ಎಸ್‌ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆಯಲ್ಲಿ ‘ಛಾಯಾ ನಿದರ್ಶನ’

| Published : Aug 25 2025, 01:00 AM IST

ಎಸ್‌ಡಿಎಂ ಆಯುರ್ವೇದ ಕಾಲೇಜು, ಆಸ್ಪತ್ರೆಯಲ್ಲಿ ‘ಛಾಯಾ ನಿದರ್ಶನ’
Share this Article
  • FB
  • TW
  • Linkdin
  • Email

ಸಾರಾಂಶ

ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗವು ‘ಛಾಯಾ ನಿದರ್ಶನ’ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿ ನಡೆಯಿತು.

ಉಡುಪಿ: ಇಲ್ಲಿನ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ರೋಗನಿದಾನ ಮತ್ತು ವಿಕೃತಿ ವಿಜ್ಞಾನ ವಿಭಾಗವು ‘ಛಾಯಾ ನಿದರ್ಶನ’ ವಿಷಯದ ಮೇಲೆ ರಾಷ್ಟ್ರೀಯ ಮಟ್ಟದ ವಿಚಾರಗೋಷ್ಠಿ ಇತ್ತೀಚೆಗೆ ಏರ್ಪಡಿಸಿತ್ತು.ಕಾಲೇಜು ಪ್ರಾಂಶುಪಾಲೆ ಡಾ.ಮಮತಾ ಕೆ.ವಿ. ಮತ್ತು ವಿಭಾಗದ ಮುಖ್ಯಸ್ಥ ಡಾ. ನಾಗರಾಜ್ ಎಸ್. ಮಾರ್ಗದರ್ಶನದಲ್ಲಿ ವಿಚಾರಗೋಷ್ಠಿ ಯಶಸ್ವಿಯಾಗಿ ಸಂಪನ್ನಗೊಂಡಿತು.

ಉದ್ಘಾಟನಾ ಸಮಾರಂಭದಲ್ಲಿ ಎಸ್.ಡಿ.ಎಂ. ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ ಡಾ. ಮುರಳಿಧರ ಶರ್ಮಾ, ಉಪ ಪ್ರಾಂಶುಪಾಲ ಡಾ. ನಿರಂಜನ್ ರಾವ್, ಸ್ನಾತಕೋತ್ತರ ಡೀನ್ ಡಾ. ಶ್ರೀಕಾಂತ್ ಪಿ. ಮತ್ತು ರೋಗನಿಧಾನ ವಿಭಾಗದ ಪ್ರಾಧ್ಯಾಪಕ ಡಾ. ಪ್ರಸನ್ನ ಎನ್. ಮೊಗಸಾಲೆ ಉಪಸ್ಥಿತರಿದ್ದರು.

ಅಧ್ಯಕ್ಷೀಯ ಭಾಷಣದಲ್ಲಿ ಡಾ. ನಿರಂಜನ್ ರಾವ್ ಅವರು ಎಕ್ಸ್-ರೇಗಳು ವೈದ್ಯಕೀಯ ಕ್ಷೇತ್ರದಲ್ಲಿ ಎಷ್ಟು ಮುಖ್ಯವೆಂಬುದರೊಂದಿಗೆ ಪ್ರಾಯೋಗಿಕ ದೃಷ್ಟಿಕೋನದಿಂದ ಅವುಗಳನ್ನು ಅರ್ಥಮಾಡಿಕೊಳ್ಳುವ ಅಗತ್ಯತೆ ವಿವರಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಮುರಳಿಧರ ಶರ್ಮಾ, ಬೆಳಗಾವಿ ಬಿ.ಎಂ. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಹೇಮಲತಾ ಎಸ್ ಶೇಟ್, ಮಣಿಪಾಲ್ ಹೆಲ್ತ್ ಮ್ಯಾಪ್‌ನ ತಾಂತ್ರಿಕ ಮತ್ತು ವೈದ್ಯಕೀಯ ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಡಾ. ಪ್ರವೀಣ್ ಶಾಸ್ತ್ರಿ ಉಪನ್ಯಾಸಗಳನ್ನು ನೀಡಿದರು.

ಡಾ. ಅರುಣ್ ಕುಮಾರ್ ಎಂ. ಸ್ವಾಗತಿಸಿದರು. ಡಾ. ಸರಿತಾ ಟಿ ಕಾರ್ಯಕ್ರಮದ ಸಂಕ್ಷಿಪ್ತ ವರದಿ ನೀಡಿದರು. ಡಾ. ಸದಾನಂದ ಭಟ್ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ಸಂಶೋಧನಾ ಅಧಿಕಾರಿ ನವೀನ್ ಚಂದ್ರ ಉಪಸ್ಥಿತರಿದ್ದರು. ೧೦೦ಕ್ಕೂ ಅಧಿಕ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಭಾಗವಹಿಸಿದರು.