ಶ್ರೀಶಕ್ತಿ ಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ

| Published : Apr 28 2024, 01:22 AM IST / Updated: Apr 28 2024, 01:23 AM IST

ಶ್ರೀಶಕ್ತಿ ಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪುನರ್‌ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಪ್ರಾರ್ಥನೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿ ನಗರದ ವಿದ್ಯಾ ನಗರ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಶಕ್ತಿ ಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ನಡೆಯಿತು.

ಸಾಮೂಹಿಕ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ, ವಾಚನ ಪ್ರಸಾದ ಸಂಗ್ರಹ ಸ್ಥಳ ಶುದ್ಧಿ ಸುದರ್ಶನ ಹೋಮ, ವಾಸ್ತು ಬಲಿ, ಪ್ರಸಾದ ಬಲಿ, ಪೂಜಾ ಪ್ರಸಾದ ವಿತರಣೆ, ಗಣಪತಿ ಹೋಮ, ಪ್ರಾಯಶ್ಚಿತ್ತ ಹೋಮ, ಹೋಮ ಕಲಶಾಭಿಷೇಕ, ಅನುಜ್ಞಾ ಕಲಶ ಪೂಜೆ, ಬಿಂಬಶುದ್ಧಿ, ಕಲಶಪೂಜೆ-ಕಲಶಾಭಿಷೇಕ, ಶಯ್ಯಪೂಜೆ, ಬಿಂಬ ಶಯ್ಯಾಗಮನ ಪೂಜೆ, ಕಲಶ ಮಂಡಲ ರಚನೆ ವಿಧಿ ವಿಧಾನಗಳು ಎರಡು ದಿನಗಳ ಕಾಲ ಜರುಗಿತು.

ಮೂರನೇಯ ದಿನವಾದ ಏ.26 ರಂದು ನೂತನ ದೇವಾಲಯದಲ್ಲಿ ಶ್ರೀ ಶಕ್ತಿ ಗಣಪತಿ ದೇವರ ಪುನರ್ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ ಪೇರಾಜೆ ಅವರ ನೇತೃತ್ವದಲ್ಲಿ ಸಂಪನ್ನಗೊಂಡಿತು. ಬೆಳಗ್ಗೆ ಗಣಪತಿ ಹೋಮ, ಬ್ರಹ್ಮ ಕಲಶ ಪೂಜೆ, ಮಿಥುನ ಲಗ್ನದಲ್ಲಿ ಪ್ರತಿಷ್ಠೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಾರ್ಥನೆ, ಪ್ರಸಾದ ವಿತರಣೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಸೇರಿದಂತೆ ನೂರಾರು ಭಕ್ತರು ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ವಿಧಿ ವಿಧಾನಗಳಲ್ಲಿ ಪಾಲ್ಗೊಂಡಿದ್ದರು.

ದೇವಾಲಯ ಸಮಿತಿ ಅಧ್ಯಕ್ಷ ಸಿ.ಎಂ.ಕಿಶೋರ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.