ಕಳೆದ ವಿಧಾನಸಭಾ ಚುನಾವಣೆ ಸೋಲಿನ ನಂತರವೂ ನಾನು ಕ್ಷೇತ್ರ ತೊರೆಯದೆ, ಕಾರ್ಯಕರ್ತರು ಮತ್ತು ಸಾರ್ವಜನಿಕರ ಕೆಲಸಗಳಿಗೆ ಶ್ರಮವಿಟ್ಟು ಸೇವೆ ಮಾಡುತ್ತಿದ್ದೇನೆ. ನನಗೆ ಬೆಂಬಲ ನೀಡಿದ ಸಾರ್ವಜನಿಕರ ಕೆಲಸಗಳನ್ನು ನಿಷ್ಠೆಯಿಂದ ಮಾಡಿ, ಕ್ಷೇತ್ರಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ತರಲು ಬದ್ಧವಾಗಿ ಕೆಲಸ ಮಾಡಿದ್ದೇನೆ. ನಾನು ಡಿ.ಕೆ. ಶಿವಕುಮಾರ್ ಅವರ ಗರಡಿಯಲ್ಲಿ ಪಳಗಿದ್ದು, ಪಕ್ಷನಿಷ್ಠೆ ಮತ್ತು ಶಿಸ್ತು ರೂಢಿಸಿಕೊಂಡಿದ್ದೇನೆ ಎಂದು ಹೇಳಿದರು. ರಾಜ್ಯ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನ ನೀಡಿದ್ದರೂ, ಅನುದಾನ ನೀಡುತ್ತಿಲ್ಲ ಎನ್ನುವ ಶಾಸಕರ ಹೇಳಿಕೆ ತರವಲ್ಲದ್ದು ಎಂದು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ತಾಲೂಕು ಅಧ್ಯಕ್ಷ ಮುರುಳಿ ಮೋಹನ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಸಕಲೇಶಪುರ
ರಾಜ್ಯ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಅನುದಾನ ನೀಡಿದ್ದರೂ, ಅನುದಾನ ನೀಡುತ್ತಿಲ್ಲ ಎನ್ನುವ ಶಾಸಕರ ಹೇಳಿಕೆ ತರವಲ್ಲದ್ದು ಎಂದು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ತಾಲೂಕು ಅಧ್ಯಕ್ಷ ಮುರುಳಿ ಮೋಹನ್ ಹೇಳಿದ್ದಾರೆ.ಪಟ್ಟಣದ ರೈತ ಭವನದಲ್ಲಿ ಈ ತಿಂಗಳ ೬ರಂದು ವಿವಿಧ ಕಾಮಗಾರಿಗಳಿಗೆ ಸಂಕೇತ ಸ್ಥಾಪನೆ ಹಾಗೂ ಹಕ್ಕುಪತ್ರ ವಿತರಣೆ ಮಾಡಲು ಆಗಮಿಸುವ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳ ಸಭೆಯ ಅಂಗವಾಗಿ, ಪಂಚಾಯಿತಿ ಮಟ್ಟದ ನಾಯಕರು ಹಾಗೂ ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪಕ್ಷವು ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿದ್ದು, ಪಕ್ಷ ಸೇರ್ಪಡೆಯ ಪ್ರಮಾಣ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಬೇರೆ ಪಕ್ಷಗಳಿಂದ ಸೇರ್ಪಡೆಯಾಗುವವರನ್ನು ಆತ್ಮೀಯವಾಗಿ ಸ್ವಾಗತಿಸಬೇಕು ಎಂದು ಹೇಳಿದರು.ಕಳೆದ ವಿಧಾನಸಭಾ ಚುನಾವಣೆ ಸೋಲಿನ ನಂತರವೂ ನಾನು ಕ್ಷೇತ್ರ ತೊರೆಯದೆ, ಕಾರ್ಯಕರ್ತರು ಮತ್ತು ಸಾರ್ವಜನಿಕರ ಕೆಲಸಗಳಿಗೆ ಶ್ರಮವಿಟ್ಟು ಸೇವೆ ಮಾಡುತ್ತಿದ್ದೇನೆ. ನನಗೆ ಬೆಂಬಲ ನೀಡಿದ ಸಾರ್ವಜನಿಕರ ಕೆಲಸಗಳನ್ನು ನಿಷ್ಠೆಯಿಂದ ಮಾಡಿ, ಕ್ಷೇತ್ರಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ತರಲು ಬದ್ಧವಾಗಿ ಕೆಲಸ ಮಾಡಿದ್ದೇನೆ. ನಾನು ಡಿ.ಕೆ. ಶಿವಕುಮಾರ್ ಅವರ ಗರಡಿಯಲ್ಲಿ ಪಳಗಿದ್ದು, ಪಕ್ಷನಿಷ್ಠೆ ಮತ್ತು ಶಿಸ್ತು ರೂಢಿಸಿಕೊಂಡಿದ್ದೇನೆ ಎಂದು ಹೇಳಿದರು.