ (ಆರಂಭದ 2 ಕಿ.ಮೀ. ಪ್ರಯಾಣ) ₹30 ಇದ್ದು, ಅದನ್ನು ₹40ಕ್ಕೆ ಹೆಚ್ಚಿಸಬೇಕು. 2 ಕಿ.ಮೀ. ನಂತರದ ಪ್ರಯಾಣ ದರವನ್ನು ಪ್ರತಿ ಕಿ.ಮೀ.ಗೆ ₹15 ಇದ್ದು, ಅದನ್ನು ₹20ಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಗೆ ಹಲವು ಬಾರಿ ಮನವಿ ಮಾಡಿಕೊಳ್ಳಲಾಗಿದೆ. ಆದರೆ, ಈವರೆಗೆ ಕ್ರಮ ಕೈಗೊಂಡಿಲ್ಲ. ಬಿಡಿ ಭಾಗಗಳು, ಗ್ಯಾಸ್‌, ಪೆಟ್ರೋಲ್‌ ಬೆಲೆಗಳು ಹೆಚ್ಚಾಗಿದೆ. ಆಟೋ ರಿಕ್ಷಾ ದರವೂ ಹೆಚ್ಚಾಗಿದ್ದು, ಚಾಲಕರು ಮತ್ತು ಮಾಲೀಕರು ಆರ್ಥಿಕ ಹೊರೆಗೆ ಸಿಲುವಂತಾಗಿದೆ. ಹೀಗಾಗಿ ಶೀಘ್ರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳ ಮಾಡಲು ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.