ಸಾರಾಂಶ
ಅರಸೀಕೆರೆ ನಗರದ ಸೇವಾ ಸಂಕಲ್ಪ ಶಾಲಾ ಆವರಣದಲ್ಲಿ ತಮ್ಮ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನಮ್ಮ ಮುಂದಿನ ಪೀಳಿಗೆಗಾಗಿ ನಾವು ಗಿಡ ಮರಗಳನ್ನು ಬೆಳೆಸಬೇಕಿದೆ, ವಿದ್ಯಾರ್ಥಿ ಜೀವನದಲ್ಲಿ ಪರಿಸರದ ಬಗ್ಗೆ ಹೆಚ್ಚಿನ ಜಾಗೃತಿ ಹೊಂದಿದಾಗ ಈ ಮಹತ್ವಾಕಾಂಕ್ಷೆ ಈಡೇರಲು ಸಾಧ್ಯವಾಗುತ್ತದೆ ಎಂದು ಇನ್ನರ್‌ವ್ಹೀಲ್ ಅಧ್ಯಕ್ಷೆ ರೇಖಾ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ವೈಜ್ಞಾನಿಕವಾಗಿ ನಾವು ಮುಂದುವರಿಯುವ ಭರದಲ್ಲಿ ನೈಸರ್ಗಿಕತೆಯನ್ನು ನಿರ್ಲಕ್ಷಿಸುತ್ತಿದ್ದೇವೆ ಈ ದೆಸೆಯಿಂದಾಗಿ ಹಲವು ರೋಗಗಳಿಗೆ ಕಾರಣವಾಗಿದೆ ಎಂದು ಇನ್ನರ್‌ವ್ಹೀಲ್ ಅಧ್ಯಕ್ಷೆ ರೇಖಾ ಆತಂಕ ವ್ಯಕ್ತಪಡಿಸಿದರುಅವರು ನಗರದ ಸೇವಾ ಸಂಕಲ್ಪ ಶಾಲಾ ಆವರಣದಲ್ಲಿ ತಮ್ಮ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಮುಂದಿನ ಪೀಳಿಗೆಗಾಗಿ ನಾವು ಗಿಡ ಮರಗಳನ್ನು ಬೆಳೆಸಬೇಕಿದೆ, ವಿದ್ಯಾರ್ಥಿ ಜೀವನದಲ್ಲಿ ಪರಿಸರದ ಬಗ್ಗೆ ಹೆಚ್ಚಿನ ಜಾಗೃತಿ ಹೊಂದಿದಾಗ ಈ ಮಹತ್ವಾಕಾಂಕ್ಷೆ ಈಡೇರಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಪರಿಸರ ಕುರಿತಂತೆ ನಾವು ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಏರ್ಪಡಿಸಿದ್ದು ವಿದ್ಯಾರ್ಥಿಗಳು ಉತ್ತಮವಾಗಿ ಸ್ಪಂದಿಸಿದ್ದಾರೆ. ಆಯ್ದ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ಬಹುಮಾನ ನೀಡಿ ಪ್ರೋತ್ಸಾಹಿಸಿದ್ದೇವೆ ಎಂದರು. ಇಂತಹ ಕಾರ್ಯಕ್ರಮ ನಡೆಯಲು ಅವಕಾಶ ಕಲ್ಪಿಸಿಕೊಟ್ಟ ಶಾಲಾ ಸಂಸ್ಥೆಗೆ ಅವರು ಕೃತಜ್ಞತೆ ಹೇಳಿದರು.ಶಾಲಾ ಮುಖ್ಯ ಶಿಕ್ಷಕ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ ಇನ್ನರ್‌ವ್ಹೀಲ್ ಸಂಸ್ಥೆ ನಮ್ಮ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹೆಚ್ಚಿನ ಆಸಕ್ತಿ ಮೂಡುವಂತೆ ಮಾಡಿದ್ದೀರಿ, ಅಲ್ಲದೆ ಇದರ ನೆನಪಿಗಾಗಿ ತೆಂಗಿನ ಸಸಿಯನ್ನ ತಂದು ನಮ್ಮ ಶಾಲಾವರಣದಲ್ಲಿ ನೆಡುತ್ತಿರುವುದು ಶಾಶ್ವತ ನೆನಪಾಗಿ ಉಳಿಯಲಿದೆ ಎಂದ ಅವರು, ಇನ್ನರ್‌ವ್ಹೀಲ್ ಸಂಸ್ಥೆ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಜನಸ್ನೇಹಿ ಬಹಳ ದೊಡ್ಡ ಮಟ್ಟದಲ್ಲಿ ಬೆಳೆದಿದೆ. ಸಂಸ್ಥೆಯ ಸಹಕಾರ ಈ ಶಾಲೆಗೆ ಇರಲಿ ಎಂದು ಅವರು ಆಶಿಸಿದರು.
ಕಾರ್ಯಕ್ರಮದಲ್ಲಿ ಸೇವಾ ಸಂಕಲ್ಪ ಶಾಲಾ ಸಂಸ್ಥೆಯ ಮುಖ್ಯಸ್ಥ ಸತ್ಯನಾರಾಯಣ್ ಶಿಕ್ಷಕ ಓಂಕಾರಪ್ಪ, ಸಂಸ್ಥೆಯ ಪದಾಧಿಕಾರಿಗಳಾದ ಲಲಿತಾ, ಹೇಮಾ, ರೋಹಿಣಿ, ಶ್ವೇತ ಹಾಗೂ ಇತರೆ ಸದಸ್ಯರು ಪಾಲ್ಗೊಂಡಿದ್ದರು.