ಚಿಕ್ಕಮಗಳೂರು: ಹೆಣ್ಣು ಭ್ರೂಣ ಹತ್ಯೆ ತಡೆ ಹಾಗೂ ಲಿಂಗಾನುಪಾತದಲ್ಲಿ ಸುಧಾರಣೆ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮದ ಮೂಲ ಉದ್ದೇಶ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ತಿಳಿಸಿದರು.

ಚಿಕ್ಕಮಗಳೂರು: ಹೆಣ್ಣು ಭ್ರೂಣ ಹತ್ಯೆ ತಡೆ ಹಾಗೂ ಲಿಂಗಾನುಪಾತದಲ್ಲಿ ಸುಧಾರಣೆ ಬೇಟಿ ಬಚಾವೋ, ಬೇಟಿ ಪಡಾವೋ ಕಾರ್ಯಕ್ರಮದ ಮೂಲ ಉದ್ದೇಶ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ತಿಳಿಸಿದರು.ನಗರದ ಬಸವನಹಳ್ಳಿ ಭುವನೇಶ್ವರಿ ಪ್ರೌಢಶಾಲೆಯಲ್ಲಿ ನಡೆದ ಬೇಟಿ ಪಡಾವೋ, ಬೇಟಿ ಬಚಾವೋ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಉದ್ಘಾಟಿಸಿ ಮಾತನಾಡಿ ಹೆಣ್ಣು ಮಕ್ಕಳಿಗೆ ಶಿಕ್ಷಣನೀಡುವುದು ಮುಖ್ಯ. ಯಾವುದೇ ಹೆಣ್ಣು ಮಗು ಶಾಲೆಯಿಂದ ದೂರ ಉಳಿಯದಂತೆ ನೋಡಿಕೊಂಡು ಅವರ ಸರ್ವತೋಮುಖ ಅಭಿವೃದ್ಧಿಗೆ ಈ ಮಹತ್ವದ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ ಮಾತನಾಡಿ, ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ತಿಳಿಸಿದರು. ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಮುದಾಯ ವೈದ್ಯಕೀಯ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಎಸ್.ಕೆ.ಶಶಿಕಾಂತ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಮಾನಸಿಕ ಆರೋಗ್ಯದ ಮಹತ್ವದ ಕುರಿತು ತಿಳಿಸಿದರು. ವಕೀಲೆ ಎಚ್.ಎನ್. ಅರುಂಧತಿ ಪೋಕ್ಸೋ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಮತ್ತು ಮಕ್ಕಳ ಸಂಬಂಧಿತ ಕಾಯ್ದೆ-ಕಾನೂನುಗಳ ಮಾಹಿತಿ ನೀಡಿದರು.

ಭುವನೇಶ್ವರಿ ಪ್ರೌಢಶಾಲೆ ಹಿರಿಯ ಶಿಕ್ಷಕಿ ಬಿ.ಎಸ್.ಪುಷ್ಪ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಡಿ.ಸಂತೋಷ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿ.ರಂಗನಾಥ್ ಇದ್ದರು.

--- ಫೋಟೋ --

ನಗರದ ಬಸವನಹಳ್ಳಿ ಭುವನೇಶ್ವರಿ ಪ್ರೌಢಶಾಲೆಯಲ್ಲಿ ನಡೆದ ಬೇಟಿ ಪಡಾವೋ, ಬೇಟಿ ಬಚಾವೋ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶ ವಿ.ಹನುಮಂತಪ್ಪ ಉದ್ಘಾಟಿಸಿದರು. ವಕೀಲೆ ಎಚ್.ಎನ್.ಅರುಂಧತಿ, ಸಂಪನ್ಮೂಲ ವ್ಯಕ್ತಿ ಡಾ.ಎಸ್.ಕೆ.ಶಶಿಕಾಂತ್ ಮೊದಲಾದವರಿದ್ದರು.