ಸಾರಾಂಶ
ಬೆಳಗಾವಿ: ನಗರದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರನ್ನು ಜ.22 ರಂದು ಅಯೋಧ್ಯೆಯಲ್ಲಿ ಜರುಗಲಿರುವ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಲಾಗಿದೆ. ಹುಕ್ಕೇರಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಜ.19 ರಂದು ಬೆಂಗಳೂರಿನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬುಧವಾರ ಬೆಳಗಾವಿ ಜಿಲ್ಲೆಯಿಂದ ರಾಮಮೂರ್ತಿ ಪ್ರತಿಷ್ಠಾನಾ ಕಾರ್ಯಕ್ರಮಕ್ಕೆ ತೆರಳುತ್ತಿರುವ ಶ್ರೀಗಳನ್ನು ಇಂಚಲದ ಶಿವಾನಂದ ಭಾರತಿ ಸ್ವಾಮೀಜಿ, ಪಿ.ಜಿ.ಹುಣಶ್ಯಾಳದ ನಿಜಗುಣ ದೇವರು, ಹುಬ್ಬಳ್ಳಿಯ ಅಭಿನವ ಸಿದ್ಧಾರೂಢ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಬೀದರನ ಗಣೇಶಾನಂದ ಮಹಾರಾಜರು ಗೌರವಿಸಿ ಸತ್ಕರಿಸಿ ಬೀಳ್ಕೊಟ್ಟರು.ಈ ವೇಳೆ ಮಾತನಾಡಿದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಅಯೋಧ್ಯೆಯ ಕ್ಷೇತ್ರದಲ್ಲಿ ನಡೆಯುತ್ತಿರುವ ಶ್ರೀರಾಮನ ಮೂರ್ತಿ ಪ್ರತಿಷ್ಠಾನೆ ಕಾರ್ಯಕ್ರಮಕ್ಕೆ ನನಗೆ ಆಹ್ವಾನಿಸಿದ್ದು ಸಂತಸ ತಂದಿದೆ. ಜಿಲ್ಲೆಯ ಪರವಾಗಿ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಈ ಭಾಗದ ಜನರಿಗೆ ಒಳಿತಾಗಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಅವರು, ರಾಮನ ಆದರ್ಶವನ್ನು ಎಲ್ಲರೂ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ ಎಂದರು.