ಕಳೆದ ಚುನಾವಣೆಯಲ್ಲಿ ನನ್ನ ವಿರುದ್ಧ ಕಾಂಗ್ರೆಸ್‌ನವರೇ ಕೆಲಸ ಮಾಡಿದ ಕಾರಣ ಸೋಲನುಭವಿಸುವಂತಾಯಿತು. ಬಳಿಕ ಪಕ್ಷ ಬಲಪಡಿಸಲು ನಿಷ್ಠಾವಂತ ಕಾರ್ಯಕರ್ತರೊಂದಿಗೆ ಸಂಚರಿಸಿ ಪಕ್ಷವನ್ನು ಮತ್ತಷ್ಟು ಬಲಿಷ್ಟಗೊಳಿಸಿದ್ದೇನೆ ಎಂದು ಅವರು ವಿವರಿಸಿದರು. ಕ್ಷೇತ್ರದ ಚುನಾಯಿತ ಪ್ರತಿನಿಧಿಗಳು ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕ್ಷೇತ್ರಕ್ಕೆ ಅನುದಾನ ನೀಡುತ್ತಿಲ್ಲ ಎನ್ನುವುದು ಸರಿಯಲ್ಲ. ಇತ್ತೀಚಿನ ದಿನಗಳಲ್ಲಿ ಕ್ಷೇತ್ರದಲ್ಲಿ ೧೦೦ಕ್ಕೂ ಹೆಚ್ಚು ಭೂಮಿಪೂಜೆ, ಗುದ್ದಲಿಪೂಜೆ ಕಾರ್ಯಕ್ರಮಗಳು ನಡೆದಿವೆ. ಶಾಸಕರು ಅನುದಾನವನ್ನು ತಮ್ಮ ಮನೆಗಳಿಂದ ತರುವವರಲ್ಲ, ಸರ್ಕಾರ ನೀಡಿದ ಅನುದಾನದಿಂದಲೇ ಈ ಕಾಮಗಾರಿಗಳು ನಡೆಯುತ್ತಿವೆ ಹೇಳಿದರು.
ಮುಂದಿನ ದಿನಗಳಲ್ಲಿ ಸುಳ್ಳು ಪ್ರಚಾರ ಮಾಡುವ ಶಾಸಕರ ವಿರುದ್ಧ ಮನೆ-ಮನೆಗೆ ತೆರಳಿ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ಮನವರಿಕೆ ಮಾಡಲಾಗುವುದು ಎಂದು ಹೇಳಿದರು. ಈ ತಿಂಗಳ ೬ರಂದು ನಡೆಯುವ ಕಾರ್ಯಕ್ರಮಕ್ಕೆ ೨೬ ಗ್ರಾಮ ಪಂಚಾಯಿತಿಗಳಿಂದ ಬಡವರ ಮನೆಯ ಹಕ್ಕು ಪತ್ರವನ್ನು ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಭಾಗವಹಿಸಬೇಕು ಹಾಗೂ ತಾಲೂಕಿನಿಂದ ಸುಮಾರು ೩೦ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭರಮುಡಿ ಚಂದ್ರು ಮಾತನಾಡಿ, ಮುರಳಿ ಮೋಹನ್ ಅವರು ಚುನಾವಣೆಯ ನಂತರವೂ ಕ್ಷೇತ್ರ ಬಿಟ್ಟು ಹೋಗದೆ, ಅನುದಾನಗಳನ್ನು ತರಲು ಶ್ರಮಿಸುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ವಿರೋಧ ಪಕ್ಷಕ್ಕಿಂತ ಕಾಂಗ್ರೆಸ್‌ನವರೇ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿದರು. ಈಗ ಅಂತಹ ನಾಯಕರನ್ನು ಬದಿಗಿಟ್ಟು ಪಕ್ಷವನ್ನು ಬಲಪಡಿಸಿದ್ದೇವೆ ರೈತ ಭವನದಲ್ಲಿ ಕಾರ್ಯಕರ್ತರು ಹಾಗೂ ಮುಖಂಡರಿಂದ ತುಂಬಿದೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣ್ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ದಿನದಿಂದ ದಿನಕ್ಕೆ ಬಲಿಷ್ಠಗೊಳ್ಳುತ್ತಿದೆ. ೨೦೨೮ರಲ್ಲಿ ಈ ಕ್ಷೇತ್ರ ಕಾಂಗ್ರೆಸ್‌ಪಕ್ಷದದಾಗುವುದು ಖಚಿತ. ಮುರಳಿ ಮೋಹನ್ ಅವರು ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭಾಸ್ಕರ್ ಹನುಬಾಳು, ಪುರಸಭೆ ಮಾಜಿ ಅಧ್ಯಕ್ಷ ಸಯ್ಯದ್ ಮುಫೀಜ್, ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕಾಧ್ಯಕ್ಷೆ ಅನ್ನಪೂರ್ಣ, ಮನೆಮಹಲ್ ಗ್ರಾಮ ಪಂಚಾಯಿತಿ ಸದಸ್ಯ ಹಸೈನಾರ್ ಆನೆಮಹಲ್ ಸೇರಿದಂತೆ ಕಲ್ಗನೆ ಪ್ರಶಾಂತ್, ಬೈಕೆರೆ ದೇವರಾಜ್ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.