ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿ ಸಂಭ್ರಮ

| Published : Jan 14 2025, 01:03 AM IST

ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿ ಸಂಭ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಸಂಕ್ರಾಂತಿ ಕೃಷಿಕರ, ಹೆಂಗಳೆಯರಿಗೆ ಸಂಭ್ರಮದ ಹಬ್ಬ. ರೈತಾಪಿ ವರ್ಗದ ಜನತೆಗೆ ಸುಗ್ಗಿಯ ಹಬ್ಬವಾದರೆ, ಹೆಂಗಳೆಯರು ಎಳ್ಳು, ಬೆಲ್ಲ ಹಂಚಿ ಸಂತೋಷ ಪಡುವ ಹಬ್ಬವೂ ಹೌದು. ಮುಖ್ಯವಾಗಿ ಹಳ್ಳಿಗಳಲ್ಲಿ ರೈತನ ಕೃಷಿ ಸಂಗಾತಿ ರಾಸುಗಳನ್ನು ಸ್ವಚ್ಛಗೊಳಿಸಿ ಕೊಂಬಿಗೆ ಬಣ್ಣ ಹಚ್ಚುವುದು, ಕಿಚ್ಚು ಹಾಯಿಸುವ ದೃಶ್ಯ ಮಾಮೂಲಿ ಇರಲಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಈ ಬಾರಿಯ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಜನತೆ ಅಗತ್ಯ ವಸ್ತುಗಳ ಖರೀದಿಯಲ್ಲಿ ನಿರತರಾಗಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಡುವೆ ಸಂಕ್ರಾಂತಿ ಸ್ವಾಗತಿಸಲು ಸಿದ್ಧತೆ ನಡೆಸಿದ್ದಾರೆ.

ಸಂಕ್ರಾಂತಿ ಹಬ್ಬಕ್ಕೆ ಮುನ್ನಾ ದಿನವಾದ ಸೋಮವಾರ ಚಿಕ್ಕಬಳ್ಳಾಪುರ ನಗರದಲ್ಲಿ ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಯಲ್ಲಿ ಸಾರ್ವಜನಿಕರು ತೊಡಗಿದ್ದರು. ಸಂಕ್ರಾಂತಿ ಎಂದರೆ ರೈತರಿಗೆ ಸುಗ್ಗಿ-ಹುಗ್ಗಿಯ ಹಬ್ಬ. ಆದರೆ ಈ ವರ್ಷ ತೀವ್ರ ಬರಗಾಲ ಹಿನ್ನಲೆ ಸಂಕ್ರಾಂತಿ ಮಾಯವಾಗಿದೆ.

ಅಗತ್ಯ ವಸ್ತುಗಳ ಬೆಲೆ ಏರಿಕೆ

ಮತ್ತೊಂದೆಡೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. 1 ಕೆ.ಜಿ ಕಡಲೇಕಾಯಿ 100 ರಿಂದ 130ರೂ, ಎಳ್ಳು ಬೆಲ್ಲ ಕೆಜಿಗೆ 200 ರೂ. ಗೆಣಸು 50ರೂ. ಕಬ್ಬು ಜಳವೆಗೆ 60 ರಿಂದ 80 ರೂ. ಅವರೇಕಾಯಿ ಕೆ.ಜಿಗೆ 80 ರಿಂದ 120 ರೂ ಇದ್ದು ಬೆಲೆಗಳು ಹಬ್ಬಕ್ಕಾಗಿ ಹೆಚ್ಚಿವೆ. ಕಾಕಡ ಕೆ.ಜಿಗೆ 600 ರಿಂದ 700ರೂ ಕನಕಾಂಬರ ಕೆ.ಜಿಗೆ 1600 ರಿಂದ 2000ರೂ ಇದ್ದರೆ ಸೇವಂತಿಗೆ, ಗುಲಾಬಿ, ಸೇವಂತಿಗೆ ಮೊದಲಾದ ಹೂವಿನ ಬೆಲೆಗಳು 150 ರಿಂದ 200 ರವರೆಗೂ ಇವೆ. ತರಕಾರಿಗಳ ಬೆಲೆಗಳು ಸಾಧಾರಣವಾಗಿವೆ.ಮಹಿಳೆಯರ ಸಂಭ್ರಮ

ಸಂಕ್ರಾಂತಿ ಕೃಷಿಕರ, ಹೆಂಗಳೆಯರಿಗೆ ಸಂಭ್ರಮದ ಹಬ್ಬ. ರೈತಾಪಿ ವರ್ಗದ ಜನತೆಗೆ ಸುಗ್ಗಿಯ ಹಬ್ಬವಾದರೆ, ಹೆಂಗಳೆಯರು ಎಳ್ಳು, ಬೆಲ್ಲ ಹಂಚಿ ಸಂತೋಷ ಪಡುವ ಹಬ್ಬವೂ ಹೌದು. ಮುಖ್ಯವಾಗಿ ಹಳ್ಳಿಗಳಲ್ಲಿ ರೈತನ ಕೃಷಿ ಸಂಗಾತಿ ರಾಸುಗಳನ್ನು ಸ್ವಚ್ಛಗೊಳಿಸಿ ಕೊಂಬಿಗೆ ಬಣ್ಣ ಹಚ್ಚುವುದು, ಕಿಚ್ಚು ಹಾಯಿಸುವ ದೃಶ್ಯ ಮಾಮೂಲಿ ಇರಲಿದೆ ಅದೇ ರೀತಿ ಪಟ್ಟಣ ಪ್ರದೇಶದಲ್ಲಿ ಬಣ್ಣದ ರಂಗೋಲಿ ಬಿಟ್ಟು, ಎಳ್ಳುಬೆಲ್ಲ ಹಂಚಿಕೆ ಮಾಡುವ ಸಡಗರಕ್ಕೆ ಶನಿವಾರದಿಂದಲೇ ಸಂಕ್ರಾಂತಿಯ ಆಚರಣೆಗೆ ಭರದ ಸಿದ್ಧತೆ ನಡೆದಿತ್ತು.

ರಾಸುಗಳಿಗೆ ವಿಷೇಷ ಪೂಜೆ

ಸಾಂಪ್ರದಾಯಿಕವಾಗಿ ಹಬ್ಬ ಆಚರಣೆ ಮಾಡುವವರು ಪ್ರತ್ಯೇಕವಾಗಿ ಎಳ್ಳು, ಬೆಲ್ಲ ಖರೀದಿ ಮಾಡುತ್ತಿದ್ದಾರೆ. ಗ್ರಾಮಾಂತರ ಪ್ರದೇಶದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷದಂತೆ ಈ ಬಾರಿಯೂ ಕಾಟಮರಾಯನ ಹಬ್ಬದ ಆಚರಿಸಲು ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ರೈತರು ತಮ್ಮ ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಮರಾಯನಿಗೆ ಹರಕೆ ತೀರಿಸುವ, ಕಿಚ್ಚು ಹಾಯಿಸುವ ಅಚರಣೆಗಳು ಸಂಕ್ರಾಂತಿಯಂದು ನಡೆಯಲಿವೆ.