ಕಾಂಗ್ರೆಸ್‌ನಲ್ಲಿ ಮಾತ್ರ ಸಾಮಾಜಿಕ ನ್ಯಾಯದಡಿ ಅವಕಾಶ

| Published : Nov 07 2025, 01:30 AM IST

ಸಾರಾಂಶ

ನಂಜೇಗೌಡ ಎರಡನೇ ಬಾರಿಗೆ ಕಡಿಮೆ ಮತಗಳ ಅಂತರದಿಂದ ಶಾಸಕನಾಗಿದ್ದರೂ ಸಹ ರಾಜ್ಯದಲ್ಲಿ ನಮ್ಮದೇ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚುವರಿಯಾಗಿ ೨೫೦೦ ಕೋಟಿ ರು.ಗಳನ್ನು ತಂದು ಅಭಿವೃದ್ಧಿ ಮಾಡುತ್ತಿದ್ದಾರೆ.. ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಂಡು ಸಂಘಟಿಸುವುದರ ಮೂಲಕ ನಮ್ಮ ಜೊತೆಯಲ್ಲಿದ್ದವರಿಗೆ ಅವಕಾಶ ಕಲ್ಪಿಸುತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮಾಲೂರು

ಕಾಂಗ್ರೆಸ್‌ನಲ್ಲಿ ಮಾತ್ರ ಸಾಮಾಜಿಕ ನ್ಯಾಯದಡಿ ಅವಕಾಶ ನೀಡಲು ಸಾಧ್ಯ. ತಾಳ್ಮೆ, ಪಕ್ಷ ನಿಷ್ಠೆ, ಪಕ್ಷ ಸಂಘಟಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳುವ ಪಕ್ಷದ ಕಟ್ಟ ಕಡೆಯ ಕಾರ್ಯಕರ್ತನ್ನು ಅವಕಾಶಗಳನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಶಾಸಕ ಕೆ ವೈ ನಂಜೇಗೌಡ ಹೇಳಿದರು. ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ, ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾವು ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಬಿತ್ತಿ ಪತ್ರ ಅಂಟಿಸುವುದು, ಕರ ಪತ್ರ ಹಂಚುವ ಕೆಲಸ ಮಾಡಿಕೊಂಡು ಪಕ್ಷ ಸಂಘಟನೆ ಮಾಡಿದ್ದೇನೆ. ಗ್ರಾಮ ಪಂಚಾಯಿತಿ ಸದಸ್ಯನಿಂದ ರಾಜಕಾರಣ ಪ್ರಾರಂಭ ಮಾಡಿ ಶಾಸಕನಾಗಿದ್ದೇನೆ ಎಂದರು.

ಕಾರ್ಯಕರ್ತರಿಗೂ ಅವಕಾಶ

ಎರಡನೇ ಬಾರಿಗೆ ಕಡಿಮೆ ಮತಗಳ ಅಂತರದಿಂದ ಶಾಸಕನಾಗಿದ್ದರೂ ಸಹ ರಾಜ್ಯದಲ್ಲಿ ನಮ್ಮದೇ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚುವರಿಯಾಗಿ ೨೫೦೦ ಕೋಟಿ ರು.ಗಳನ್ನು ತರಲಾಗಿದೆ. ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಂಡು ಸಂಘಟಿಸುವುದರ ಮೂಲಕ ನನ್ನ ಜೊತೆಯಲ್ಲಿದ್ದವರಿಗೆ ಹಂತಹಂತವಾಗಿ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದರು.

ಪಿಎಲ್‌ಡಿ ಬ್ಯಾಂಕ್ ಹಾಲು ಉತ್ಪಾದಕರ ಒಕ್ಕೂಟ ಡಿಸಿಸಿ ಬ್ಯಾಂಕ್ ಸಹಕಾರಿ ಯೂನಿಯನ್ ನಿರ್ದೇಶಕರುಗಳನ್ನು ಕಾಂಗ್ರೆಸ್ ಪಕ್ಷದಿಂದಲೇ ಆಯ್ಕೆ ಮಾಡಲಾಗಿದೆ. ಸಾಮಾಜಿಕ ನ್ಯಾಯದ ಅಡಿ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರಿಗೆ ಅವಕಾಶಗಳು ಕಲ್ಪಿಸಲಾಗಿದೆ. ಚಿಕ್ಕ ತಿರುಪತಿಯ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಪರಿಶಿಷ್ಟ ಜಾತಿ ಸೇರಿದ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದರು.

ಯೋಜನಾ ಪ್ರಾಧಿಕಾರದ ಹಿಂದಿನ ಅಧ್ಯಕ್ಷ ಮಹಮ್ಮದ್ ನಹೀ ಮುಲ್ಲಾ ಆಡಳಿತ ಅವಧಿಯಲ್ಲಿ ನಗರ ಬಸ್ ನಿಲ್ದಾಣ ನಗರದ ದೊಡ್ಡ ಕೆರೆ ಅಭಿವೃದ್ಧಿ ಭೂಗತ ತೊಟ್ಟಿ ಹಾಗೂ ವರವರ್ತುಲ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ. ಹಿಂದಿನ ಅವಧಿಯಲ್ಲಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿದ ಅಧ್ಯಕ್ಷ, ಸದಸ್ಯರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದರು.

ನಗರದ ಸಮಗ್ರ ಅಭಿವೃದ್ಧಿ

ನೂತನವಾಗಿ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ವಿಜಯ ನರಸಿಂಹ ಅವರ ತಂದೆಯವರು ಸಹ ಈ ಹಿಂದೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡಿದ್ದಾರೆ. ಅವರಂತೆ ಅವರ ಮಗ ಸಹ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಪಕ್ಷ ಸಂಘಟನೆಗೆ ಸಹಕಾರ ನೀಡಿದ್ದರು. ಅವರ ಪಕ್ಷ ನಿಷ್ಠೆ ಗುರುತಿಸಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪ್ರಾಧಿಕಾರಕ್ಕೆ ಅಧ್ಯಕ್ಷರು ಹಾಗೂ ಸದಸ್ಯರಾಗಿ ನೇಮಕಗೊಂಡಿರುವವರು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಿ ಕಾರ್ಯರೂಪಕ್ಕೆ ತರಲು ಮುಂದಾಗಬೇಕು ಎಂದರು.

ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಎಚ್‌ಎಂ ವಿಜಯನರಸಿಂಹ ಮಾತನಾಡಿದರು. ಇದೇ ಸಂದರ್ಭದಲ್ಲಿ ಅಧ್ಯಕ್ಷ ಹೆಚ್‌ಎಂ ವಿಜಯನರಸಿಂಹ ಸದಸ್ಯರಾದ ಭಾಸ್ಕರ್ ಶಬೀರ್ ಅಂಬರೀಶ್ ಯೋಜನಾ ಪ್ರಾಧಿಕಾರ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ವಿಜಯಲಕ್ಷ್ಮಿ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿ ನಾರಾಯಣ್ ಯೋಜನಾ ಪ್ರಾಧಿಕಾರದ ನಿಕಟ ಪೂರ್ವ ಅಧ್ಯಕ್ಷ ಮಹಮ್ಮದ್ ನಯಿಂ ಉಲ್ಲಾ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಕೃಷ್ಣಪ್ಪ ರಾಮಮೂರ್ತಿ ,ಕೆಪಿಸಿಸಿ ಸದಸ್ಯ ಸೋಮಣ್ಣ, ಮತ್ತಿತರರು ಹಾಜರಿದ್ದರು.