ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿ

| Published : Apr 05 2024, 01:02 AM IST

ಸಾರಾಂಶ

ಲೋಕಸಭಾ ಚುನಾವಣೆ ಹಿನ್ನಲೆ ಮತದಾರರು ತಪ್ಪದೇ ಮತದಾನ ಮಾಡುವ ನಿಟ್ಟಿನಲ್ಲಿ ಸರ್ಕಾರಿ ನೂರಾರು ಅಧಿಕಾರಿ, ಸಿಬ್ಬಂದಿಗಳ ನೇತೃತ್ವದಲ್ಲಿ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ

ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ

ಮತದಾನ ಅತ್ಯಂತ ಪವಿತ್ರವಾದ ಕಾರ್ಯ. ಹಾಗಾಗಿ ಪ್ರತಿಯೊಬ್ಬರು ಮತದಾರರ ಪಟ್ಟಿಗೆ ಹೆಸರು ನೋಂದಣಿ ಮಾಡಿಸಬೇಕು. ಈ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಎಲ್ಲಾ ಹಂತಗಳಲ್ಲಿಯೂ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಹಸೀಲ್ದಾರ ಗಿರೀಶ ಸ್ವಾದಿ ಹೇಳಿದರು. ಅವಳಿ ನಗರದಲ್ಲಿ ತಾಲೂಕು ಸ್ವೀಪ್ ಸಮಿತಿಯಿಂದ ನಡೆದ ರಾಷ್ಟ್ರೀಯ ಮತದಾರರ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.

ಚುನಾವಣಾಧಿಕಾರಿ ಸಾಜೀದ್ ಮುಲ್ಲಾ ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನಲೆ ಮತದಾರರು ತಪ್ಪದೇ ಮತದಾನ ಮಾಡುವ ನಿಟ್ಟಿನಲ್ಲಿ ಸರ್ಕಾರಿ ನೂರಾರು ಅಧಿಕಾರಿ, ಸಿಬ್ಬಂದಿಗಳ ನೇತೃತ್ವದಲ್ಲಿ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ನಗರಸಭೆ ಪೌರಾಯುಕ್ತ ಜಗದೀಶ ಈಟಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ಯಾಮಸುಂದರ ಕಾಂಬಳೆ, ನಗರಸಭೆ ಕಂದಾಯ ಅಧಿಕಾರಿ ವಸಂತ ಪವಾರ ಸೇರಿದಂತೆ ಸರ್ಕಾರಿ ಇಲಾಖೆಗಳ ಅನೇಕ ಅಧಿಕಾರಿ ಹಾಗು ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.