ಬೇಡಿಕೆ ಈಡೇರಿಕೆಗೆ ಪೌರ ನೌಕರರ ಪ್ರತಿಭಟನೆ

| Published : Apr 30 2025, 12:31 AM IST

ಸಾರಾಂಶ

ಸಮಸ್ತ ಪೌರ ನೌಕರರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ತಮಟೆ ಚಳವಳಿ ಜೊತೆಗೆ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರಮುಖವಾದ ನ್ಯಾಯಸಮ್ಮತ ಬೇಡಿಕೆಗಳೆಂದರೆ, ರಾಜ್ಯ, ನಗರ, ಸ್ಥಳೀಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಕೆ ಜಿಐಡಿ, ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನಮಗೂ ವಿಸ್ತರಿಸಬೇಕು ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಸಮಸ್ತ ಪೌರ ನೌಕರರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದಿಂದ ತಮಟೆ ಚಳವಳಿ ಜೊತೆಗೆ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್‌. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದರು. ಇದೇ ವೇಳೆ ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್ ಮಾಧ್ಯಮದೊಂದಿಗೆ ಮಾತನಾಡಿ, ಸಂಘಟನೆಯ ಹಾಸನ ಶಾಖೆ ಮತ್ತು ಜಿಲ್ಲಾ ಶಾಖೆ ಇವರ ವತಿಯಿಂದ ರಾಜ್ಯದ ಸಮಸ್ತ ಪೌರ ನೌಕರರ ನ್ಯಾಯಸಮ್ಮತವಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ತಮಟೆ ಚಳವಳಿ ಮತ್ತು ಮೆರವಣಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಪ್ರಮುಖವಾದ ನ್ಯಾಯಸಮ್ಮತ ಬೇಡಿಕೆಗಳೆಂದರೆ, ರಾಜ್ಯ, ನಗರ, ಸ್ಥಳೀಯ ಸಂಸ್ಥೆಯ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಕೆ ಜಿಐಡಿ, ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲಾ ಸೌಲಭ್ಯಗಳನ್ನು ನಮಗೂ ವಿಸ್ತರಿಸಬೇಕು ಎಂದರು.

ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ನೀರು ಸರಬರಾಜು ಸಹಾಯಕರು, ವಾಹನ ಚಾಲಕರು, ಒಳಚರಂಡಿ ವಿಭಾಗದ ನೌಕರರು, ಬೀದಿ ದೀಪ ಸಹಾಯಕರು, ಲೋಡರ್ಸ್, ಪಾಕ್ ೯ ಗಾರ್ಡನರ್, ಸ್ಯಾನಿಟರಿ ಸೂಪರ್ ವೈಸರ್, ಡಾಟಾ ಎಂಟ್ರಿ ಆಪರೇಟರ್ಸ್, ವಾಹನ ಸಹಾಯಕರು ಇವರುಗಳನ್ನು ನೇರ ಪಾವತಿ ಯೋಜನೆಯಲ್ಲಿ ತರಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಪೌರ ನೌಕರರ ಶಾಖಾ ಸಂಘದ ಅಧ್ಯಕ್ಷ ವೆಂಕಟೇಶ್, ಉಪಾಧ್ಯಕ್ಷ ರಮೇಶ್, ಸಂಘಟನಾ ಕಾರ್ಯದರ್ಶಿ ಪರಶುರಾಮು ಸೇರಿದಂತೆ ಸದಸ್ಯರು ಪಾಲ್ಗೊಂಡಿದ್ದರು.