ಹಿಂಡಲಗಾ ಗಣಪತಿ ದರ್ಶನ ಪಡೆದ ರಮೇಶ ಜಾರಕಿಹೊಳಿ

| Published : Nov 19 2023, 01:30 AM IST

ಸಾರಾಂಶ

ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆರ್‌.ಅಶೋಕ ಅವರನ್ನು ಪ್ರತಿಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಸಭೆಯಿಂದ ಹೊರನಡೆದಿದ್ದ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಶನಿವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಿದರು.

ಬೆಳಗಾವಿ: ಬೆಂಗಳೂರಿನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆರ್‌.ಅಶೋಕ ಅವರನ್ನು ಪ್ರತಿಪಕ್ಷದ ನಾಯಕನ್ನಾಗಿ ಆಯ್ಕೆ ಮಾಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಸಭೆಯಿಂದ ಹೊರನಡೆದಿದ್ದ ಮಾಜಿ ಸಚಿವ, ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಶನಿವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಿದರು.

ಬೆಳಗಾವಿಯ ಹಿಂಡಲಗಾ ಮಿಲಿಟರಿ ಗಣಪತಿ ಮಂದಿರಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ರಮೇಶ ಜಾರಕಿಹೊಳಿ ಬಳಿಕ ಗೋಕಾಕನತ್ತ ಪ್ರಯಾಣ ಬೆಳೆಸಿದರು.