ಸಾರಾಂಶ
ಗಂಟೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ. ವಿಜಯ ಬಲ್ಲಾಳ್ ಉದ್ಘಾಟಿಸಲಿದ್ದಾರೆ. ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟ್ ಮೈಸೂರಿನ ನಿರ್ದೇಶಕ ನಾಟ್ಯಾಚಾರ್ಯ ಪ್ರೊ. ಕೆ. ರಾಮಮೂರ್ತಿ ರಾವ್ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಉಡುಪಿ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ ಅಂಬಲಪಾಡಿ ಆಶ್ರಯದಲ್ಲಿ ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್, ಕರಾವಳಿ ನೃತ್ಯ ಕಲಾವಿದರ ನೃತ್ಯ ಸಮ್ಮೇಳನ ‘ನೃತ್ಯೋತ್ಕರ್ಷ’ ಕಾರ್ಯಕ್ರಮ ಡಿ.24 ಮತ್ತು 25 ರಂದು ಉಡುಪಿಯ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನ ಸಮಿತಿ ಕಾರ್ಯಾಧ್ಯಕ್ಷ ವಿದ್ವಾನ್ ಯು.ಕೆ. ಪ್ರವೀಣ್, ಬೆಳಗ್ಗೆ 9 ಗಂಟೆಗೆ ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬಿ. ವಿಜಯ ಬಲ್ಲಾಳ್ ಉದ್ಘಾಟಿಸಲಿದ್ದಾರೆ. ನೂಪುರ ಕಲಾವಿದರು ಸಾಂಸ್ಕೃತಿಕ ಟ್ರಸ್ಟ್ ಮೈಸೂರಿನ ನಿರ್ದೇಶಕ ನಾಟ್ಯಾಚಾರ್ಯ ಪ್ರೊ. ಕೆ. ರಾಮಮೂರ್ತಿ ರಾವ್ ಸಮ್ಮೇಳನಾಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಕರ್ನಾಟಕ ಕಲಾಶ್ರೀ ಕಮಲಾಕ್ಷ ಆಚಾರ್ ಭಾಗವಹಿಸುವರು ಎಂದರು. ಬೆಳಗ್ಗಿನಿಂದ ರಾತ್ರಿಯವರೆಗೆ ನಡೆಯುವ ಸಮ್ಮೇಳನದ ಎರಡೂ ದಿನ ವಿವಿಧ ನೃತ್ಯ ಪ್ರದರ್ಶನ, ಚರ್ಚಾಗೋಷ್ಠಿ ನಡೆಯಲಿದೆ. ಡಿ.25 ರಂದು ಸಂಜೆ 4.30ಕ್ಕೆ ಸಮಾರೋಪ ನಡೆಯಲಿದ್ದು, ಪ್ರೊ. ಕೆ. ರಾಮಮೂರ್ತಿ ರಾವ್ ಸಮ್ಮೇಳನಾಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಡಾ. ಹರಿಕೃಷ್ಣ ಪಾಣಾಜೆ ಭಾಗವಹಿಸುವರು. ಶಾಂತಲಾ ಪ್ರಶಸ್ತಿ ಪುರಸ್ಕೃತ ನೃತ್ಯಗುರು ಉಳ್ಳಾಲ ಮೋಹನ ಕುಮಾರ್ ಅವರಿಗೆ ನೃತ್ಯೋತ್ಕರ್ಷ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಚಾಲಕ ಚಂದ್ರಶೇಖರ ನಾವಡ ತಿಳಿಸಿದರು.ಪ್ರಮುಖರಾದ ವಿದುಷಿ ರಾಜಶ್ರೀ ಉಳ್ಳಾಲ, ವಿದ್ವಾನ್ ಸುರೇಶ್ ಅತ್ತಾವರ, ವಿದುಷಿ ಶಾರದಾ ಮಣಿಶೇಖರ್ ಇದ್ದರು.