ಸಾರಾಂಶ
ಕಾರೇಕೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯ, ಜಿಂಬೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ಕಳಪೆ ಕಾಮಗಾರಿ ಮಾಡುತ್ತಿದ್ದು, ಜನರನ್ನು ಬಳಸುವ ಬದಲು ಯಂತ್ರಗಳ ಮೂಲಕ ಕಾಮಗಾರಿ ಮಾಡಿಸುತ್ತಿದ್ದಾರೆ. ಈ ಕಾಮಗಾರಿಯು ಕಳಪೆಯಾಗಿದೆ. ಗುತ್ತಿಗೆದಾರ ಕುಮಾರಸ್ವಾಮಿ ಎಂಬುವರು ಮಾಡಿದ ಕಾಮಗಾರಿಯನ್ನೇ ಮತ್ತೊಮ್ಮೆ ಮಾಡುತ್ತಿದ್ದಾರೆ. ಇವರ ಮಗ ಮಂಜುನಾಥ್ ಮತ್ತು ತಂದೆ ಸೇರಿ ಕಳೆದ ಏಳೆಂಟು ವರ್ಷಗಳಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿ ಮಾಡಿ, ಹಣ ಹೊಡೆಯುತ್ತಿದ್ದಾರೆ. ಮೃತ ವ್ಯಕ್ತಿಯ ಹೆಸರಿನಲ್ಲೂ ಕಾಮಗಾರಿ ಮಾಡಿದ್ದಾರೆ ಎಂದು ಹಣ ಪಡೆಯುತ್ತಿದ್ದಾರೆ ಎಂದು ದೂರಿದರು.
ಕನ್ನಡಪ್ರಭ ವಾರ್ತೆ ಹಾಸನ
ನರೇಗಾ ಕಾಮಗಾರಿಯಲ್ಲಿ ಚರಂಡಿ ಮತ್ತು ರಸ್ತೆ ಕೆಲಸ ಕಳಪೆ ಕಾಮಗಾರಿ ಮಾಡಲಾಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಕಾರೇಕೆರೆ ಗ್ರಾಮದ ಸೋಮಶೇಖರ್ ಮತ್ತು ದಂಪತಿ ಒತ್ತಾಯಿಸಿದರು.ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ಚನ್ನರಾಯಪಟ್ಟಣ ತಾಲೂಕು ನುಗ್ಗೇಹಳ್ಳಿ ಹೋಬಳಿ ಹತ್ತಿಹಳ್ಳಿ, ಕಾರೇಕೆರೆ ಗ್ರಾಮ ಪಂಚಾಯಿತಿ ಕಾರ್ಯಾಲಯ, ಜಿಂಬೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯು ಕಳಪೆ ಕಾಮಗಾರಿ ಮಾಡುತ್ತಿದ್ದು, ಜನರನ್ನು ಬಳಸುವ ಬದಲು ಯಂತ್ರಗಳ ಮೂಲಕ ಕಾಮಗಾರಿ ಮಾಡಿಸುತ್ತಿದ್ದಾರೆ. ಈ ಕಾಮಗಾರಿಯು ಕಳಪೆಯಾಗಿದೆ. ಗುತ್ತಿಗೆದಾರ ಕುಮಾರಸ್ವಾಮಿ ಎಂಬುವರು ಮಾಡಿದ ಕಾಮಗಾರಿಯನ್ನೇ ಮತ್ತೊಮ್ಮೆ ಮಾಡುತ್ತಿದ್ದಾರೆ. ಇವರ ಮಗ ಮಂಜುನಾಥ್ ಮತ್ತು ತಂದೆ ಸೇರಿ ಕಳೆದ ಏಳೆಂಟು ವರ್ಷಗಳಿಂದ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಕಳಪೆ ಕಾಮಗಾರಿ ಮಾಡಿ, ಹಣ ಹೊಡೆಯುತ್ತಿದ್ದಾರೆ. ಮೃತ ವ್ಯಕ್ತಿಯ ಹೆಸರಿನಲ್ಲೂ ಕಾಮಗಾರಿ ಮಾಡಿದ್ದಾರೆ ಎಂದು ಹಣ ಪಡೆಯುತ್ತಿದ್ದಾರೆ ಎಂದು ದೂರಿದರು.
ಕಾರೆಕೆರೆ ಗ್ರಾಮದ ಹೊಸಕಟ್ಟೆ ಸಮಗ್ರ ಅಭಿವೃದ್ಧಿ ಕಾಮಗಾರಿಯನ್ನು ಕೆಲಸ ಮಾಡದೇ ಹಾಜರಾತಿ ನೀಡಿ ಪೇಮೆಂಟ್ ಮಾಡಿದ್ದಾರೆ. ಈ ಸಂಬಂಧ ಲೋಕಾಯುಕ್ತ ಸೇರಿ ಅನೇಕರಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಇನ್ನಾದರೂ ಸಂಬಂಧಪಟ್ಟವರು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಈ ಅಕ್ರಮದ ವಿರುದ್ಧ ನಾನು ಧ್ವನಿ ಎತ್ತಿದ್ದಕ್ಕೆ ನನ್ನ ಪತ್ನಿ ದೇವಾಲಯಗಳಿಗೆ ಹೋಗಲು ಅವಕಾಶ ಕೊಡುತ್ತಿಲ್ಲ. ದೇವರಿಗೆ ಬಳೆ, ಮಡಿಲಕ್ಕಿ ಕೊಡದಂತೆ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.ಪತ್ರಿಕಾಗೋಷ್ಠಿಯಲ್ಲಿ ಸೋಮಶೇಖರ್ ಅವರ ಪತ್ನಿ ರಜನಿ ಉಪಸ್ಥಿತರಿದ್ದರು.