ಅರಕಲಗೂಡು ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಕಡೆಗಣನೆ

| Published : Aug 20 2025, 01:30 AM IST

ಅರಕಲಗೂಡು ಯೋಜನಾ ಪ್ರಾಧಿಕಾರದ ಅಧ್ಯಕ್ಷರಿಂದ ಕಡೆಗಣನೆ
Share this Article
  • FB
  • TW
  • Linkdin
  • Email

ಸಾರಾಂಶ

ಪಟ್ಟಣ ಪಂಚಾಯ್ತಿಯಿಂದ ತಾಲೂಕು ಯೋಜನಾ ಪ್ರಾಧಿಕಾರದ ಪ್ರತಿನಿಧಿಯಾಗಿ ಆಯ್ಕೆಗೊಂಡಿರುವ ತಮ್ಮನ್ನು ಪ್ರಾಧಿಕಾರದ ಅಧ್ಯಕ್ಷರು ನಿರ್ಲಕ್ಷಿಸುತ್ತಿದ್ದಾರೆ ಎಂದು ಪಟ್ಟಣ ಪಂಚಾಯತ್‌ ಸದಸ್ಯ ಅನಿಕೇತನ್ ಆರೋಪಿಸಿದರು.ಶಾಸಕ ಎ.ಮಂಜು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ಪ್ರಾಧಿಕಾರದ ಕುರಿತು ಮಾಡಿದ್ದ ಆರೋಪಗಳಲ್ಲಿ ಹುರುಳಿರಬಹುದೆ ಎಂಬ ಅನುಮಾನ ಉಂಟಾಗುತ್ತಿದೆ. ಅಗತ್ಯ ಸೌಕರ್ಯಗಳನ್ನು ಕಲ್ಪಿಸದೆ ನಿರ್ಮಾಣ ಮಾಡಿರುವ ಬಡಾವಣೆಗಳ ನಿವೇಶನ ಮಾರಾಟಕ್ಕೆ ಅನುಮತಿ ನೀಡುತ್ತಿರುವ ಕಾರಣ ಮೂಲಭೂತ ಸೌಕರ್ಯ ಕಲ್ಪಿಸಲು ಪಪಂಗೆ ತಲೆನೋವಾಗಿ ಪರಿಣಮಿಸಿದೆ ಎಂದು ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಪಟ್ಟಣ ಪಂಚಾಯ್ತಿಯಿಂದ ತಾಲೂಕು ಯೋಜನಾ ಪ್ರಾಧಿಕಾರದ ಪ್ರತಿನಿಧಿಯಾಗಿ ಆಯ್ಕೆಗೊಂಡಿರುವ ತಮ್ಮನ್ನು ಪ್ರಾಧಿಕಾರದ ಅಧ್ಯಕ್ಷರು ನಿರ್ಲಕ್ಷಿಸುತ್ತಿದ್ದಾರೆ ಎಂದು ಪಟ್ಟಣ ಪಂಚಾಯತ್‌ ಸದಸ್ಯ ಅನಿಕೇತನ್ ಆರೋಪಿಸಿದರು.

ಮಂಗಳವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಪಪಂ ನ 17 ಸದಸ್ಯರು, ಶಾಸಕರು, ಸಂಸದರ ಪ್ರತಿನಿಧಿಯಾಗಿ ತಾಲೂಕು ಯೋಜನಾಪ್ರಾಧಿಕಾರದ ಪ್ರತಿನಿಧಿಯಾಗಿ ನೇಮಕಗೊಂಡಿದ್ದೇನೆ, ಪ್ರಾಧಿಕಾರದ ಹಲವು ವಿಚಾರಗಳು ನನ್ನ ಗಮನಕ್ಕೆ ಬರುತ್ತಿಲ್ಲ, ಅಧ್ಯಕ್ಷರು ಮತ್ತು ವಿಧಾನ ಸಭಾ ಚುನಾವಣೆಯ ಪರಾಜಿತ ಅಭ್ಯರ್ಥಿ ಸೇರಿ ನಿರ್ಣಯಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಇವರು ಬೆಂಗಳೂರಿಗೆ ತೆರಳಿ ಯೋಜನಾ ಪ್ರಾಧಿಕಾರದ ಆಯುಕ್ತರನ್ನು ಭೇಟಿ ಮಾಡಿ ತಿಂಗಳು ಕಳೆದರೂ ಸಭೆ ನಡೆಸಿ ಸದಸ್ಯರಿಗೆ ಮಾಹಿತಿ ತಿಳಿಸಿಲ್ಲ. ಪಪಂ ಸಭೆಯಲ್ಲಿ ಅಧ್ಯಕ್ಷರು, ಸದಸ್ಯರು ಪ್ರಾಧಿಕಾರದಲ್ಲಿನ ವಿಚಾರ ಕುರಿತು ಸಭೆಯಲ್ಲಿ ಪ್ರಶ್ನಿಸಿದರೆ ಪ್ರತಿನಿಧಿಯಾಗಿರುವ ನಾನು ಉತ್ತರಿಸಲು ಸಾಧ್ಯವಾಗುತ್ತಿಲ್ಲ. ಶಾಸಕ ಎ.ಮಂಜು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ಪ್ರಾಧಿಕಾರದ ಕುರಿತು ಮಾಡಿದ್ದ ಆರೋಪಗಳಲ್ಲಿ ಹುರುಳಿರಬಹುದೆ ಎಂಬ ಅನುಮಾನ ಉಂಟಾಗುತ್ತಿದೆ. ಅಗತ್ಯ ಸೌಕರ್ಯಗಳನ್ನು ಕಲ್ಪಿಸದೆ ನಿರ್ಮಾಣ ಮಾಡಿರುವ ಬಡಾವಣೆಗಳ ನಿವೇಶನ ಮಾರಾಟಕ್ಕೆ ಅನುಮತಿ ನೀಡುತ್ತಿರುವ ಕಾರಣ ಮೂಲಭೂತ ಸೌಕರ್ಯ ಕಲ್ಪಿಸಲು ಪಪಂಗೆ ತಲೆನೋವಾಗಿ ಪರಿಣಮಿಸಿದೆ ಎಂದು ಆರೋಪಿಸಿದರು. ಪಪಂ ಅಧ್ಯಕ್ಷ ಪ್ರದೀಪ್ ಕುಮಾರ್ ಮಾತನಾಡಿ, ಪಪಂ ಅಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಎರಡೂ ಹುದ್ದೆಗಳನ್ನು ತಮ್ಮ ಪಕ್ಷಕ್ಕೆ ತಂದಿರುವುದಾಗಿ ಹೇಳಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ. ಅಂದು ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಪರ ಕಾರ್ಯ ನಿರ್ವಹಿಸಿದ್ದರು ಎಂದು ಆರೋಪಿಸಿದರು. ಪಪಂ ಸದಸ್ಯ ಅಬ್ದುಲ್ ಬಾಸಿತ್ ಈ ವೇಳೆ ಉಪಸ್ಥಿತರಿದ್ದರು.