ಶಿವಮೊಗ್ಗದಲ್ಲಿ ‘ನಮೋ ಯುವ ರನ್’

| Published : Sep 22 2025, 01:00 AM IST

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಅಂಗವಾಗಿ ನಗರದಲ್ಲಿ ಭಾನುವಾರ ನಮೋ ಯುವ ರನ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಅಂಗವಾಗಿ ನಗರದಲ್ಲಿ ಭಾನುವಾರ ನಮೋ ಯುವ ರನ್‌ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನಗರದ ನೆಹರು ಕ್ರೀಡಾಂಗಣದಲ್ಲಿ ಮ್ಯಾರಾಥಾನ್ ಓಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು. ನೆಹರೂ ಕ್ರೀಡಾಂಗಣದಿಂದ 3.5 ಕಿಮೀ ಮ್ಯಾರಥಾನ್ ಓಟ ಆಯೋಜಿಸಲಾಗಿತ್ತು.

ಚಾಲನೆ ಕಾರ್ಯಕ್ರಮದಲ್ಲಿ ಯುವಮೋರ್ಚಾ ರಾಜ್ಯಾಧ್ಯಕ್ಷ ಧೀರರಾಜ್ ಮುನಿರಾಜು, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಎಸ್‌.ಎನ್‌.ಚನ್ನಬಸಪ್ಪ, ನಟಿ ಕಾರುಣ್ಯರಾಮ್, ನಟ ಗೌರಿ ಶಂಕರ್, ಚೆಸ್ ಆಟಗಾರ ಸ್ಟ್ಯಾನಿ, ಅಥ್ಲೆಟಿಕ್ ಕ್ರೀಡಾಪಟು ಸೌಮ್ಯ ಸಾವಂತ್ ಭಾಗಿಯಾಗಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ ಹಾಗೂ ಇತರರು ಜೈ ಹೋ ಹಾಡಿಗೆ ಹೆಜ್ಜೆ ಹಾಕಿದರು.

ನೆಹರೂ ಕ್ರೀಡಾಂಗಣದಿಂದ ಆರಂಭವಾದ ಮ್ಯಾರಥಾನ್ ಓಟ ಮಹಾವೀರ ಸರ್ಕಲ್, ಬಿಎಚ್ ರಸ್ತೆ, ಸಾವರ್ಕರ್ ಸರ್ಕಲ್, ಗೋಪಿ ಸರ್ಕಲ್, ಜೈಲ್ ಸರ್ಕಲ್, ಕುವೆಂಪು ರಸ್ತೆ ಮೂಲಕ ಪುನಃ ನೆಹರೂ ಕ್ರೀಡಾಂಗಣ ತಲುಪಿತು.

ಒಟ್ಟು ಆರು ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಿದ್ದು, 18 ವಯೋಮಿತಿಗಿಂತ ಕೆಳಗಿನ ಯುವಕ ಮತ್ತು ಯುವತಿಯರು ಪ್ರತ್ಯೇಕ, 18 ರಿಂದ 45 ವರ್ಷದ ಮಹಿಳೆ ಮತ್ತು ಪುರುಷರಿಗೆ ಪ್ರತ್ಯೇಕ ಹಾಗೂ 45 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆ ಒಟ್ಟು ಆರು ವಿಭಾಗದಲ್ಲಿ ವಿಜೇತರಿಗೆ ಪ್ರಥಮ ಬಹುಮಾನ 5000 ರು., ದ್ವಿತೀಯ 3000 ರು. ಹಾಗೂ ತೃತೀಯ 2000 ರು. ನಗದು ಬಹುಮಾನವನ್ನು ವಿತರಿಸಲಾಯಿತು.