ಸಾರಾಂಶ
ಕನ್ನಡಪ್ರಭ ವಾರ್ತೆ ಮುನವಳ್ಳಿ
ಮೂಲ ಸೌಕರ್ಯ ಕಲ್ಪಿಸುವ ಜತೆ ಪಟ್ಟಣದ ಅಭಿವೃದ್ಧಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹3 ಕೋಟಿ ಅನುದಾನದಲ್ಲಿ ಕಾಮಗಾರಿಗೆ ಚಾಲನೆ ನೀಡುವದು ಹಾಗೂ ಆರು ಹಾಸಿಗೆವುಳ್ಳ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮಾಡುತ್ತೇನೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.ಪಟ್ಟಣದ ಶ್ರೀ ಸೋಮಶೇಖರಮಠದ ಲಿಂ.ಶ್ರೀ ಬಸವಲಿಂಗ ಶ್ರೀಗಳ 68ನೇ ಪುಣ್ಯಸ್ಮರಣೋತ್ಸವ ಅಂಗವಾಗಿ ಆರಂಭಗೊಂಡಿರುವ ಆಧ್ಯಾತ್ಮಿಕ ಪ್ರವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿವಿಧ ಧಾರ್ಮಿಕ ಹಾಗೂ ಸಮಾಜಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾರಿಹಾಳದ ಶ್ರೀ ಅಡವಿಸಿದ್ದೇಶ್ವರ ದೇವರು ಪ್ರವಚನ ನೀಡಿದರು. ಅತಿಥಿಗಳಾಗಿ ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಮಹಾಂತೇಶ ಮತ್ತಿಕೊಪ್ಪ ಹಾಗೂ ಸಹಕಾರಿ ಧುರೀಣ ಉಮೇಶ ಇದ್ದರು. ಸವದತ್ತಿ ಮೂಲಿಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಅಧ್ಯಕ್ಷತೆ ಶ್ರೀ ಸೋಮಶೇಖರ ಮಠದ ಶ್ರೀ ಮುರಘೇಂದ್ರ ಶ್ರೀಗಳು ಅಧ್ಯಕ್ಷತೆ ವಹಿಸಿದ್ದರು. ಸವದತ್ತಿ ಬೆಟಸೂರಮಠದ ಅಜ್ಜಯ್ಯ ಶ್ರೀಗಳು, ಶ್ರೀ ಸಂಗನಬಸವದೇವರು, ಪುರಸಭೆ ಸದಸ್ಯ ಸಿ.ಬಿ.ಬಾಳಿ, ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಶಿಂದೋಗಿ ಗ್ರಾಪಂ ಅಧ್ಯಕ್ಷ ಡಿ.ಡಿ.ಟೋಪೋಜಿ, ತೆಗ್ಗಿಹಾಳ ಗ್ರಾಪಂ ಅಧ್ಯಕ್ಷ ಹಣಮಂತ ಸಿಂಗಣ್ಣವರ ಇದ್ದರು. ಬಿ.ಬಿ.ಹೂಲಿಗೊಪ್ಪ ಸ್ವಾಗತಿಸಿದರು, ಗಂಗಾಧರ ಗೊರಾಬಾಳ ನಿರೂಪಿಸಿದರು, ದೇವರಾಜ ಯರಕಿಹಾಳ, ಹನುಮಂತ ಅಂಕದ ಅವರಿಂದ ಸಂಗೀತ ಸೇವೆ ಜರುಗಿತು.