ಪೊಲೀಸರ ಸೇವೆ ಸ್ಮರಣೆ ಎಲ್ಲರ ಕರ್ತವ್ಯ

| Published : Oct 22 2024, 12:08 AM IST

ಸಾರಾಂಶ

ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ, ಸಾರ್ವಜನಿಕರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ನಾಡಿನಲ್ಲಿ ಪೊಲೀಸ್ ಕಾರ್ಯ ಅನನ್ಯ, ಪೊಲೀಸ್‌ರ ಕರ್ತವ್ಯ ನಿಷ್ಟೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗಿದೆ.

ಕನ್ನಡಪ್ರಭ ವಾರ್ತೆ ಕೆಜಿಎಫ್ದಕ್ಷತೆ ಹಾಗೂ ಪ್ರಾಮಾಣಿಕೆತೆಯಿಂದ ಸೇವೆ ಮಾಡುತ್ತಾ ಸಮಾಜದ ಭದ್ರತೆ ಹಾಗೂ ಸುರಕ್ಷತೆಗಾಗಿ ಪ್ರಾಣ ಮುಡಿಪಾಗಿಟ್ಟ ಪೊಲೀಸ್‌ರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ೩ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶರಾದ ಗಣಪತಿ ಗುರುಸಿದ್ದ ಬಾದಾಮಿ ತಿಳಿಸಿದರು.ನಗರದ ರಾಬರ್ಟ್‌ಪೇಟೆ ಪೊಲೀಸ್ ಠಾಣಾ ಆವರಣದಲ್ಲಿ ಏರ್ಪಡಿಸಿದ್ದ ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಹುತಾತ್ಮರ ಪೊಲೀಸ್ ಸ್ಮಾರಕ್ಕೆ ಪುಷ್ಪಗುಚ್ಚವಿರಿಸಿ, ಗೌರವ ನಮನಸಲ್ಲಿಸಿ ಮಾತನಾಡಿದರು.ಪೊಲೀಸರ ತ್ಯಾಗ ಸ್ಮರಿಸಿ

ನಮ್ಮ ರಕ್ಷಣೆ ಮಾಡುವ ಸಂದರ್ಭ ಹೋರಾಡಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸ್‌ರಿಗೆ ಕಾಶೀರದಿಂದ ಕನ್ಯಾಕುಮಾರಿಯವರೆಗೆ ಈ ದಿನ ಗೌರವ ನಮನ ಸಲ್ಲಿಸಲಾಗುತ್ತಿದೆ, ೧೯೫೯ ರಲ್ಲಿ ಚೀನಿ ಪಡೆಗಳೊಂದಿಗೆ ನಡೆದ ಹೋರಾಟದಲ್ಲಿ ತಮ್ಮ ಜೀವನ ತ್ಯಾಗ ಮಾಡಿದ ಪೊಲೀಸ್‌ರನ್ನು ಸ್ಮರಿಸುವ ಈ ದಿನ ಹುತಾತ್ಮರ ದಿನವಾಗಿ ಆಚರಿಸಲಾಗುತ್ತಿದೆ. ಸೈನಿಕರು ಗಡಿಯಲ್ಲಿ ದೇಶ ರಕ್ಷಣೆ ಮಾಡುತ್ತಾರೆ, ಸಾರ್ವಜನಿಕರ ಆಸ್ತಿ-ಪಾಸ್ತಿ ರಕ್ಷಣೆಗಾಗಿ ತಮ್ಮ ಜೀವನ ತ್ಯಾಗ ಮಾಡಿರುವ ಹಾಗೂ ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ನಾಡಿನಲ್ಲಿ ಪೊಲೀಸ್ ಕಾರ್ಯ ಅನನ್ಯ, ಪೊಲೀಸ್‌ರ ಕರ್ತವ್ಯ ನಿಷ್ಟೆಯಿಂದ ಸಮಾಜದಲ್ಲಿ ಪ್ರತಿಯೊಬ್ಬರು ಶಾಂತಿ ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯ ಎಂದರು.

ಕಾನೂನು ಸುವ್ಯವಸ್ಥೆ ರಕ್ಷಣೆ

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಯಶಸ್ವಿ ಪೊಲೀಸ್ ಕಾರ್ಯವೈಖರಿಯಿಂದ ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ನೆಲೆಸಿದೆ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿಯೂ ಪೊಲೀಸ್ ಇಲಾಖೆ ಜಿಲ್ಲೆಯಲ್ಲಿ ಸಂಪೂರ್ಣ ಸಹಕಾರ ನೀಡುತ್ತಿರುವುದಾಗಿ ತಿಳಿಸಿದರು.ಕೆಜಿಎಫ್ ಪೊಲೀಸ್ ಜಿಲ್ಲಾ ಎಸ್ಪಿ ಶಾಂತ ರಾಜು ಹುತಾತ್ಮ ಪೊಲೀಸ್‌ರಿಗೆ ಗೌರವ ಸಲ್ಲಿಸಿ, ಪೊಲೀಸ್ ಸ್ಮಾರಕ್ಕೆ ಪುಷ್ಪ ನಮನ ಸಲ್ಲಿಸಿದರು, ಕಳೆದ ಒಂದು ವರ್ಷದಲ್ಲಿ ದೇಶದ ಕಾನೂನು ಸುವ್ಯಸ್ಥೆ ಕಾಪಡಲು ೨೧೬ ವಿವಿಧ ದರ್ಜೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯನಿರ್ವಹಣೆಯ ಅವಧಿಯಲ್ಲಿ ಮೃತಪಟ್ಟಿದ್ದು, ಈ ಪೈಕಿ ರಾಜ್ಯದಲ್ಲಿ ೧೨ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಹುತಾತ್ಮರಾಗಿದ್ದಾರೆಂದುತಿಳಿಸಿದರು, ಹುತಾತ್ಮರಾದ ಪೊಲೀಸ್‌ರ ಹೆಸರುಗಳನ್ನು ಓದುವ ಮೂಲಕ ಹುತಾತ್ಮ ಪೊಲೀಸ್‌ರಿಗೆ ಗೌವರ ವಂದನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಡಾ.ರಾಜೇಂದ್ರಕುಮಾರ್, ಸರಕಾರಿ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಸುರೇಶ್‌ಕುಮಾರ್, ವಕೀಲರ ಸಂಘದ ಅಧ್ಯಕ್ಷರಾದ ರಾಜಗೋಪಾಲಗೌಡ ಹುತಾತ್ಮ ಪೊಲೀಸ್‌ರಿಗೆ ಗೌರವಸಲ್ಲಿಸಿದರು. ಕೆಜಿಎಫ್ ಪೊಲೀಸ್ ಜಿಲ್ಲೆಯ ಡಿವೈಎಸ್ಪಿ ಪಾಂಡು ರಂಗ, ಡಿಎಆರ್ ವೃತ್ತ ನೀರಿಕ್ಷಕ ಸೋಮಶೇಖರ್ ಇದ್ದರು.