ಲಾಟರಿ ಮೂಲಕ ಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆ

| Published : Jan 12 2024, 01:45 AM IST

ಲಾಟರಿ ಮೂಲಕ ಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಈ ಹಿಂದೆ ಸಾಕಷ್ಟು ವಿವಿಧ ಅಭಿವೃದ್ಧಿ ನಿಗಮಗಳಲ್ಲಿ ಗುರಿಗಿಂತ ಕಡಿಮೆ ಅರ್ಜಿಗಳು ಇರುತ್ತಿದ್ದವು. ಹಾಗಾಗಿ ನಮ್ಮ ಕಾರ್ಯಕರ್ತರಿಗೆ, ಮುಖಂಡರನ್ನು ಗುರ್ತಿಸಿ ಆಯ್ಕೆ ಮಾಡುತ್ತಿತ್ತು. ಜೊತೆಗೆ ಅರ್ಹ ಫಲಾನುಭವಿಗಳನ್ನು ಅವರವರ ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡುತ್ತಿರುವುದರಿಂದ ಪಾರದರ್ಶಕವಾಗಿ ನೋಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ

ಮಧ್ಯವರ್ತಿಗಳ ಮತ್ತು ದಲ್ಲಾಳಿಗಳ ಹಾವಳಿ ತಪ್ಪಿಸಿ, ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಈ ಬಾರಿ ಚೀಟಿ ಎತ್ತಿ ಲಾಟರಿ ಮೂಲಕ ಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ವಿವಿಧ ಅಭಿವೃದ್ಧಿ ನಿಗಮಗಳ ಫಲಾನುಭವಿಗಳನ್ನು ಸಂಬಂಧಪಟ್ಟ ಆಯಾ ನಿಗಮಗಳ ಅಧಿಕಾರಿಗಳು, ಫಲಾನುಭವಿಗಳು, ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಚೀಟಿ ಎತ್ತಿ ಲಾಟರಿ ಮೂಲಕ ಆಯ್ಕೆ ಮಾಡಿದ ನಂತರ ಮಾತನಾಡಿದ ಅವರು, ಈ ಹಿಂದೆ ಸಾಕಷ್ಟು ವಿವಿಧ ಅಭಿವೃದ್ಧಿ ನಿಗಮಗಳಲ್ಲಿ ಗುರಿಗಿಂತ ಕಡಿಮೆ ಅರ್ಜಿಗಳು ಇರುತ್ತಿದ್ದವು. ಹಾಗಾಗಿ ನಮ್ಮ ಕಾರ್ಯಕರ್ತರಿಗೆ, ಮುಖಂಡರನ್ನು ಗುರ್ತಿಸಿ ಆಯ್ಕೆ ಮಾಡುತ್ತಿತ್ತು. ಜೊತೆಗೆ ಅರ್ಹ ಫಲಾನುಭವಿಗಳನ್ನು ಅವರವರ ಅನುಕೂಲಕ್ಕೆ ತಕ್ಕಂತೆ ಆಯ್ಕೆ ಮಾಡುತ್ತಿರುವುದರಿಂದ ಪಾರದರ್ಶಕವಾಗಿ ನೋಡಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಎಂದರು.

ಸದ್ಯ ಸರ್ಕಾರದ ಒಂದು ಯೋಜನೆಗೆ ನೂರಕ್ಕೂ ಹೆಚ್ಚು ಅರ್ಜಿಗಳು ಬಂದಾಗ ಆಯ್ಕೆ ಮಾಡುವುದು ಕಷ್ಟವಾಗುತ್ತಿದೆ. ಇದರಿಂದ ಅರ್ಹರಿಗೆ ನ್ಯಾಯ ನೀಡಲು ಸಾಧ್ಯವಾಗುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ಸ್ವಲ್ಪ ನೋವಾಗಬಹುದು. ಅದು ಸಹಜ ಕೂಡ. ಈ ನಿಟ್ಟಿನಲ್ಲಿ ಈ ಬಾರಿ ವಿನೂತನ ಪ್ರಯೋಗ ಪ್ರಾರಂಭಿಸಲಾಗಿದೆ ಎಂದು ವಿವರಿಸಿದರು.

ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶದಿಂದ ಅಧಿಕಾರಿಗಳ, ಅರ್ಜಿ ಸಲ್ಲಿಸಿದವರ, ಕಾಂಗ್ರೆಸ್‌ ಕಾರ್ಯಕರ್ತರ, ಮುಖಂಡರ ಸಮ್ಮುಖದಲ್ಲಿ ಯಾವುದೇ ಮುಲಾಜಿಲ್ಲದೆ ಚೀಟಿ ಎತ್ತಿಸಿ, ಲಾಟರಿ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು ಇತಿಹಾಸಕ್ಕೆ ಸಾಕ್ಷಿಯಾಗಿದೆ. ಇದರಿಂದ ಸರ್ಕಾರದ ಯೋಜನೆಗಳನ್ನು ನೇರವಾಗಿ ಅರ್ಹರಿಗೆ ತಲುಪಿಸಿದಂತಾಗುತ್ತದೆ. ಈ ಲಾಟರಿ ಆಯ್ಕೆ ವಿಧಾನದಿಂದ ನಮ್ಮ ಕಾರ್ಯಕರ್ತರಿಗೆ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದೇ ನನ್ನ ಉದ್ದೇಶ ಎಂದು ಹೇಳಿದರು.

ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ, ಭೋವಿ ನಿಗಮ, ವೀರಶೈವ ಲಿಂಗಾಯತ ನಿಗಮ, ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡದ ಡಾ. ಬಿ. ಆರ್‌ ಅಂಬೇಡ್ಕರ ನಿಗಮ, ಸೇರಿದಂತೆ ಇನ್ನೂ ಹಲವು ನಿಗಮಗಳ ಅರ್ಹ ಫಲಾನುಭವಿಗಳನ್ನು ಒಂದೊಂದು ಚೀಟಿ ಎತ್ತುವ ಮೂಲಕ ಆಯ್ಕೆ ಮಾಡಲಾಯಿತು.

ಮುಖಂಡ ಸಂತೋಷ ಚವ್ಹಾಣ, ತಾಲೂಕು ಎಸ್‌ಸಿ, ಎಸ್ಟಿ ಘಟಕದ ಅಧ್ಯಕ್ಷ ಶ್ರೀಕಾಂತ ಚಲವಾದಿ, ಹಣಮಂತ ಕುರಿ, ಪುರಸಭೆ ಸದಸ್ಯ ಯಲ್ಲಪ್ಪ ನಾಯಕಮಕ್ಕಳ, ಮಾಜಿ ಸದಸ್ಯ ಮಹ್ಮದ ರಫೀಕ ಶಿರೋಳ, ತಾಂಡಾ ಅಭಿವೃದ್ಧಿ ಅಧಿಕಾರಿ ಗೋಪಿ ಮಡಿವಾಳರ, ಯುವ ಕಾಂಗ್ರೆಸ್ ಅಧ್ಯಕ್ಷ ಸುರೇಶ ರಾಠೋಡ, ಎಫ್‌ಡಿಸಿ ವಸಂತ ರಾಠೋಡ, ಎಂಜಿನಿಯರ್‌ ಸುನೀಲ ರಾಠೋಡ, ಸಂಪನ್ಮೂಲ ವ್ಯಕ್ತಿ ಲಕ್ಷ್ಮಣ ಲಮಾಣಿ, ಅಂಬೇಡ್ಕರ, ಆದಿ ಜಾಂಬವ, ವಾಲ್ಮೀಕಿ, ಭೋವಿ ನಿಗಮಗಳ ತಾಲೂಕು ಅಭಿವೃದ್ಧಿ ಅಧಿಕಾರಿ ವಸಂತ ಪವಾರ, ಅಲ್ಪಸಂಖ್ಯಾತರ ನಿಗಮದ ಅಧಿಕಾರಿ ಶೇಖ್, ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಇದ್ದರು.

-

ಕೋಟ್

ಮಧ್ಯವರ್ತಿಗಳ ಮತ್ತು ದಲ್ಲಾಳಿಗಳ ಹಾವಳಿ ತಪ್ಪಿಸಿ, ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ಸಮರ್ಪಕವಾಗಿ ತಲುಪಿಸುವ ಉದ್ದೇಶದಿಂದ ಈ ಬಾರಿ ಚೀಟಿ ಎತ್ತಿ ಲಾಟರಿ ಮೂಲಕ ಪಾರದರ್ಶಕವಾಗಿ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಇದರಿಂದ ನಮ್ಮ ಕಾರ್ಯಕರ್ತರಿಗೆ ಬೇಸರವಾಗಿದ್ದರೆ ದಯವಿಟ್ಟು ಕ್ಷಮಿಸಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದೆ ನನ್ನ ಉದ್ದೇಶ.

ಸಿ.ಎಸ್.ನಾಡಗೌಡ (ಅಪ್ಪಾಜಿ). ಶಾಸಕ