ಸಾರಾಂಶ
ಲೋಕಸಭೆ ಚುನಾವಣೆ ಮುನ್ನ ಪ್ರಣಾಳಿಕೆಯಲ್ಲಿ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಆಶ್ವಾಸನೆ ನೀಡಿದ್ದರು ಆದ್ದರಿಂದ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಖಾಸಗಿ ಮಸೂದೆಗಳನ್ನು ಮಂಡಿಸಲು ರೈತರು ಒತ್ತಾಯಿಸಿದ್ದಾರೆ
ಕನ್ನಡಪ್ರಭ ವಾರ್ತೆ ಕೋಲಾರರೈತರ ಬೇಡಿಕೆಗಳ ಈಡೇರಿಕೆಗಾಗಿ ಸಂಸತ್ತಿನಲ್ಲಿ ವಿಶೇಷ ಮಸೂದೆ ಮಂಡಿಸುವಂತೆ ಸಂಸದ ಎಂ.ಮಲ್ಲೇಶ್ ಬಾಬುರಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪದಾಧಿಕಾರಿಗಳ ನಿಯೋಗ ಮನವಿಸಲ್ಲಿಸಿದರು.ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ.ವೆಂಕಟೇಶ್ ಮಾತನಾಡಿ, ರೈತರ ಹೋರಾಟದ ಫಲವಾಗಿ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂನುಗಳನ್ನು ಹಿಂಪಡೆದು ಎಂಎಸ್‌ಪಿ ಗ್ಯಾರಂಟಿ ಕಾನೂನು ಮಾಡಲು ಸಮಿತಿ ರಚನೆ ಮಾಡುವುದಾಗಿ ಘೋಷಿಸಿತ್ತು, ಆದರೆ ಇದುವರೆಗೆ ಕಾನೂನು ರೂಪಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಖಾಸಗಿ ಮಸೂದೆ ಮಂಡಿಸಿ
ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ಲೋಕಸಭೆ ಚುನಾವಣೆ ಮುನ್ನ ಪ್ರಣಾಳಿಕೆಯಲ್ಲಿ ರೈತರು ಮತ್ತು ಕಾರ್ಮಿಕರ ಸಮಸ್ಯೆಗಳನ್ನು ಇತ್ಯರ್ಥ ಮಾಡುವ ಆಶ್ವಾಸನೆ ನೀಡಿದ್ದರು ಆದ್ದರಿಂದ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ ಖಾಸಗಿ ಮಸೂದೆಗಳನ್ನು ಮಂಡಿಸಬೇಕು ಎಂದು ಒತ್ತಾಯಿಸಿದರು.ಸ್ವಾಮಿನಾಥನ್ ವರದಿ
ನಮ್ಮ ಕೋಲಾರ ರೈತ ಸಂಘದ ಅಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ, ಡಾ.ಸ್ವಾಮಿನಾಥನ್ ಆಯೋಗದ ವರದಿಯಂತೆ ಕೃಷಿ ಉತ್ಪನ್ನಗಳಿಗೆ ಬೆಲೆಗಳನ್ನು ನಿಗದಿಪಡಿಸಬೇಕು, ರೈತರು ಮತ್ತು ಕೂಲಿಕಾರರನ್ನು ಸಂಪೂರ್ಣ ಸಾಲದಿಂದ ಮುಕ್ತಗೊಳಿಸಬೇಕು ಭಾರತವು ವಿಶ್ವ ವ್ಯಾಪಾರ ಒಪ್ಪಂದ ಸಂಸ್ಥೆಯಿಂದ ಹೊರಬರಬೇಕು ಎಂದು ಒತ್ತಾಯಿಸಿದರುರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಅಬ್ಬಣಿ ಶಿವಪ್ಪ, ಕೆಪಿಆರ್‌ಎಸ್ ಜಿಲ್ಲಾ ಉಪಾಧ್ಯಕ್ಷೆ ಗಂಗಮ್ಮ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್, ಮುಖಂಡರಾದ ಶಿವರಾಜ್, ರಾಜ್ಯ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆನಂದ್ ಕುಮಾರ್, ಚಿನ್ನಾಪುರ ಮಂಜುನಾಥ್, ಮುನಿವೆಂಕಟಪ್ಪ, ಗೋಪಾಲ್, ನಮ್ಮ ಕೋಲಾರ ರೈತ ಸಂಘದ ರವಿ, ಕೃಷ್ಣೇಗೌಡ, ಸಿಐಟಿಯು ಮುಖಂಡರಾದ ಹೆಚ್.ಬಿ.ಕೃಷ್ಣಪ್ಪ, ಎಂ.ಭೀಮರಾಜ್ ಇದ್ದರು.