ಮಧ್ಯವರ್ತಿಗಳ ಹಾವಳಿ ತಡೆಗೆ ‘ಜನಸ್ಪಂದನಾ’

| Published : Apr 27 2025, 01:32 AM IST

ಸಾರಾಂಶ

ಜನಸ್ಪಂದನಾ ಕಾರ್ಯಕ್ರಮದಲ್ಲಿ ನಾಗರಿಕರ ಸಮಸ್ಯಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದಲ್ಲದೆ ಪಿಂಚಣಿ, ಮಾಶಾಸನ ಇತ್ಯಾಧಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸುಲಭವಾಗಿ ದೊರೆಯುವಂತೆ ಮಾಡುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಗ್ರಾ.ಪಂ ಮಟ್ಟದಲ್ಲಿ ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ನಾನಾ ಕೆಲಸಗಳ ನಿಮಿತ್ತ ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರನ್ನು ಅಲೆದಾಡಿಸುವುದನ್ನು ತಪ್ಪಿಸುವುದಲ್ಲದೆ ಮಧ್ಯವರ್ತಿಗಳ ಹಾವಳಿಯನ್ನು ನಿಯಂತ್ರಿಸುವ ಏಕೈಕ ಉದ್ದೇಶದಿಂದ ಗ್ರಾಪಂ ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವಂತಹ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು.

ತಾಲೂಕಿನ ದೇವರಗುಡಿಪಲ್ಲಿ ಕಂದಾಯ ಇಲಾಖೆ ಮತ್ತು ತಾಪಂ ವತಿಯಿಂದ ಆಯೋಜಿಸಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶಾಸಕರು ಮಾತನಾಡಿದರು.

ಗ್ರಾಪಂ ಮಟ್ಟದ ಕಾರ್ಯಕ್ರಮ

ಜನಸ್ಪಂದನಾ ಕಾರ್ಯಕ್ರಮದಲ್ಲಿ ನಾಗರಿಕರ ಸಮಸ್ಯಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವುದಲ್ಲದೆ ಪಿಂಚಣಿ, ಮಾಶಾಸನ ಇತ್ಯಾಧಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ಸುಲಭವಾಗಿ ದೊರೆಯುವಂತೆ ಮಾಡುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮವನ್ನು ಗ್ರಾ.ಪಂ ಮಟ್ಟದಲ್ಲಿ ನಿರಂತರವಾಗಿ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಂಬಂಧಿಸಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಿವೆ. ಗೃಹಲಕ್ಷ್ಮಿ, ಅನ್ನಭಾಗ್ಯ, ಪರಿತರ ಚೀಟಿ, ಜಮೀನು ಸಮಸ್ಯೆ, ರಸ್ತೆ, ಕೃಷಿ ಇಲಾಖೆ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿರುವ ಅರ್ಜಿಗಳು ಸಲ್ಲಿಕೆಯಾಗಿವೆ.

ಫಲಾನುಭವಿಗಳಿಗೆ ಆದೇಶ ಪತ್ರ

ನರೇಗಾ ಸೇರಿದಂತೆ ತಾ.ಪಂ ಗ್ರಾ.ಪಂಗಳಲ್ಲಿ 472, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ250, ಆರೋಗ್ಯ ಇಲಾಖೆಯ 300 ಮಂದಿಗೆ ಸೇರಿದಂತೆ ಪಿಂಚಿಣಿ, ಭಾಗ್ಯಲಕ್ಷ್ಮೀ ಬಾಂಡ್ ಹಕ್ಕು ಪತ್ರಗಳನ್ನು ಹಾಗೂ ಮನೆ ಮಂಜೂರಾತಿ ಪತ್ರಗಳನ್ನು ಸೇರಿದಂತೆ ವಿವಿಧ ಯೋಜನೆಗಳಲ್ಲಿ 1500 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಆದೇಶ ಪತ್ರಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಮನೀಷಾ ಎನ್ ಪತ್ರಿ, ತಾ.ಪಂ ಇಒ ರಮೇಶ್ರೆಡ್ಡಿ, ಟಿಹೆಚ್ಓ ಡಾ.ಸತ್ಯನಾರಾಯಣರೆಡ್ಡಿ, ಸಿಡಿಪಿಓ ರಮಚಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.