ಕೆಎಂಎಫ್‌ ನೇಮಕಾತಿಯಲ್ಲಿ ಅಕ್ರಮ : ತನಿಖೆಗೆ ಆಗ್ರಹ

| Published : Feb 17 2024, 01:21 AM IST

ಸಾರಾಂಶ

ಖಾಲಿ ಇರುವ ವಿವಿಧ ವೃಂದಗಳಲ್ಲಿನ ಒಟ್ಟು 46 ಹುದ್ದೆಗಳ ನೇರ ನೇಮಕಾತಿಗಾಗಿ 2023 ಆಗಸ್ಟ್‌ 26 ರಂದು ನೇಮಕಾತಿ ಪ್ರಕಟಣೆ ಹೊರಡಿಸಲಾಗಿತ್ತು. ಅಧಿಸೂಚನೆ ಪ್ರಕಟಣೆಯಂತೆ 46 ಹುದ್ದೆಗಳಿಗೆ ಮಾತ್ರ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಆದರೆ, ಹೆಚ್ಚುವರಿಯಾಗಿ 2 ಹುದ್ದೆಗಳನ್ನು ಅಂದರೆ ಒಟ್ಟು 48 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವ ಮೂಲಕ ಅವ್ಯವಹಾರ ಆಗಿರುವುದು ಕಂಡು ಬಂದಿದೆ ಎಂದು ದೂರಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಕೆಎಂಎಫ್‌)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದ್ದು, ತನಿಖೆ ನಡೆಸುವಂತೆ ಮಕ್ಕಳಗೇರಿ ಹಾಲು ಉತ್ಪಾದಕರ ಸಂಘದ ಮಾಜಿ ನಿರ್ದೇಶಕ ಪ್ರಕಾಶ ಬಾಗೋಜಿ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಾಲಿ ಇರುವ ವಿವಿಧ ವೃಂದಗಳಲ್ಲಿನ ಒಟ್ಟು 46 ಹುದ್ದೆಗಳ ನೇರ ನೇಮಕಾತಿಗಾಗಿ 2023 ಆಗಸ್ಟ್‌ 26 ರಂದು ನೇಮಕಾತಿ ಪ್ರಕಟಣೆ ಹೊರಡಿಸಲಾಗಿತ್ತು. ಅಧಿಸೂಚನೆ ಪ್ರಕಟಣೆಯಂತೆ 46 ಹುದ್ದೆಗಳಿಗೆ ಮಾತ್ರ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಬೇಕಿತ್ತು. ಆದರೆ, ಹೆಚ್ಚುವರಿಯಾಗಿ 2 ಹುದ್ದೆಗಳನ್ನು ಅಂದರೆ ಒಟ್ಟು 48 ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳುವ ಮೂಲಕ ಅವ್ಯವಹಾರ ಆಗಿರುವುದು ಕಂಡು ಬಂದಿದೆ ಎಂದು ದೂರಿದರು.ಈ ಹಿಂದೆ ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಂಘದಲ್ಲಿ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಇದೇ ರೀತಿಯಾಗಿತ್ತು. ಈ ಕುರಿತು ತನಿಖೆ ನಡೆದಿದೆ. ಆದ್ದರಿಂದ ಬೆಳಗಾವಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಕೆಎಂಎಫ್‌)ದಲ್ಲಿ ಖಾಲಿ ಇರುವ ವಿವಿಧ ವೃಂದಗಳಲ್ಲಿನ ಒಟ್ಟು 46 ಹುದ್ದೆಗಳ ನೇರ ನೇಮಕಾತಿ ಪ್ರಕ್ರಿಯೆಯನ್ನು ತನಿಖೆ ನಡೆಸುವಂತೆ ಒತ್ತಾಯಿಸಿದರು. ಈ ಸುದ್ದಿಗೋಷ್ಠಿಯಲ್ಲಿ ಸಂತೋಷ ಪೂಜೇರಿ ಇದ್ದರು.