ಪ್ರೀತಂ ಗೌಡರು ಬಿಜೆಪಿಯಲ್ಲಿ ರಾಜ್ಯ ಮಟ್ಟದ ಪ್ರಭಾವಿ ನಾಯಕರು. ಹಾಸನ ಕ್ಷೇತ್ರದಲ್ಲಿ ತಮ್ಮದೇ ಮತಬಲ, ಸಂಘಟನೆ ಹಾಗೂ ಯುವ ಬೆಂಬಲಿಗರನ್ನು ಹೊಂದಿರುವ ಅವರು, ಕಾಂಗ್ರೆಸ್ ನಾಯಕರೊಂದಿಗೆ ಈ ರೀತಿಯಾಗಿ ಕಾಣಿಸಿಕೊಳ್ಳುವುದು ಸಾಮಾನ್ಯ ರಾಜಕೀಯ ಸೌಜನ್ಯವೇ? ಅಥವಾ ದಿಕ್ಕು ಬದಲಾವಣೆಯ ಮುನ್ಸೂಚನೆಯೇ? ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇತ್ತೀಚೆಗೆ ಬೇಲೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್‌.ಲಿಂಗೇಶ್‌ ಅವರು ಸುದ್ದಿಗೋಷ್ಠಿಯಲ್ಲಿ “ಪ್ರೀತಂ ಗೌಡ ಕಾಂಗ್ರೆಸ್‌ಗೆ ಒಂದು ಕಾಲು ಇಟ್ಟಿದ್ದಾರೆ” ಎಂದು ಆರೋಪಿಸಿದ್ದರು. ಆ ಹೇಳಿಕೆಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಹುಟ್ಟಿಸಿದೆ.

ಕನ್ನಡಪ್ರಭ ವಾರ್ತೆ ಹಾಸನ

ಜಿಲ್ಲೆಯ ಮಾಜಿ ಶಾಸಕ ಹಾಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರೀತಂ ಗೌಡ ಅವರು ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಮಾತುಗಳು ಈಗಾಗಲೇ ಹರಿದಾಡುತ್ತಿದ್ದು, ಈ ಸಂದರ್ಭದಲ್ಲೇ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕರೊಂದಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿರುವುದು ಅಂತೆಕಂತೆ ಸುದ್ದಿಗಳಿಗೆ ಇಂಬು ನೀಡಿದೆ.ಮೈಸೂರು ನಗರದ ಲಲಿತಾ ಮಹಲ್ ಪ್ಯಾಲೇಸ್‌ನಲ್ಲಿ ಕಾಂಗ್ರೆಸ್ ಶಾಸಕ ಕೆ. ಹರೀಶ್ ಗೌಡ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಾಜಕೀಯ ಅಂಗಳದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಇದೇ ವೇಳೆ ಹಾಸನ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಜಾವಗಲ್ ಮಂಜುನಾಥ್ ಅವರು ಕೂಡ ಪ್ರೀತಂ ಗೌಡ ಅವರ ಪಕ್ಕದಲ್ಲೇ ಕುಳಿತಿರುವುದು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಪ್ರೀತಂ ಗೌಡರು ಬಿಜೆಪಿಯಲ್ಲಿ ರಾಜ್ಯ ಮಟ್ಟದ ಪ್ರಭಾವಿ ನಾಯಕರು. ಹಾಸನ ಕ್ಷೇತ್ರದಲ್ಲಿ ತಮ್ಮದೇ ಮತಬಲ, ಸಂಘಟನೆ ಹಾಗೂ ಯುವ ಬೆಂಬಲಿಗರನ್ನು ಹೊಂದಿರುವ ಅವರು, ಕಾಂಗ್ರೆಸ್ ನಾಯಕರೊಂದಿಗೆ ಈ ರೀತಿಯಾಗಿ ಕಾಣಿಸಿಕೊಳ್ಳುವುದು ಸಾಮಾನ್ಯ ರಾಜಕೀಯ ಸೌಜನ್ಯವೇ? ಅಥವಾ ದಿಕ್ಕು ಬದಲಾವಣೆಯ ಮುನ್ಸೂಚನೆಯೇ? ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇತ್ತೀಚೆಗೆ ಬೇಲೂರು ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್‌.ಲಿಂಗೇಶ್‌ ಅವರು ಸುದ್ದಿಗೋಷ್ಠಿಯಲ್ಲಿ “ಪ್ರೀತಂ ಗೌಡ ಕಾಂಗ್ರೆಸ್‌ಗೆ ಒಂದು ಕಾಲು ಇಟ್ಟಿದ್ದಾರೆ” ಎಂದು ಆರೋಪಿಸಿದ್ದರು. ಆ ಹೇಳಿಕೆಯ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಹುಟ್ಟಿಸಿದೆ.

ಹಾಸನ ಜಿಲ್ಲೆಯಲ್ಲಿ ತನ್ನ ನೆಲೆಯನ್ನು ಬಲಪಡಿಸಲು ಕಾಂಗ್ರೆಸ್ ತಂತ್ರ ರೂಪಿಸುತ್ತಿದೆಯೇ? ಬಿಜೆಪಿ ಪ್ರಭಾವಿ ಮುಖಂಡರನ್ನು ಸೆಳೆಯುವ ಯತ್ನವೇ ಇದಾಗಿದೆಯೇ? ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ. ವಿಶೇಷವಾಗಿ ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡರೊಂದಿಗೆ ಈ ಭೇಟಿ ನಡೆದಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.:::