ಡೆಂಘೀ ಕಾಯಿಲೆಗೆ ವೈದ್ಯ ವಿದ್ಯಾರ್ಥಿ ಸಾವು

| Published : Jul 20 2024, 12:49 AM IST

ಸಾರಾಂಶ

ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಹೊಳೆನರಸೀಪುರ ತಾಲೂಕಿನ ಗೋಹಳ್ಳಿ ಗ್ರಾಮದ ಎಂಬಿಬಿಎಸ್ ವಿದ್ಯಾರ್ಥಿ ಕುಶಾಲ್ ಡೆಂಘೀ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ. ಅವರ ತಾಯಿ ರೇಖಾ ಅವರು ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲೇ ಡೆಂಘೀ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಕುಶಾಲ್ ತಂದೆ ಮಂಜುನಾಥ್ ಅವರ ಸ್ಥಿತಿ ಜತೆಗೆ ಕುಟುಂಬ ಸದಸ್ಯರು ಹಾಗೂ ಹಿತೈಷಿಗಳು ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ಹೊಳೆನರಸೀಪುರ: ತಾಲೂಕಿನ ಗೋಹಳ್ಳಿ ಗ್ರಾಮದ ಶಿಕ್ಷಕ ಮಂಜುನಾಥ್ ರೇಖಾ ದಂಪತಿಯ ಪುತ್ರ ಹಾಗೂ ಎಂಬಿಬಿಎಸ್ ವಿದ್ಯಾರ್ಥಿ ಕುಶಾಲ್ (22) ಡೆಂಘೀ ಕಾಯಿಲೆಗೆ ತುತ್ತಾಗಿ ಮೃತಪಟ್ಟಿದ್ದಾರೆ.

ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಕುಶಾಲ್ ಅವರು, ಕಳೆದ ಒಂದು ವಾರದಿಂದ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಕುಶಾಲ್ ಅವರ ಎಂಬಿಬಿಎಸ್ ಕನಸು ಹೊತ್ತಿದ್ದ ಅವರ ತಾಯಿ ರೇಖಾ ಅವರು ಕುಶಾಲ್ ಸಾವನ್ನಪ್ಪಿದ ಆಸ್ಪತ್ರೆಯಲೇ ಡೆಂಘೀ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದು, ಕುಶಾಲ್ ತಂದೆ ಮಂಜುನಾಥ್ ಅವರ ಸ್ಥಿತಿ ಜತೆಗೆ ಕುಟುಂಬ ಸದಸ್ಯರು ಹಾಗೂ ಹಿತೈಷಿಗಳು ರೋಧಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.