ಧಾರಾಕಾರ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

| Published : Nov 08 2023, 01:00 AM IST

ಸಾರಾಂಶ

ಧಾರಾಕಾರ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದ ಗೋಡೆ ಕುಸಿದು ವ್ಯಕ್ತಿ ಓರ್ವ ಮೃತಪಟ್ಟಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.ಲಚ್ಚಾನಾಯ್ಕ (80) ಮೃತಪಟ್ಟ ದುರ್ದೈವಿ. ಸೋಮವಾರ ರಾತ್ರಿ ಲಚ್ಚಾನಾಯ್ಕ ಅವರು ಶೌಚಾಲಯಕ್ಕೆ ತೆರಳುವ ವೇಳೆ ಧಾರಾಕಾರ ಮಳೆಗೆ ಗೋಡೆ ಕುಸಿದು ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.