ದೇವರಾಜು ಅರಸು ಜಯಂತಿ ಅರ್ಥಪೂರ್ಣವಾಗಿರಲಿ

| Published : Aug 10 2024, 01:34 AM IST

ಸಾರಾಂಶ

ಅರಸು ಜಯಂತಿ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಲ್ಲಕ್ಕಿ, ಕುಂಭಮೇಳ ಮೆರವಣಿಗೆಯು ನಗರದ ಜೈ ಭೀಮ್ ಹಾಸ್ಟಲ್ ಆವಣದಿಂದ ನಗರದ ಮುಖ್ಯ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ಭವನ ವರೆಗೆಗೂ ಸಾಗಲಿದೆ. ಇದಕ್ಕೆ ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು

ಕಮ್ಮಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಆ. 20ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆಯನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ನಡೆದ ದೇವರಾಜು ಅರಸು ಅವರ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅರಸು ಅವರ 109ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಬೇಕು. ಅರಸು ನಿಗಮದಿಂದ ಸೌಲಭ್ಯಗಳನ್ನು ಪಡೆದ ಫಲಾನುಭವಿಗಳನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕು ಎಂದರು. ಮೆರವಣಿಗೆಯಲ್ಲಿ ಕಲಾ ತಂಡಗಳು

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಲ್ಲಕ್ಕಿ, ಕುಂಭಮೇಳ ಮೆರವಣಿಗೆಯು ನಗರದ ಜೈ ಭೀಮ್ ಹಾಸ್ಟಲ್ ಆವಣದಿಂದ ನಗರದ ಮುಖ್ಯ ಬೀದಿಗಳಲ್ಲಿ ಸಾಗಿ ಅಂಬೇಡ್ಕರ್ ಭವನ ವರೆಗೆಗೂ ಸಾಗಲಿದೆ. ಇದಕ್ಕೆ ಪೂರಕ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ಜೊತೆಗೆ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಪೋಲಿಸ್ ಬಿಗಿ ಭದ್ರತೆ ಮಾಡುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಪ್ರಕಾಶ್ .ಜಿ.ಟಿ.ನಿಟ್ಟಾಲಿ, ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಎಂ.ವಿ. ರಾಜೇಶ್ವರಿ, ದೇವರಾಜು ಅರಸು ನಿಗಮದ ಅಧಿಕಾರಿ ಶಿವನಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮುನಿರತ್ನಮ್ಮ, ಸಮುದಾಯದ ಮುಖಂಡರು ಹಾಗೂ ಸಂಘ ಸಂಸ್ಥೆಯ ಪದಾಧಿಕಾರಿಗಳು ಇದ್ದರು.