ಬಿಜೆಪಿ ವಿರುದ್ಧ ಪಂಜಿನ ಮೆರವಣಿಗೆ

| Published : Aug 11 2024, 01:34 AM IST

ಸಾರಾಂಶ

ಅಜ್ಜಂಪುರ, ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳು ಅಭಿಮಾನಿಗಳು ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದವು.

ಕನ್ನಡಪ್ರಭ ವಾರ್ತೆ ಅಜ್ಜಂಪುರ

ಶೋಷಿತ ಹಾಗೂ ಅಹಿಂದ ನಾಯಕ ಸಿದ್ದರಾಮಯ್ಯ ಅವರನ್ನು ಅಹಿಂದ ಎಂಬ ಕಾರಣಕ್ಕೆ ಅಧಿಕಾರದಿಂದ ಕೆಳಗಿಳಿಸಲು ಕೇಂದ್ರ ಸರ್ಕಾರ ಸೇರಿದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಪ್ರಯತ್ನಿಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ನೇತೃತ್ವದಲ್ಲಿ ವಿವಿಧ ಅಹಿಂದ ಸಂಘಟನೆಗಳು ಅಭಿಮಾನಿಗಳು ಗುರುವಾರ ರಾತ್ರಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದರು. ಪಟ್ಟಣದ ಗಾಂಧಿ ವೃತ್ತದಿಂದ ಪ್ರಮುಖಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ವೀರಯೋಧ ಪುಟ್ಟಸ್ವಾಮಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ 7 ಕೋಟಿ ಜನರು 136 ಜನ ಶಾಸಕರನ್ನು ಆರಿಸಿದ್ದಾರೆ. ವಿರೋಧ ಪಕ್ಷದ ಕೆಲನಾಯಕರೆ ಸಿದ್ರಾಮಯ್ಯ ಆಡಳಿತ ಮೆಚ್ಚಿಕೊಂಡದ್ದಾರೆ.

ಬಿಜೆಪಿ ರಾಜ್ಯ ಸರ್ಕಾರಕ್ಕೆ ಸಂಕಷ್ಟ ತರಲು ಹಾಗೂ ಸಿ.ಎಂ.ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಲು ಪ್ರಯತ್ನ ಮಾಡುತ್ತಿದೆ. ಬಿಜೆಪಿಯವರಿಗೆ ಸಿದ್ದರಾಮಯ್ಯ ನವರನ್ನು ಮುಟ್ಟಲು ಸಾಧ್ಯವಿಲ್ಲ, ಬಿಜೆಪಿಗೆ ತಕ್ಕ ಪಾಠ ಕಲಿಸಬೇಕೆಂದು ಕರೆನೀಡಿದರು.

ಈ ಪ್ರತಿಭಟನೆಯಲ್ಲಿ ಕೆಪಿಸಿಸಿ ಸದಸ್ಯ ಜಿ ನಟರಾಜ್, ನಗರ ಘಟಕದ ಅಧ್ಯಕ್ಷ ತಿಪ್ಪೇಶ ಮಡಿವಾಳ, ಗಡಿಹಳ್ಳಿ ಮಂಜುನಾಥ್ ಮಾತನಾಡಿದರು. ಕಾಂಗ್ರಸ್ ಯುವ ಮುಖಂಡ ಕೆ. ರಾಘವೇಂದ್ರ, ಕರವೇ ಅಧ್ಯಕ್ಷ ಗುರುಮೂರ್ತಿ ಮುಸ್ಲಿಂ ಮುಖಂಡರು ರಿಯಾಜ್ ಅಹಮ್ಮದ್, ಕೆ ಸುಭಾಶ್ ಹಾಗೂ ಅಭಿಮಾನಿಗಳು ಭಾಗಿಯಾಗಿದ್ದರು.