ವಿಜೃಂಭಣೆಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

| Published : Sep 07 2024, 01:39 AM IST

ವಿಜೃಂಭಣೆಯಿಂದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಹುಲಸೂರ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವ ಕರ್ಮ ಜಯಂತಿ ಆಚರಣೆ ಕುರಿತ ಪೂರ್ವ ಸಿದ್ಧತಾ ಸಭೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಕನ್ನಡ ಪ್ರಭ ವಾರ್ತೆ ಹುಲಸೂರ

ತಾಲೂಕು ಆಡಳಿತದಿಂದ ಸೆ.17ರಂದು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವ ಕರ್ಮ ಜಯಂತಿಯನ್ನು ವಿಜೃಂಭಣೆಯಿಂದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಆಚರಿಸಬೇಕು ಎಂದು ತಹಸೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದರು.

ತಹಸೀಲ್ದಾರ್ ಕಚೇರಿ ಆವರಣದಲ್ಲಿ ಶುಕ್ರವಾರ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿ ಅವರು, ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಅಲ್ಲದೇ ವಿಶ್ವ ಕರ್ಮ ಜಯಂತಿಯನ್ನು ಸೆ.17 ರಂದು ಆಚರಿಸುತ್ತಿರುವುದರಿಂದ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ತಾಲೂಕು ಮಟ್ಟದ ಸಮಾರಂಭದಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.

ಪಟ್ಟಣದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ಚಳುವಳಿಯಲ್ಲಿ ಭಾಗವಹಿಸಿ ಹುತಾತ್ಮರಾದವರ ಕುರಿತು ಉಪನ್ಯಾಸ ಹಾಗೂ ವಿಶ್ವ ಕರ್ಮ ಅವರ ಕುರಿತು ಮಾತನಾಡುವವರನ್ನು ಅವ್ಹಾನಿಸುವುದು, ವಿವಿಧ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಬೇಕು ಎಂದು ಸಭೆಯಲ್ಲಿ ತಾಪಂ ಅಧಿಕಾರಿ ವೈಜಣ್ಣ ಫುಲೆ ಹಾಗೂ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಸೂರ್ಯಕಾಂತ ಪಾಟೀಲ್ ಅವರಿಗೆ ಸೂಚನೆ ನೀಡಿದ್ದರು.

ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಹಾಗೂ ವಿಶ್ವ ಕರ್ಮ ಜಯಂತಿ ಆಚರಣೆ ಕುರಿತು ಜಿಪಂ ಮಾಜಿ ಸದಸ್ಯ ಸುಧೀರ್ ಕಾಡಾದಿ ತಮ್ಮ ರೂಪುರೇಷೆಗಳನ್ನು ತಿಳಿಸಿದರು.

ಸಭೆಯಲ್ಲಿ ತಾಪಂ ಇಒ ವೈಜಣ್ಣ ಫುಲೆ, ಸರ್ಕಾರಿ ಪ್ರೌಢಶಾಲೆಯ ಮುಖ್ಯಗುರು ಸೂರ್ಯಕಾಂತ ಪಾಟೀಲ್, ಪಿಡಿಒ ರಮೇಶ ಮಿಲಿಂದಕರ, ಪಿಎಸ್ಐ ಪಂಡಿತ ಜಮಾದಾರ, ಜಿಪಂ ಮಾಜಿ ಸದಸ್ಯ ಸುಧೀರ ಕಾಡಾದಿ, ಪ್ರಲ್ಹಾದ ಮೊರೆ, ಜಬ್ಬಾರ್ ಸೌಧಾಗರ್, ಶರಣಪ್ಪ ಗುರುನಾಥ ಪರೆಪ್ಪ, ಗ್ರಾಪಂ ಸದಸ್ಯರಾದ ಜಗದೀಶ ದೆಟ್ನೆ, ದೇವಿಂದ್ರ ಭೋಪಳೆ, ನಾಗೇಶ ಮೇತ್ರೆ, ವಿದ್ಯಾಸಾಗರ ಬನಸೂಡೆ, ವಿಶ್ವ ಕರ್ಮ ತಾಲೂಕು ಘಟಕದ ಅಧ್ಯಕ್ಷ ವಿರೇಶ ವಿಶ್ವಕರ್ಮ, ಪ್ರಶಾಂತ ವಿಶ್ವಕರ್ಮ, ಚಂದ್ರಶೇಖರ ವಿಶ್ವಕರ್ಮ ರೂಪೇಶ ಪಾಂಚಳ, ಮೌನೇಶ ವಿಶ್ವಕರ್ಮ, ವಿರೇಶ ಪಾಂಚಾಳ, ಕಂದಾಯ ಇಲಾಖೆಯ ಸಿಬ್ಬಂದಿ ಸೇರಿ ಗಣ್ಯರು ಪಾಲ್ಗೊಂಡಿದ್ದರು.