ನೂತನ ಕಾಂಕ್ರೀಟ್ ರಸ್ತೆ ಉದ್ಘಾಟನೆ

| Published : Aug 26 2025, 02:00 AM IST

ಸಾರಾಂಶ

ನೂತನ ಕಾಂಕ್ರಿಟ್‌ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಶಾಸಕ ಎ.ಎಸ್‌. ಪೊನ್ನಣ್ಣ ಉದ್ಘಾಟಿಸಿದರು. ಈ ಸಂದರ್ಭ ಗಣ್ಯರು ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿನ ಪಂಚಾಯಿತಿಯ ಇಂದಿರಾ ನಗರದಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕರಾದ ಎ ಎಸ್ ಪೊನ್ನಣ್ಣ ಉದ್ಘಾಟಿಸಿದರು. ಈ ಹಿಂದೆ ಈ ಭಾಗಕ್ಕೆ ಶಾಸಕರು ಭೇಟಿ ನೀಡಿದ ಸಂದರ್ಭ ಸಾರ್ವಜನಿಕರು ರಸ್ತೆಯ ಅಭಿವೃದ್ಧಿಗಾಗಿ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ ಶಾಸಕರು ಅದಕ್ಕಾಗಿ 25 ಲಕ್ಷ ರು. ಅನುದಾನ ಒದಗಿಸಿದ್ದರು. ಇದನ್ನು ಶಾಸಕರು ಸಾರ್ವಜನಿಕರಿಗೆ ಬಳಕೆಗೆ ಉದ್ಘಾಟಿಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜಾ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್ ವಲಯ ಅಧ್ಯಕ್ಷ ಕುಶಾಲಪ್ಪ, ಅರುಣ್ ಬೇಬ ಹೇಮಾವತಿ ಅರುಣ್ ಮತ್ತಿತರರು ಉಪಸಿತರಿದ್ದರು.