ರೇಬಿಸ್ ಜಾಗೃತಿ ಅಭಿಯಾನ

| Published : Oct 28 2023, 01:15 AM IST

ಸಾರಾಂಶ

ಜಾವಗಲ್ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಶಾಲೆಯ ಆವರಣದಲ್ಲಿ ರೇಬಿಸ್ ಜಾಗೃತಿ ಅಭಿಯಾನ ಉದ್ಘಾಟಿಸಲಾಯಿತು.
ಕನ್ನಡಪ್ರಭ ವಾರ್ತೆ ಜಾವಗಲ್ ರೇಬಿಸ್ ತಡೆ ಮುಂಜಾಗೃತ ಕ್ರಮವಾಗಿ ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿನ ಸಾಕು ಪ್ರಾಣಿಗಳಿಗೆ ರೇಬಿಸ್ ರೋಗ ನಿರೋಧಕ ಲಸಿಕೆ ಹಾಕಿಸುವುದು ಅತ್ಯವಶ್ಯಕವೆಂದು ಜಾವಗಲ್ ಪಶು ಆಸ್ಪತ್ರೆಯ ಮುಖ್ಯ ಪಶು ವೈದ್ಯಾಧಿಕಾರಿ ಡಾ ಬಿ ಆರ್ ಆನಂದ್ ತಿಳಿಸಿದರು. ಜಾವಗಲ್ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದೊಂದಿಗೆ ಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ರೇಬಿಸ್ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿ, ಹುಚ್ಚುನಾಯಿಗಳ ಕಡಿತದಿಂದ ಸಾಕುಪ್ರಾಣಿಗಳಿಗೆ ಹಾಗೂ ಮನುಷ್ಯರಿಗೂ ಬರುವಂತಹ ಕಾಯಿಲೆ ಇದಾಗಿದ್ದು, ಮನೆಗಳಲ್ಲಿರುವ ಸಾಕು ಪ್ರಾಣಿಗಳಾದ ನಾಯಿ ಹಾಗೂ ಬೆಕ್ಕುಗಳಿಗೆ ರೇಬಿಸ್ ರೋಗ ನಿರೋಧಕ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕೆಂದು ತಿಳಿಸಿದರು. ಮುಖ್ಯ ಶಿಕ್ಷಕಿ ಪ್ರಮೀಳಮ್ಮ, ಸಹಶಿಕ್ಷಕರುಗಳಾದ ಸುರೇಶ್, ಹಾಲಪ್ಪ, ಚಿದಾನಂದ್, ಸರಸ್ವತಿ ಸರ್ವಮಂಗಳ, ಶ್ರೀನಿವಾಸ್ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.