ಸಾರಾಂಶ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಾಧಾರಣ ಮಳೆ
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಸೇರಿದಂತೆ ಬಯಲು ಸೀಮೆಯಲ್ಲಿ ಭಾನುವಾರ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ.ತರೀಕೆರೆ, ಕಡೂರು ತಾಲೂಕಿನ ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರೆದಿತ್ತು. ಚಿಕ್ಕಮಗಳೂರು ನಗರ ಸೇರಿದಂತೆ ಗಿರಿ ಪ್ರದೇಶದಲ್ಲಿ ಮಧ್ಯಾಹ್ನ ಆರಂಭವಾದ ಮಳೆ ಸಂಜೆಯ ನಂತರವೂ ಮುಂದುವರೆದಿತ್ತು. ಮೂಡಿಗೆರೆ, ಶೃಂಗೇರಿ, ಕೊಪ್ಪ ತಾಲೂಕುಗಳಲ್ಲೂ ಮಳೆಯಾಗಿದೆ. ಎನ್.ಆರ್.ಪುರ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಸಂಜೆ 7.30ರ ವೇಳೆಗೆ ಗುಡುಗು ಸಹಿತ ತುಂತುರು ಮಳೆ ಬಂದಿತು.ಮಳೆ ಹಾಗೂ ಮೋಡದಿಂದಾಗಿ ಸಂಜೆಯ ನಂತರ ಜಿಲ್ಲೆಯ ಮಲೆನಾಡಿನಲ್ಲಿ ಥಂಡಿಯ ವಾತಾವರಣ ಇತ್ತು.