ಕುಂದಾಪುರ: ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆ ಹಕ್ಕೊತ್ತಾಯ ಸಭೆ
ಕುಂದಾಪುರ: ಕಸ್ತೂರಿ ರಂಗನ್ ವರದಿ ಜಾರಿಯ ವಿಚಾರದಲ್ಲಿ ಕಳೆದ ಹಲವು ವರ್ಷಗಳಿಂದ ಸಭೆ, ಚರ್ಚೆ ಹಾಗೂ ಹೋರಾಟಗಳು ನಡೆಯುತ್ತಿದ್ದರೂ, ಬಾಧಿತರ ಆತಂಕಗಳಿಗೆ ಇನ್ನೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಹಾಗೂ ವಿಧಾನಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪ್‌ಚಂದ್ರ ಶೆಟ್ಟಿ ಹೇಳಿದರು.
ಕುಂದಾಪುರದ ಆರ್‌ಎನ್ ಶೆಟ್ಟಿ ಸಂಕೀರ್ಣದ ಗಿಳಿಯಾರು ಕುಶಲ ಹೆಗ್ಡೆ ಸಭಾಭವನದಲ್ಲಿ ಸೋಮವಾರ ಉಡುಪಿ ಜಿಲ್ಲಾ ರೈತ ಸಂಘದ ವತಿಯಿಂದ ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ಕುರಿತು ಆಯೋಜಿಸಿದ್ದ ಹಕ್ಕೊತ್ತಾಯ ಹಾಗೂ ಚರ್ಚಾ ಸಭೆಯಲ್ಲಿ ಅವರು ಮಾತನಾಡಿದರು.ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ ಸರ್ಕಾರ ಹಲವು ಹಂತಗಳಲ್ಲಿ ಪರಿಶೀಲನೆ ನಡೆಸಿದ್ದರೂ, ಅದರಿಂದ ನಿರೀಕ್ಷಿತ ಪರಿಹಾರ ಇನ್ನೂ ಸಿಕ್ಕಿಲ್ಲ. ರೈತರು ಹಾಗೂ ಸ್ಥಳೀಯ ನಿವಾಸಿಗಳ ಹಕ್ಕುಗಳಿಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ. ಕರಡು ಅಧಿಸೂಚನೆ ಸಿದ್ಧಪಡಿಸುವ ಸಂದರ್ಭದಲ್ಲಿ ವರದಿಯ ಮೂಲ ಆಶಯಗಳನ್ನು ಬದಲಾಯಿಸುವುದರಿಂದ ಗೊಂದಲ ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.ಸಾಮಾಜಿಕ ಮುಖಂಡ ಡಾ. ಅತುಲ್ ಕುಮಾರ್ ಶೆಟ್ಟಿ ಮಾತನಾಡಿ, ಯಾವುದೇ ಅಭಿವೃದ್ಧಿ ಅಥವಾ ಪರಿಸರ ಸಂಬಂಧಿತ ಯೋಜನೆಗಳನ್ನು ಜನರ ಸಹಭಾಗಿತ್ವ ಹಾಗೂ ಒಪ್ಪಿಗೆಯೊಂದಿಗೆ ಜಾರಿಗೊಳಿಸಬೇಕಾಗಿದೆ. ಆದರೆ ಜನರಿಗೆ ಸಮರ್ಪಕ ಮಾಹಿತಿ ನೀಡದೆ, ಅವರನ್ನು ಕತ್ತಲಿನಲ್ಲಿ ಇಟ್ಟುಕೊಂಡೇ ಯೋಜನೆ ಅನುಷ್ಠಾನಕ್ಕೆ ನಿರಂತರ ಪ್ರಯತ್ನ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದರು.ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಕಾರ್ಕಳ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಸಹಾಯಕ ಸಂರಕ್ಷಣಾಧಿಕಾರಿ ದಿನೇಶ್ ಮಾಹಿತಿ ನೀಡಿದರು.ಜಯರತ್ನ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತಗ್ಗರ್ಸೆ, ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್. ಪ್ರತಾಪ್‌ಚಂದ್ರ ಶೆಟ್ಟಿ, ಹಿರಿಯ ವಕೀಲ ಉಮೇಶ್ ಶೆಟ್ಟಿ ಶಾನ್ಕಟ್ಟು, ಅರಣ್ಯ ಇಲಾಖೆಯ ಅಧಿಕಾರಿಗಳಾದ ಕಿರಣ್ ಬಾಬು ಹಾಗೂ ಮಂಜುನಾಥ ಗಾಣಿಗ, ಮಲ್ಯಾಡಿ ಶಿವರಾಮ ಶೆಟ್ಟಿ, ಡಾ. ಅತುಲ್ ಕುಮಾರ್ ಶೆಟ್ಟಿ, ಸೀತಾರಾಮ ಗಾಣಿಗ, ರೋಹಿತ್ ಕುಮಾರ್ ಶೆಟ್ಟಿ ಸಿದ್ದಾಪುರ, ಸಂಪತ್ ಕುಮಾರ್ ಶೆಟ್ಟಿ ಕಾವ್ರಾಡಿ, ಸದಾನಂದ ಶೆಟ್ಟಿ ಕೆದೂರು, ಭೋಜು ಕುಲಾಲ್, ಚಂದ್ರಶೇಖರ ಶೆಟ್ಟಿ ಬಿದ್ಕಲ್‌ಕಟ್ಟೆ, ಪ್ರಭಾಕರ ಶೆಟ್ಟಿ ಕೊಲ್ಲೂರು, ಪ್ರದೀಪ್ ಬಲ್ಲಾಳ್, ಪ್ರದೀಪ್ ಯಡಿಯಾಳ್, ಶ್ರವಣ್ ಕುಮಾರ್ ಶೆಟ್ಟಿ ಸಂಪಿಗೇಡಿ ಮತ್ತಿತರರಿದ್ದರು.
ಪತ್ರಕರ್ತರಾದ ಚಿತ್ತೂರು ಪ್ರಭಾಕರ ಆಚಾರ್ಯ, ಲಕ್ಷ್ಮಣ ಶೆಟ್ಟಿ ಜಡ್ಕಲ್, ಜಯಕರ ಶೆಟ್ಟಿ ಯಡ್ತಾಡಿ, ಸುರೇಶ್ ಶೆಟ್ಟಿ ಬೆಳ್ವೆ, ಜಡ್ಕಲ್ ನಾರಾಯಣ ಶೆಟ್ಟಿ ಹಾಗೂ ಯೋಗೀಶ್ ಶೇಡಿಮನೆ ಚರ್ಚೆಯಲ್ಲಿ ಪಾಲ್ಗೊಂಡರು.ಉಡುಪಿ ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಸತೀಶ್ ಕಿಣಿ ಬೆಳ್ವೆ ನಿರೂಪಿಸಿದರು.ಮರಳು ಸಮಸ್ಯೆ ಎದುರಾದಾಗ ಬೆಂಗಳೂರಿಗೆ ಹಲವು ಬಾರಿ ತೆರಳಿ ಸರ್ಕಾರದ ಗಮನ ಸೆಳೆಯುವ ನಾವು, ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಸರ್ಕಾರಕ್ಕೆ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವಲ್ಲಿ ಅಗತ್ಯ ಮಟ್ಟದ ಕಾಳಜಿ ತೋರುತ್ತಿಲ್ಲ.-ಪ್ರತಾಪ್‌ಚಂದ್ರ ಶೆಟ್ಟಿ ವಿಧಾನ ಸಭಾ ಪರಿಷತ್ ಮಾಜೀ ಸಭಾಪತಿ, ಉಡುಪಿ ಜಿಲ್ಲಾ ರೈತ ಸಂಘದ ಅಧ್ಯಕ್ಷ