ಸಾರಾಂಶ
ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಎತ್ತಿಹಿಡಿಯುತ್ತೇವೆ.
ಕನ್ನಡಪ್ರಭ ವಾರ್ತೆ ಮಹಾಲಿಂಗಪುರ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಮತದಾನ ಜಾಗೃತಿ ಹಮ್ಮಿಕೊಳ್ಳಲಾಯಿತು. ಪಟ್ಟಣ ಪಂಚಾಯತ ಆವರಣದಲ್ಲಿ ಭಾರತ ಚುನಾವಣಾ ಆಯೋಗ, ಜಿಲ್ಲಾ ಆಡಳಿತ, ಜಿಲ್ಲಾ ಸ್ವೀಪ್ ಸಮಿತಿ ಬಾಗಲಕೋಟೆ ಮತ್ತು ತಾಲೂಕು ಆಡಳಿತ ,ತಾಲೂಕು ಸ್ವೀಪ್ ಸಮಿತಿ ಮುಧೋಳ, ಪಟ್ಟಣ ಪಂಚಾಯತ್ ಕಾರ್ಯಾಲಯ ರನ್ನ ಬೆಳಗಲಿ ಆಶ್ರಯದಲ್ಲಿ ವಿನೂತನ ರೀತಿಯಲ್ಲಿ ಮೇಣದ ಬತ್ತಿ ಬೆಳಗುವುದರ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.ಪ.ಪಂ ಮುಖ್ಯಾಧಿಕಾರಿಗಳಾದ ನಾಮದೇವ ಲಮಾಣಿ ಸಾರ್ವಜನಿಕರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಎತ್ತಿಹಿಡಿಯುತ್ತೇವೆಂದು. ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ, ಜನಾಂಗ, ಜಾತಿ, ಮತ, ಭಾಷೆ ಅಥವಾ ಯಾವುದೇ ಪ್ರೇರಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸುತ್ತೇವೆ ಎಂಬ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ವೇಳೆ ಪಿ.ಡಿ.ನಾಗನೂರ, ಎಸ್. ಬಿ. ಚೌದ್ರಿ, ಸತ್ಯಪ್ಪ ಹನಗಂಡಿ, ರಾಮಣ್ಣ ಹುನ್ನೂರ, ಮಹಾಂತೇಶ.ಬಿ, ಸುಗಂಧಾ ಸೊನೋನೆ, ರಾಘವೇಂದ್ರ ನೀಲನ್ನವರ ಹಾಗೂ ಪ.ಪಂ ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಇದ್ದರು.