ಸಾರಾಂಶ
ಕಂದಾಯ ಇಲಾಖೆಯಲ್ಲಿ ಭೂ ಸುರಕ್ಷಾ ಯೋಜನೆಯಡಿಯಲ್ಲಿ ಎಲ್ಲಾ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಕಾರ್ಯ ಪ್ರಾರಂಭಿಸಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶಾಸಕ ಸ್ವರೂಪ್ ಪ್ರಕಾಶ್ ಶುಭ ಹಾರೈಸಿದರು. ತಹಸೀಲ್ದಾರ್ ಕಚೇರಿಯಲ್ಲಿ ಸರ್ವೇ ಮತ್ತು ನೋಂದಣಿ ಇಲಾಖೆಯ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣಗೊಳಿಸಲು ಬುಧವಾರ ಆಯೋಜಿಸಿದ್ದ ಡಿಜಿಟಲ್ ರೆಕಾರ್ಡ್ ರೂಮ್ ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಉತ್ತಮ ಕಾರ್ಯ ನಡೆಯುತ್ತಿದೆ ಎಂದು ಅಭಿನಂದಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಕಂದಾಯ ಇಲಾಖೆಯಲ್ಲಿ ಭೂ ಸುರಕ್ಷಾ ಯೋಜನೆಯಡಿಯಲ್ಲಿ ಎಲ್ಲಾ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡುವ ಕಾರ್ಯ ಪ್ರಾರಂಭಿಸಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶಾಸಕ ಸ್ವರೂಪ್ ಪ್ರಕಾಶ್ ಶುಭ ಹಾರೈಸಿದರು.ನಗರದ ತಹಸೀಲ್ದಾರ್ ಕಚೇರಿಯಲ್ಲಿ ಸರ್ವೇ ಮತ್ತು ನೋಂದಣಿ ಇಲಾಖೆಯ ಎಲ್ಲಾ ಭೂ ದಾಖಲೆಗಳ ಡಿಜಿಟಲೀಕರಣಗೊಳಿಸಲು ಬುಧವಾರ ಆಯೋಜಿಸಿದ್ದ ಡಿಜಿಟಲ್ ರೆಕಾರ್ಡ್ ರೂಮ್ ಉದ್ಘಾಟಿಸಿ ಮಾತನಾಡಿದ ಅವರು, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ನೇತೃತ್ವದಲ್ಲಿ ಉತ್ತಮ ಕಾರ್ಯ ನಡೆಯುತ್ತಿದೆ, ಇದರಿಂದ ಮುಂದಿನ ದಿನದಲ್ಲಿ ರೈತರು ಹಾಗೂ ಸಾರ್ವಜನಿಕರಿಗೆ ಸುಲಭವಾಗಿ ಎಲ್ಲಾ ಭೂ ದಾಖಲೆಗಳು ದೊರೆಯಲಿವೆ ಎಂದು ಸರ್ಕಾರವನ್ನು ಅಭಿನಂದಿಸಿದರು.
ಈ ಹಿಂದೆ ದಾಖಲೆಗಳನ್ನು ಅಳಿಸುವ ಮೂಲಕ ದುರುಪಯೋಗ ಪಡಿಸಿಕೊಳ್ಳುತ್ತಿದ್ದರು, ಡಿಜಿಟಲೀಕರಣದಿಂದ ಯಾವುದೇ ಹಾನಿಯಾಗುವುದಿಲ್ಲ, ತಾಲೂಕು ಕಚೇರಿಯಲ್ಲಿ ಹಳೆಯ ಭೂ ದಾಖಲೆಗಳಿವೆ. ಅವುಗಳೆಲ್ಲವನ್ನು ಡಿಜಿಟಲೀಕರಣ ಮಾಡುವುದರಿಂದ ಶಾಶ್ವತವಾಗಿ ಸುರಕ್ಷಿತವಾಗಿಡಬಹುದು. ಡಿಜಿಟಲೀಕರಣ ಮಾಡುವುದಕ್ಕೆ ಇನ್ನು ಹೆಚ್ಚಿನ ಕಂಪ್ಯೂಟರ್ ಅವಶ್ಯಕತೆಗಳಿವೆ ಅವುಗಳ ಶಾಸಕರ ಅನುದಾನದಲ್ಲಿ ಪೂರೈಸುವ ವ್ಯವಸ್ಥೆ ಮಾಡುತ್ತೇವೆ ಎಂದು ಶಾಸಕರು ತಿಳಿಸಿದರು.ತಹಸೀಲ್ದಾರ್ ಶ್ವೇತಾ ಎನ್ ರವೀಂದ್ರ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.