ಸಾರಾಂಶ
ಶಿವಯೋಗಿ ಸಿದ್ದರಾಮೇಶ್ವರ ಜಯಂತಿ । ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜನೆ
ಕನ್ನಡಪ್ರಭ ವಾರ್ತೆ ಅರಸೀಕೆರೆತಮ್ಮ ವಚನ ಸಾಹಿತ್ಯ ಹಾಗೂ ಸಾಮಾಜಿಕ ಕಾರ್ಯಗಳ ಮೂಲಕ ಕ್ರಾಂತಿಯನ್ನೇ ಹುಟ್ಟು ಹಾಕಿದ ಕೀರ್ತಿ ಬಸವಾದಿ ಶಿವಶರಣರಿಗೆ ಸಲ್ಲುತ್ತದೆ, ಅಂತಹ ಮಹಾನ್ ಶಿವಶರಣರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಶ್ರೇಷ್ಠ ದಾರ್ಶನಿಕರು, ಅಂತಹ ಮಹಾತ್ಮರ ಆದರ್ಶ, ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕವಾಗುತ್ತದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.
ಮಹಾನ್ ಶಿವಶರಣರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಶ್ರೇಷ್ಠ ದಾರ್ಶನಿಕರು, ಅಂತಹ ಮಹಾತ್ಮರ ಆದರ್ಶ, ಚಿಂತನೆ ಅಳವಡಿಕೆಯಿಂದ ಬದುಕು ಸಾರ್ಥಕವಾಗುತ್ತದೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು. ಅರಸೀಕೆರೆಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯಲ್ಲಿ ಮಾತನಾಡಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸೋಮವಾರ ಬೆಳಿಗ್ಗೆ ಏರ್ಪಡಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಗತ್ತಿನಲ್ಲಿ ಅಧರ್ಮ ಹೆಚ್ಚಾದಾಗ ಧರ್ಮ ಸಂಸ್ಥಾಪನೆಗಾಗಿ ಅನೇಕ ಮಹಾಪುರುಷರು ಜನ್ಮ ತಾಳಿದ್ದಾರೆ. ಅಂತಹ ಮಹಾನ್ ಯುಗಪುರುಷರಲ್ಲಿ ಶಿವಶರಣ ಶಿವಯೋಗಿ ಸಿದ್ಧರಾಮೇಶ್ವರರು ಅಗ್ರಗಣ್ಯರು. ಜನರ ಅನುಕೂಲಕ್ಕಾಗಿ ಕೆರೆ-ಕಟ್ಟೆಗಳನ್ನು ಕಟ್ಟಿ ಸಂರಕ್ಷಿಸಿ ದೇವಾಲಯಗಳನ್ನು ನಿರ್ಮಿಸಿ ನಾಡಿನಾದ್ಯಂತ ಸಂಚರಿಸಿ ಜನರಲ್ಲಿ ಜಾತಿ-ಮತ ಭೇದವಿಲ್ಲದೆ ಸನ್ಮಾರ್ಗದತ್ತ ಜನರನ್ನು ಕೊಂಡೊಯ್ಯುವ ಕೆಲಸ ಮಾಡಿದ ಶ್ರೇಷ್ಠ ದಾರ್ಶನಿಕರು ಎಂದು ಅವರು ಬಣ್ಣಿಸಿದರು.ಸಮಾಜದಲ್ಲಿನ ಜಾತಿ ವರ್ಗಗಳ ವ್ಯವಸ್ಥೆ ವಿರುದ್ಧ ಹೋರಾಟ ನಡೆಸಿದ ಕಾಯಕ ಯೋಗಿ ಬಸವಣ್ಣನವರ ಸಮಕಾಲೀನರಾದ ಶಿವಯೋಗಿ ಸಿದ್ಧರಾಮೇಶ್ವರರು ಕಾಯಕವೇ ಕೈಲಾಸವೆಂಬ ನುಡಿಯನ್ನು ಕಾರ್ಯಗತಮಾಡಿ ತೊರಿಸಿದರಲ್ಲದೆ ಅತ್ಯಂತ ಸೂಕ್ಷ್ಮವಾದ ಮತ್ತು ನಿಷ್ಠುರವಾದ ವಚನಗಳನ್ನು ರಚನೆ ಮಾಡುವ ಮೂಲಕ ಸಾಮಾಜಿಕ ಮೌಡ್ಯತೆಯ ವಿರುದ್ದ ಸಾಮಾಜಿಕ ಸಮರವನ್ನೇ ಅಂದು ಸಾರಿದ್ದರು ಎಂದು ಹೇಳಿದರು.
ತಹಸೀಲ್ದಾರ್ ಸಂತೋಷಕುಮಾರ್ ಮಾತನಾಡಿ, ಬಸವಾದಿ ಶಿವಶರಣರಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಶ್ರೇಷ್ಠ ದಾರ್ಶನಿಕರಾಗಿ ಅವರ ವಚನ ಸಾಹಿತ್ಯಗಳ ಮೂಲಕ ಅನೇಕ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಮಾರ್ಗವನ್ನು ತೋರಿ ಮನುಕುಲದ ಶ್ರೇಯಸ್ಸಿಗಾಗಿ ಶ್ರಮಿಸಿ ಜನಮಾನಸದಲ್ಲಿ ಸಾಮಾಜಿಕ ಕ್ರಾಂತಿಯನ್ನೇ ಹುಟ್ಟು ಹಾಕಿದ ಕೀರ್ತಿ ಶಿವಯೋಗಿ ಸಿದ್ಧರಾಮೇಶ್ವರ ಅವರಿಗೆ ಸಲ್ಲುತ್ತದೆ ಎಂದರು.ಈ ಕಾರ್ಯಕ್ರಮದಲ್ಲಿ ಮುಖಂಡರಾದ ಜಿ.ವಿ.ಟಿ.ಬಸವರಾಜು, ತೊಂಡಿಗನಹಳ್ಳಿ ಕೃಷ್ಣಮೂರ್ತಿ, ನಿರಂಜನ್, ಜಾವಗಲ್ ಪ್ರಸನ್ನ ಕುಮಾರ್, ಉಮಾ ಶಂಕರ್, ಚಂದ್ರಶೇಖರ್, ಸರ್ವೇ ಚಂದ್ರು, ಎಚ್.ಟಿ.ಮಹಾದೇವ್, ಕಸಾಪ ತಾಲೂಕ ಅಧ್ಯಕ್ಷ ಚಂದ್ರಶೇಖರ್ ಬಾಬು ಹಾಗೂ ಸರ್ಕಾರಿ ಅಧಿಕಾರಿಗಳು ಪಾಲ್ಗೊಂಡಿದ್ದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಶಾಸಕ ಕೆ.ಎಂ ಶಿವಲಿಂಗೇಗೌಡ ಪುಷ್ಪಾರ್ಚನೆ ಮಾಡಿದರು.