ಸಾರಾಂಶ
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರ ಜನಪರ ಕಾರ್ಯಕ್ರಮ ಮತ್ತು ಕಾಂಗ್ರೆಸ್ ತತ್ವ ಸಿದ್ದಾಂತಗಳನ್ನು ಒಪ್ಪಿ ಈ ಬಾರಿ ಮತದಾರರು ಕಾಂಗ್ರೆಸ್‌ಗೆ ಮತವನ್ನು ನೀಡಲಿದ್ದಾರೆ ಎಂದರು.
ಕನ್ನಡಪ್ರಭ ವಾರ್ತೆ ಬಾದಾಮಿ
ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತಾ ಪಾಟೀಲ ಗೆಲುವು ಖಚಿತ ಎಂದು ಕಾಂಗ್ರೆಸ್ ಒಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಮಂಜುನಾಥ ಗುಬ್ಬಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರ್ಕಾರ ಬಡವರ, ಜನವಿರೋಧಿ ಸರ್ಕಾರ. ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಹೀಗೆ ಹಲವಾರು ಜನವಿರೋಧಿ ನೀತಿಯಿಂದ ಮತದಾರರು ಬೇಸತ್ತಿದ್ದಾರೆ. ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆ ಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರ ಜನಪರ ಕಾರ್ಯಕ್ರಮ ಮತ್ತು ಕಾಂಗ್ರೆಸ್ ತತ್ವ ಸಿದ್ದಾಂತಗಳನ್ನು ಒಪ್ಪಿ ಈ ಬಾರಿ ಮತದಾರರು ಕಾಂಗ್ರೆಸ್‌ಗೆ ಮತವನ್ನು ನೀಡಲಿದ್ದಾರೆ ಎಂದರು.
ರಾಜ್ಯಾದ್ಯಂತ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಲೆ ಇದೆ. ರಾಜ್ಯದಲ್ಲಿ ಸುಮಾರು 20ಕ್ಕೂ ಹೆಚ್ಚು ಕಡೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ. ಮತದಾರರು ನುಡಿದಂತೆ ನಡೆದ ಸಿಎಂ ಸಿದ್ದರಾಮಯ್ಯ ಅವರ ಕೈ ಬಲಪಡಿಸಲು ರಾಜ್ಯಾದ್ಯಂತ ಅಲ್ಪಸಂಖ್ಯಾತರು, ಹಿಂದುಳಿದ ವರ್ಗ, ದಲಿತರು(ಅಹಿಂದ) ಸೇರಿದಂತೆ ಎಲ್ಲ ಸಮಾಜದ ಮತದಾರರು ಕಾಂಗ್ರೆಸ್‌ಗೆ ಮತ ನೀಡಬೇಕೆಂದು ಮನವಿ ಮಾಡಿದ್ದಾರೆ.--