ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏಪ್ರಿಲ್ 12 ಮತ್ತು 13ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ಎಚ್ ವೇಣುಕುಮಾರ್ ತಿಳಿಸಿದರು.ನಗರದ ಪತ್ರಿಕಾ ಭವನದ ಸಭಾಂಗಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸರ್ಕಾರಿ ಕಲಾ, ವಿಜ್ಞಾನ ಕಾಲೇಜುಗಳ ಮೈದಾನ ಹಾಗೂ ಎಮ್ ಸಿಇ ಕಾಲೇಜಿನ ಮೈದಾನದಲ್ಲಿ ಎರಡು ದಿನಗಳ ಕಾಲ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಆದಿಚುಂಚನಗಿರಿ ಹಾಸನ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡರ ಆಶೀರ್ವಾದದೊಂದಿಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ವಿಧಾನಸಭೆ ಸಭಾಪತಿ ಯು.ಟಿ ಖಾದರ್ ಉಪಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಹಕಾರ ಸಚಿವ ಕೆ. ಎನ್ ರಾಜಣ್ಣ ಕ್ರೀಡಾಕೂಟ ಉದ್ಘಾಟನೆ ನೆರವೇರಿಸುವರು ಎಂದರು.ಸಂಸದ ಶ್ರೇಯಸ್ ಪಟೇಲ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದು, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಆಶಯ ನುಡಿಗಳ ಆಡಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಟಿ.ವಿ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್ .ಬಿ ಮದನ ಗೌಡ ಪ್ರಾಸ್ತವಿಕ ನುಡಿಗಳನ್ನಾಡಲಿದ್ದಾರೆ. ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್ ವೇಣುಕುಮಾರ್ ಪ್ರೇರಣಾ ನುಡಿಗಳನ್ನಾಡಲಿದ್ದಾರೆ. ಶಾಸಕರಾದ ಕೆ.ಎಂ ಶಿವಲಿಂಗೇಗೌಡ, ಸಿ.ಎನ್ ಬಾಲಕೃಷ್ಣ ,ಎಚ್.ಪಿ ಸ್ವರೂಪ್, ನಗರಸಭೆ ಅಧ್ಯಕ್ಷ ಚಂದ್ರೇಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಎ ಗೋಪಾಲಸ್ವಾಮಿ, ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತ, ಜಿಲ್ಲಾ ಪಂಚಾಯ್ತಿ ಸಿಇಒ ಬಿ.ಆರ್ ಪೂರ್ಣಿಮಾ, ಡಿಸಿಎಫ್ ಸೌರಭ್ ಕುಮಾರ್, ನಗರಸಭೆ ಆಯುಕ್ತ ರಮೇಶ್, ಕೆಯುಡ್ಬ್ಲಿಯೊ ಜೆ ಅಧ್ಯಕ್ಷ ಬಿ.ವಿ ಮಲ್ಲಿಕಾರ್ಜುನಯ್ಯ ಇತರೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.ಏಪ್ರಿಲ್ 13ರಂದು ಸಮಾರೋಪ ಸಮಾರಂಭ ಜರುಗಲಿದ್ದು, ಮಾಜಿ ಸಚಿವ ಎಚ್.ಡಿ ರೇವಣ್ಣ ಬಹುಮಾನ ವಿತರಣೆ ಮಾಡಲಿದ್ದಾರೆ. ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ವಿ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಚ್.ವೇಣುಕುಮಾರ್ ಧನ್ಯತಾ ನುಡಿಗಳನ್ನಾಡಲಿದ್ದಾರೆ.
ಶಾಸಕರಾದ ಸ್ವರೂಪ್ ಪ್ರಕಾಶ್, ಎಚ್. ಕೆ ಸುರೇಶ್, ಸಿಮೆಂಟ್ ಮಂಜು, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ಟಿ ದ್ಯಾವೇಗೌಡ, ಎಚ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ನಾಗರಾಜ್ , ರಾಜ್ಯ ವಕ್ಕಲಿಗರ ಸಂಘದ ನಿರ್ದೇಶಕ ಎಸ್. ಎಸ್ ರಘು ಗೌಡ, ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಿ ಕೃಷ್ಣೇಗೌಡ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಾಗೂರು ಮಂಜೇಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ಉಪ ನಿರ್ದೇಶಕಿ ಮೀನಾಕ್ಷಮ್ಮ, ರಾಜ್ಯ ಸಣ್ಣ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಆರ್. ಕೆಂಚೇಗೌಡ, ರಾಜ್ಯ ಕಾರ್ಯಕಾರಿ ಸಮಿತಿ ವಿಶೇಷ ಆಹ್ವಾನಿತ ಸದಸ್ಯ ರವಿ ನಾಗಲಗೂಡು, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಬಾಳ್ಳು ಗೋಪಾಲ್ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.ಕ್ರಿಕೆಟ್ ಪಂದ್ಯಾವಳಿಗೆ ರಾಜ್ಯದ ವಿವಿಧ ಜಿಲ್ಲೆಗಳ 23 ತಂಡಗಳು ಭಾಗವಹಿಸಲಿದ್ದು 400ಕ್ಕೂ ಹೆಚ್ಚು ಕ್ರೀಡಾಪಟುಗಳಿಗೆ ಎರಡು ದಿನಗಳ ಕಾಲ ಊಟ ಹಾಗೂ ವಸತಿ ಸೌಲಭ್ಯ ಒದಗಿಸಲಾಗಿದೆ. ಪ್ರಥಮ, ದ್ವಿತೀಯ, ತೃತೀಯ ನಗದು ಬಹುಮಾನದೊಂದಿಗೆ ಟ್ರೋಫಿ, ಪಂದ್ಯ ಶ್ರೇಷ್ಠ, ಉತ್ತಮ ಬ್ಯಾಟ್ಸ್ಮನ್, ಕ್ಷೇತ್ರ ರಕ್ಷಕ ಹಾಗೂ ಬೌಲರ್‌ಗಳಿಗೆ ಪ್ರತ್ಯೇಕ ಟ್ರೋಫಿಗಳನ್ನು ವಿತರಿಸಲಾಗುವುದು. ಕ್ರಿಕೆಟ್ ಪಂದ್ಯಾವಳಿಯ ಪ್ರೆಸ್‌ಕ್ಲಬ್ ಹಾಸನ್ ಯೂಟ್ಯೂಬ್ ಚಾನಲ್ ಹಾಗೂ ಫೇಸ್‌ಬುಕ್ ಪೇಜ್‌ನಲ್ಲಿ ನೇರ ಪ್ರಸಾರವನ್ನು ವೀಕ್ಷಿಸಬಹುದಾಗಿದೆ ಎಂದರು. ಅಂದು ಸಮಯಕ್ಕೆ ಸರಿಯಾಗಿ ಜಿಲ್ಲೆಯ ಎಲ್ಲಾ ಪತ್ರಕರ್ತರು ಆಗಮಿಸಿ, ಪಂದ್ಯಾವಳಿಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಕೆ.ಆರ್. ಮಂಜುನಾಥ್, ರಾಷ್ಟ್ರೀಯ ಮಂಡಳಿ ಸದಸ್ಯ ಜಿ ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಬಿ.ಸಿ ಶಶಿಧರ್, ಉಪಾಧ್ಯಕ್ಷ ಎಚ್. ಟಿ. ಮೋಹನ್ ಕುಮಾರ್, ಕಾರ್ಯದರ್ಶಿ ಸಿ.ಬಿ.ಸಂತೋಷ್, ಖಜಾಂಚಿ ಕುಮಾರ್ ಇದ್ದರು.