ಸಾರಾಂಶ
ಕನ್ನಡಪ್ರಭ ವಾರ್ತೆ ಬೇಲೂರು
ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಹಾಗೂ ಮಾಜಿ ಸಚಿವ ಬಿ ಶಿವರಾಂ ಅವರ ಹುಟ್ಟುಹಬ್ಬವನ್ನು ತಾಲೂಕಿನ ಹಗರೆ ಗ್ರಾಮದ ಅಂಗಡಿಹಳ್ಳಿಯ ಆಶ್ರಮ ಶಾಲೆಯ ಆವರಣದಲ್ಲಿ ಆಚರಿಸಲಾಯಿತು. ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ರವೀಶ್ ಬಸವಾಪುರ ನೇತೃತ್ವದಲ್ಲಿ ಗಿಡಗಳನ್ನು ನೆಡುವ ಮೂಲಕ ಹಾಗೂ ಕೇಕ್ ಕತ್ತರಿಸಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.ಈ ವೇಳೆ ಮಾತನಾಡಿದ ಅವರು, ಲೋಕಸಭಾ ಸದಸ್ಯರಾದ ಶ್ರೇಯಸ್ ಪಟೇಲ್ ಅವರ ಹುಟ್ಟುಹಬ್ಬವನ್ನು ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಅವರ ಅಭಿಮಾನಿಗಳೊಂದಿಗೆ ಸೇರಿ ಆಚರಿಸುತ್ತಿದ್ದು, ನಮ್ಮ ಮಾಜಿ ಸಚಿವರು ನಿರಂತರವಾಗಿ ೪೦ ವರ್ಷಗಳಿಂದ ರಾಜಕೀಯದಲ್ಲಿ ಯಾವುದೇ ರೀತಿಯಲ್ಲಿ ಕಪ್ಪು ಚುಕ್ಕಿ ಇಲ್ಲದೆ ನಾಲ್ಕು ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿ ಉತ್ತಮ ಆಡಳಿತ ನಡೆಸಿದ್ದಾರೆ. ಹಾಸನದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ಕೊಟ್ಟಿದ್ದಾರೆ. ಹಾಗೂ ಲೋಕಸಭಾ ಸದಸ್ಯರು ಕೂಡ ಕ್ರಿಯಾಶೀಲರಾಗಿ ಎಲ್ಲಾ ಕ್ಷೇತ್ರದಲ್ಲೂ ಓಡಾಡಿ ಅಭಿವೃದ್ಧಿ ಕಡೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಇವರಿಬ್ಬರೂ ರಾಜಕೀಯ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಲಿ ಎಂದು ಗೆಳೆಯರ ಬಳಗದ ವತಿಯಿಂದ ಆಶಿಸುತ್ತಿದ್ದೇನೆ ಎಂದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವೆಂಕಟೇಶ್ ಮಾದಿಹಳ್ಳಿ, ಗ್ಯಾರಂಟಿ ಸಮಿತಿ ಸದಸ್ಯ ಅಶೋಕ್ ದೇವಿಹಳ್ಳಿ, ಉಪೇಂದ್ರ, ಮಹೇಶ್, ಬಾಲರಾಜ್ ಹಗರೆ, ರಮೇಶ್ ಹಗರೆ, ಚೇತನ್ ಮಲ್ಲಿಕಾರ್ಜುನಪುರ, ಹರ್ಷ ಕಲ್ಕೆರೆ, ಗೋಪಿ ಮೊದಲಾದವರಿದ್ದರು.