ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಅಗತ್ಯ

| Published : Jan 09 2024, 02:00 AM IST

ಸಾರಾಂಶ

ಎಲ್ಲರೂ ಗ್ರಾಹಕ ಕಾನೂನು ಸೇವೆಗಳ ಅರಿವು ಹೊಂದಿರಬೇಕು. ಇಲಾಖೆಗಳು ಗ್ರಾಹಕರಿಗೆ ಕಾನೂನಿನ ಅರಿವು ಮೂಡಿಸಬೇಕು. ಖರೀದಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು.

ಕನ್ನಡಪ್ರಭ ವಾರ್ತೆ ವಿಜಯಪುರಗ್ರಾಹಕರು ತಮ್ಮ ಹಕ್ಕಿನ ಬಗ್ಗೆ ಅರಿವು ಹೊಂದಬೇಕು. ಇದಕ್ಕೆ ಸಂಬಂಧಿಸಿದ ಇಲಾಖೆಗಳು ಗ್ರಾಹಕರ ಹಕ್ಕುಗಳು ಮತ್ತು ಕಾನೂನುಗಳ ಅರಿವು ಮೂಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ ಕುಂದರ್ ಹೇಳಿದರು.

ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ನ್ಯೂ ಸಂಸ್ಥೆ ವಿಜಯಪುರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆ -೨೦೨೩ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಎಲ್ಲರೂ ಗ್ರಾಹಕ ಕಾನೂನು ಸೇವೆಗಳ ಅರಿವು ಹೊಂದಿರಬೇಕು. ಇಲಾಖೆಗಳು ಗ್ರಾಹಕರಿಗೆ ಕಾನೂನಿನ ಅರಿವು ಮೂಡಿಸಬೇಕು. ಖರೀದಿಸುವ ವಸ್ತುಗಳ ಬಗ್ಗೆ ತಿಳುವಳಿಕೆ ಹೊಂದಿರಬೇಕು. ತಾವು ಕೊಂಡುಕೊಳ್ಳುವ ವಸ್ತುವಿನ ಮೇಲೆ ಮುದ್ರಿಸಿದ ಅಂಶಗಳನ್ನು ಗಮನಿಸಬೇಕು. ಗ್ರಾಹಕರು ತಾವು ಖರೀದಿಸುವ ವಸ್ತುಗಳಿಗೆ ರಸೀದಿ ಪಡೆದುಕೊಳ್ಳಬೇಕು ಎಂದು ಹೇಳಿದರು.

ವಿಜಯಪುರ ಬಳಕೆದಾರರ ಸಂಘದ ಅಧ್ಯಕ್ಷ ಹಾಗೂ ನ್ಯಾಯವಾದಿ ಎಂ.ಜಿ. ಮಠಪತಿ ಮಾತನಾಡಿ, ಡಿಜಿಟಲ್ ಹೆಸರಿನಲ್ಲಿ ಹಲವರು ಮೋಸಕ್ಕೊಳಗಾಗುತ್ತಿರುವುದು. ಆನ್‌ಲೈನ್ ವಂಚನೆ ಬಗ್ಗೆ ಜಾಗೃತರಾಗಿರಬೇಕು ಎಂದರು. ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗದ ಮಹಿಳಾ ಸದಸ್ಯ ವಿದ್ಯಾ ಗಲಗಲಿ, ಪ್ರಾಂಶುಪಾಲ ಎ.ಐ. ವಿಜಯಪುರ, ಶ್ರೀಕಾಂತ ಬುರಣಪೂರ, ಡಿ.ಆರ್‌ ನಾಯ್ಕೊಡಿ, ಡಾ.ಎಸ್.ಎಂ ಕರೇಕಲ್ ಮುಂತಾದವರು ಇದ್ದರು.ಪ್ರಾತ್ಯಕ್ಷಿಕೆಗಳ ಪ್ರದರ್ಶನ: ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳಿಗಾಗಿ ಪ್ರಾತ್ಯಕ್ಷಿಕೆಗಳು ನಡೆಯಿತು. ದಿನನಿತ್ಯ ಬಳಸುವ ಆಹಾರ ಪದಾರ್ಥಗಳಲ್ಲಿ ಕಲಬೆರಕೆ, ಅವುಗಳಿಂದ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ತಿಳಿಸಲಾಯಿತು. ಗ್ಯಾಸ್ ಸಿಲಿಂಡರ್ ಉಪಯೋಗಿಸುವ ಬಗೆ, ಅವುಗಳ ಬಿಡಿಭಾಗಗಳ ದುರಸ್ತಿ ಕುರಿತ ಮಾಹಿತಿ ನೀಡಲಾಯಿತು.