ಮಾನಸಿಕ, ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ

| Published : Jun 20 2024, 01:05 AM IST

ಮಾನಸಿಕ, ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೀಡೆ ದೈಹಿಕ ಆರೋಗ್ಯ ಕಾಪಾಡಿದರೆ ಸಾಂಸ್ಕೃತಿಕ ಕಾರ್ಯಕ್ರಮ ಮಾನಸಿಕ ಸಮಸ್ಯೆಗಳನ್ನು ದೂರ ಮಾಡಲಿದೆ. ಹಾಗಾಗಿ ಪ್ರತಿಯೊಬ್ಬರೂ ಕ್ರೀಡಾಸಕ್ತಿಯನ್ನ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸಬೇಕು

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಪ್ರತಿಯೊಬ್ಬ ಮನುಷ್ಯನಲ್ಲಿಯೂ ಸ್ಪರ್ಧಾತ್ಮಕ ಮನೋಭಾವದ ಜೊತೆಗೆ ಪ್ರತಿಭೆಯೂ ಅಡಗಿದ್ದು, ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ ಮಾಡುವುದು ಮುಖ್ಯ ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಸಲಹೆ ಮಾಡಿದರು.

ಬುಧವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಸರಿಸುಮಾರು 18 ಸಾವಿರಕ್ಕೂ ಅಧಿಕ ಮಂದಿ ಸರ್ಕಾರಿ ನೌಕರರು ಇದ್ದು,ರಾಜ್ಯ ಸರ್ಕಾರಿ ನೌಕರ ಸಂಘ ಚಿಕ್ಕಬಳ್ಳಾಪುರ ಜಿಲ್ಲಾ ಘಟಕವು ಈ ಎಲ್ಲರ ಒಳತಿಗಾಗಿ ಕ್ರೀಡಾಕೂಟ ಮತ್ತು ಸ್ಪರ್ಧಾ ಕಾರ್ಯಕ್ರಮಗಳನ್ನು ರೂಪಿಸಿದೆ ಈ ಕಾರ್ಯಕ್ರಮಗಳು ದೈಹಿಕ ಹಾಗೂ ಮಾನಸಿಕ ಸಮತೋಲನ ಕಾಪಾಡಿಕೊಳ್ಳಲು ಇದೊಂದು ಸದಾವಕಾಶವಾಗಿದೆ ಎಂದರು.

ಕ್ರೀಡೆ ದೈಹಿಕ ಆರೋಗ್ಯ ಕಾಪಾಡಿದರೆ ಸಾಂಸ್ಕೃತಿಕ ಕಾರ್ಯಕ್ರಮ ಮಾನಸಿಕ ಸಮಸ್ಯೆಗಳನ್ನು ದೂರ ಮಾಡಲಿದೆ. ಹಾಗಾಗಿ ಪ್ರತಿಯೊಬ್ಬರೂ ಕ್ರೀಡಾಸಕ್ತಿಯನ್ನ ಬೆಳೆಸಿಕೊಂಡು ಕ್ರೀಡೆಗಳಲ್ಲಿ ಭಾಗವಹಿಸಬೇಕು ಮತ್ತು ಇಲ್ಲಿ ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಗಾಯಿತ್ರಿ.ಜಿ, ಸರ್ಕಾರಿ ನೌಕರರ ಸಂಘದ ವಿವಿಧ ತಾಲೂಕುಗಳ ಅಧ್ಯಕ್ಷರುಗಳಾದ ಕೆ.ಎನ್.ಸುಬ್ಬಾರೆಡ್ಡಿ, ಕೆ.ವಿ ನಾರಾಯಣಸ್ವಾಮಿ, ಡಾ.ಡಿ.ಎನ್.ಮಧುಸೂದನ್ ರೆಡ್ಡಿ, ಮತ್ತಿತರರು ಇದ್ದರು.