ಸಾರಾಂಶ
ಶ್ರೀ ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈಗ ಬೇಸಿಗೆ ಕಾಲವಾಗಿರುವುದರಿಂದ ನೀರು ಮತ್ತು ಆಹಾರದಿಂದ ಹರಡುವ ಕಾಯಿಲೆಗಳಾದ ಅತಿಸಾರಭೇದಿ, ಕಾಲರ, ವಿಷಮಶೀತ ಜ್ವರ, ಆಮಶಂಕೆ, ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತ ಕ್ರಮವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೋರಲಾಯಿತು. ಭಕ್ತಾದಿಗಳಿಗೆ ಅನ್ನದಾಸೋಹ ನೀಡುವ ಸಮಯದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಅಡುಗೆ ಸಿಬ್ಬಂದಿಯವರಿಗೆ ಅಡುಗೆಗೆ ಬಳಸುವ ಪಾತ್ರೆಗಳು ನೀರು ಇನ್ನಿತರೆ ದಿನಸಿ ಸಾಮಗ್ರಿಗಳನ್ನು ಬಳಸುವಾಗ ಸ್ವಚ್ಛತೆಯನ್ನು ಕಾಪಾಡುವಂತೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೇಲೂರು
ಶ್ರೀ ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆರೋಗ್ಯ ಅಧಿಕಾರಿಗಳ ಕಚೇರಿಯ ತಂಡವು ಭೇಟಿ ನೀಡಿ ಶ್ರೀ ಚನ್ನಕೇಶವ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಸಾವಿರಾರು ಭಕ್ತಾದಿಗಳು ಭೇಟಿ ನೀಡುವುದರಿಂದ ಆಡಳಿತ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವಂತೆ, ಭಕ್ತಾದಿಗಳಿಗೆ ಅನ್ನದಾಸೋಹ ನೀಡುವ ಸಮಯದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಹಾಗೂ ಅಡುಗೆ ಸಿಬ್ಬಂದಿಯವರಿಗೆ ಅಡುಗೆಗೆ ಬಳಸುವ ಪಾತ್ರೆಗಳು ನೀರು ಇನ್ನಿತರೆ ದಿನಸಿ ಸಾಮಗ್ರಿಗಳನ್ನು ಬಳಸುವಾಗ ಸ್ವಚ್ಛತೆಯನ್ನು ಕಾಪಾಡುವಂತೆ ತಿಳಿಸಿದರು.
ಈಗ ಬೇಸಿಗೆ ಕಾಲವಾಗಿರುವುದರಿಂದ ನೀರು ಮತ್ತು ಆಹಾರದಿಂದ ಹರಡುವ ಕಾಯಿಲೆಗಳಾದ ಅತಿಸಾರಭೇದಿ, ಕಾಲರ, ವಿಷಮಶೀತ ಜ್ವರ, ಆಮಶಂಕೆ, ಇನ್ನಿತರ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತ ಕ್ರಮವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕೋರಲಾಯಿತು.ಪರಿಶೀಲನಾ ವೇಳೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಯೋಗೀಶ್, ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ. ವಿಜಯ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಉಷಾ, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದಯಾನಂದ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಮೋಹನ್, ಮದನ್ ಇನ್ನಿತರರು ಹಾಜರಿದ್ದರು.