ಸಾರಾಂಶ
ಕನ್ನಡಪ್ರಭ ವಾರ್ತೆ ಕೋಲಾರಮುಸಲ್ಮಾನರ ಪವಿತ್ರ ರಂಜಾನ್ ಹಬ್ಬವನ್ನು ನಗರದ ಕ್ಲಾರ್ಕ್ ಟವರ್ ಈದ್ಗಾ ಮೈದಾನ ಹಾಗೂ ಚಿಕ್ಕಬಳ್ಳಾಪುರ ರಸ್ತೆಯ ಸಂಗೊಂಡಹಳ್ಳಿ ಬಳಿಯ ದರ್ಗಾ ಸಮೀಪ ಆಯೋಜಿಸಿದ್ದ ವಿಶೇಷ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಹೊಸ ಬಟ್ಟೆಗಳನ್ನು ತೊಟ್ಟು ಕುಟುಂಬ ಸಮೇತರಾಗಿ ಪ್ರಾರ್ಥನೆಗಳಿಗೆ ಆಗಮಿಸಿದ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಣೆಯಲ್ಲಿ ತೊಡಗಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರಲ್ಲದೆ, ಬಡವರಿಗೆ ಹಣ ಸೇರಿದಂತೆ ಇನ್ನಿತರೆ ವಸ್ತುಗಳನ್ನು ದಾನವಾಗಿ ನೀಡಲಾಯಿತು.ಈದ್ಗಾ ಮೈದಾನಕ್ಕೆ ಕಾಂಪೌಂಡ್‌ಶಾಸಕ ಕೊತ್ತೂರು ಮಂಜುನಾಥ್ ಈದ್ಗಾ ಮೈದಾನದಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಾಗವಹಿಸಿ ಮಾತನಾಡಿ, ನಾವೆಲ್ಲರೂ ಭೇದ ಭಾವ ಮರೆತು ಭ್ರಾತೃತ್ವದಿಂದ ರಾಜ್ಯ ,ದೇಶದ ಅಭಿವೃದ್ಧಿಗೆ ಮುಂದಾಗಬೇಕು ಅದೇ ರೀತಿ ಈದ್ಗಾ ಮೈದಾನದ ಕಾಂಪೌಂಡ್, ಬೋರ್ ವೆಲ್, ಹೈಮಾಸ್ಟ್ ಲೈಟ್ ಹಾಕಿಕೊಡಲಾಗುತ್ತದೆ ಎಂದು ಭರವಸೆ ನೀಡಿದರು.ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್, ಅಂಜುಮಾನ್ ಅಧ್ಯಕ್ಷ ಜಮೀರ್ ಅಹಮದ್, ಉಪಾಧ್ಯಕ್ಷ ಮುಸ್ತಫಾ, ಕಾರ್ಯದರ್ಶಿ ಸೈಫುಲ್ಲಾ, ಮುಖಂಡರಾದ ಅಕ್ರಂ ಪಾಷ, ಅಬ್ದುಲ್ ಖಯ್ಯಾಮ್, ಷಂಷೀರ್, ಕೆ.ವಿ ಗೌತಮ್, ಮೈಲಾಂಡಹಳ್ಳಿ ಮುರಳಿ, ನಗರಸಭೆ ಸದಸ್ಯ ಅಂಬರೀಷ್ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))