ಸಾರಾಂಶ
ಸ್ವಚ್ಛ ಭಾರತ ಮಿಷನ್ ವತಿಯಿಂದ ಮರುಬಳಕೆಯಾಗದ ಪ್ಲಾಸ್ಟಿಕ್ ನಿಷೇಧ ಅಭಿಯಾನವನ್ನು ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಹಾಗೂ ಸ್ವಚ್ಛ ಭಾರತ್ ಮಿಷನ್ ವತಿಯಿಂದ ಮರು ಬಳಕೆಯಾಗದ ಪ್ಲಾಸ್ಟಿಕ್ ನಿಷೇಧ ಅಭಿಯಾನವನ್ನು ನಡೆಸಲಾಯಿತು.ಸ್ವಚ್ಛ ಭಾರತ್ ಮಿಷನ್ ಅಭಿಯಾನದ ಅನ್ವಯ ಈ ಅಭಿಯಾನವನ್ನು ಕೈಗೊಂಡಿದ್ದು ಕನ್ನಡ ವೃತ್ತದಲ್ಲಿ ಮರು ಬಳಕೆಯಾಗದ ಪ್ಲಾಸ್ಟಿಕ್ ಕೈಚೀಲ, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ ಪ್ಲಾಸ್ಟಿಕ್ ಬಾಟಲಿಗಳನ್ನು ಉಪಯೋಗಿಸುವುದು ಮತ್ತು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವೆಂದು ಪಟ್ಟಣದ ಕಾರ್ಯಾಚರಿಸುತ್ತಿರುವ ವ್ಯಾಪಾರಿ ಮಳಿಗೆಗೆ ಭೇಟಿ ಜಾಗೃತಿ ಹಾಗೂ ಬಳಕೆ ನಿಷೇಧ ದಂಡ ವಿಧಿಸುವ ಬಗ್ಗೆ ಮಾಹಿತಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತು ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ನೀಡಿದರು. ಜಾಗೃತಿ ಜಾಥಾವನ್ನು ನಡೆಸಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್‌ಕುಮಾರ್, ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಸದಸ್ಯರಾದ ರಫೀಕ್‌ಖಾನ್, ಪಿ.ಎಫ್.ಸಬಾಸ್ಟೀನ್, ಮಂಜುನಾಥ್, ಪಂಚಾಯಿತಿ ಲೆಕ್ಕ ಪರಿಶೋಧಕಿ ಚಂದ್ರಕಲಾ, ಗಣಕ ಯಂತ್ರ ಸಿಬ್ಬಂದಿ ಸಂದ್ಯಾ, ಕರವಸೂಲಿಗಾರ ಶ್ರೀನಿವಾಸ್ ಹಾಗೂ ಪೌರಕಾರ್ಮಿಕರು ಇದ್ದರು.